ಮಾ.17ಕ್ಕೆ ಚುನಾವಣಾ ರಾಜಕೀಯದಿಂದ ನಿವೃತ್ತಿ: ಸಂಸದ ಶ್ರೀನಿವಾಸ್ ಪ್ರಸಾದ್ ಘೋಷಣೆ
ಚುನಾವಣಾ ರಾಜಕೀಯ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಮಾ. 17 ರಂದು ಚುನಾವಣಾ ರಾಜಕೀಯದಿಂದ ನಿವೃತ್ತರಾಗಲಿದ್ದಾರೆ. ಅಂದು ಅವರ ಅಭಿಮಾನಿಗಳಿಂದ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಮೈಸೂರು (ಮಾ.01): ಚುನಾವಣಾ ರಾಜಕೀಯ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಮಾ. 17 ರಂದು ಚುನಾವಣಾ ರಾಜಕೀಯದಿಂದ ನಿವೃತ್ತರಾಗಲಿದ್ದಾರೆ. ಅಂದು ಅವರ ಅಭಿಮಾನಿಗಳಿಂದ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀನಿವಾಸಪ್ರಸಾದ್, ಚುನಾವಣಾ ರಾಜಕೀಯ ಸುವರ್ಣ ಮಹೋತ್ಸವ ಮತ್ತು ಅಭಿನಂದನಾ ಸಮಾರಂಭವು ಮಾ. 17ರಂದು ಬೆಳಗ್ಗೆ 11 ಗಂಟೆಗೆ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಸಾಹಿತಿ ಪ್ರಧಾನ ಗುರುದತ್ತ ಸಂಪಾದಕತ್ವದ ‘ಸ್ವಾಭಿಮಾನಿ ನೆನಪುಗಳು’ ಅಭಿನಂದನಾ ಗ್ರಂಥವನ್ನು ಸಾಹಿತಿ ಚಂದ್ರಶೇಖರ ಕಂಬಾರ ಬಿಡುಗಡೆಗೊಳಿಸುವುದಾಗಿ ಹೇಳಿದರು.
ನರೇಂದ್ರ ಮೋದಿ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸೋಣ: ಶಾಸಕ ಯಶ್ಪಾಲ್ ಸುವರ್ಣ
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಧ್ಯಕ್ಷತೆ ವಹಿಸುವರು. ಅಭಿನಂದನಾ ಸಮಿತಿ ಅಧ್ಯಕ್ಷ ಪಿ.ಜಿ.ಆರ್. ಸಿಂಧ್ಯಾ ಪಾಲ್ಗೊಳ್ಳುವರು. 1974ರ ಮಾರ್ಚ್ 17ರಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದರೊಂದಿಗೆ ಚುನಾವಣಾ ರಾಜಕಾರಣ ಆರಂಭಿಸಿದೆ. ಈ ಸವಿನೆನಪಿಗಾಗಿ ಅಭಿಮಾನಿಗಳು ಸಮಾರಂಭ ಆಯೋಜಿಸಿದ್ದಾರೆ. ಅಂದು, ಚುನಾವಣೆ ನಿವೃತ್ತಿ ಘೋಷಣೆ ಮಾಡಲಿದ್ದೇನೆ. ಬಳಿಕ ಯಾವುದೇ ರಾಜಕೀಯ ಪಕ್ಷದ ಜೊತೆ ಮುಂದುವರಿಯುವುದಿಲ್ಲ; ಸ್ಪರ್ಧಿಸುವುದಿಲ್ಲ. ಬಿಜೆಪಿ ಬೆಂಬಲಿಸುವಂತೆ ಕೇಳಿಕೊಳ್ಳುತ್ತೇನೆಯೇ ಹೊರತು, ಬಹಿರಂಗ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಪುಸ್ತಕ ರೂಪದಲ್ಲಿ ಅನುಭವ ದಾಖಲು: ‘ಏಳು ಮಂದಿ ಪ್ರಧಾನಿಗಳ ಜೊತೆ ಕೆಲಸ ಮಾಡಿದ್ದೇನೆ. ನನ್ನ ಅನುಭವಗಳನ್ನು ಮತ್ತೊಂದು ಪುಸ್ತಕದಲ್ಲಿ ಬರೆಯುತ್ತಿದ್ದೇನೆ. ಲೋಕಸಭೆ ಚುನಾವಣೆ ಮುಗಿದ ಬಳಿಕ, ಸಂಸತ್ತಿನಲ್ಲಿ ಮಾತನಾಡಿದ ಬಗ್ಗೆಯೂ ಪುಸ್ತಕ ಹೊರತರುತ್ತೇನೆ. ಅಭಿನಂದನಾ ಗ್ರಂಥದಲ್ಲಿ ನನ್ನ ಲೇಖನವೂ ಇದೆ ಎಂದು ಅವರು ತಿಳಿಸಿದರು. ರಾಜಕಾರಣದಲ್ಲಿ ಪಾರದರ್ಶಕ ಹಾಗೂ ಪ್ರಾಮಾಣಿಕವಾಗಿ ಮತ್ತು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ. ಸಾರ್ಥಕ ಹೋರಾಟ ಮಾಡಿದ್ದೇನೆ.
ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ: ಡಾ.ನಾಗತಿಹಳ್ಳಿ ಚಂದ್ರಶೇಖರ್
ಪಟ್ಟಭದ್ರ ಹಿತಾಸಕ್ತಿಗಳು ನೀಡಿದ್ದ ತೊಂದರೆಗಳನ್ನೆಲ್ಲಾ ಎದುರಿಸಿದೆ. ಇದೆಲ್ಲವನ್ನೂ ಪುಸ್ತಕದಲ್ಲಿ ದಾಖಲಿಸಲಿದ್ದೇನೆ ಎಂದರು. ನನಗೀಗ 77 ವರ್ಷ. ಸಾಕಷ್ಟು ಜರ್ಜರಿತನಾಗಿದ್ದೇನೆ. ಹಲವು ಏಳುಬೀಳುಗಳನ್ನು ಕಂಡಿದ್ದೇನೆ. ಆರೋಗ್ಯವೂ ಸರಿ ಇಲ್ಲ. ರಾಜಕೀಯದಿಂದ ದೂರ ಉಳಿಯುವ ನಿರ್ಧಾರ ಕೈಗೊಂಡಿದ್ದೇನೆ. ರಾಜಕೀಯವಾಗಿ ತೀರ್ಮಾನ ಕೈಗೊಂಡಾಗ, ಆ ಪಕ್ಷಕ್ಕೆ ಆಸ್ತಿಯಾಗಿದ್ದೇನೆಯೇ ಹೊರತು ಹೊರೆಯಾಗಲಿಲ್ಲ. ಆ ತೃಪ್ತಿ ನನಗಿದೆ ಎಂದು ಅವರು ಹೇಳಿದರು.