Asianet Suvarna News Asianet Suvarna News

ಕೊನೆಗೂ ಸಚಿವ ಎಂಟಿಬಿ ನಾಗರಾಜ್‌ಗೆ ಸಿಕ್ತು ಜಿಲ್ಲಾ ಉಸ್ತುವಾರಿ

* ಕೊನೆಗೂ ಎಂಟಿಬಿ ನಾಗರಾಜ್‌ಗೆ ಸಿಕ್ತು ಜಿಲ್ಲಾ ಉಸ್ತುವಾರಿ
* ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಹೊರಬಿತ್ತು ಆದೇಶ
* ಪೌರಾಡಳಿತ ಸಚಿವರಾಗಿರುವ ಎಂಟಿಬಿ ನಾಗರಾಜ್

MTB Nagaraj Is bengaluru rural In Charge minister rbj
Author
Bengaluru, First Published Jun 23, 2021, 4:22 PM IST
  • Facebook
  • Twitter
  • Whatsapp

ಬೆಂಗಳೂರು, (ಜೂನ್.23) : ಕೊನೆಗೂ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಜಿಲ್ಲಾ ಉಸ್ತುವಾರಿ ವಹಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಸಚಿವ ಎಂಟಿಬಿ ನಾಗರಾಜ್ ನೇಮಕ ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಲತಿ ಸಿ ಇಂದು (ಬುಧವಾರ) ಅಧಿಸೂಚನೆ ಹೊರಡಿಸಿದ್ದಾರೆ.

ಎಂಟಿಬಿ ಬಿಟ್ಟು ಮಿತ್ರ ಮಂಡಳಿ ಒಗ್ಗಟ್ಟು : ದೂರ ಇಟ್ಟು ಅಚ್ಚರಿ

ಸಿಎಂ ಯಡಿಯೂರಪ್ಪ ಅವರ ದಿನಾಂಕ 23-06-2021ರ ಟಿಪ್ಪಣಿಯಂತೆ ನಾಗರಾಜು ಎನ್ ( ಎಂಟಿಬಿ) ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ದೇಶದವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.

ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಆದ್ರೆ, ಹೊಸಕೋಟೆ ಉಪಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಅವರ ವಿರುದ್ಧ ಸೋಲು ಕಂಡಿದ್ದರು. ಆದರೂ ಅವರಿಗೆ ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡಲಾಗಿತ್ತು. ಆದ್ರೆ, ಯಾವ ಜಿಲ್ಲೆಯ ಉಸ್ತುವಾರಿಯನ್ನೂ ಕೊಟ್ಟಿರಲಿಲ್ಲ. ಇದೀಗ ಬೆಂಗಳೂರು ಗ್ರಾಮಾಂತ ಜಿಲ್ಲೆಯನ್ನ ಅವರಿಗೆ ನೀಡಲಾಗಿದೆ. 

Follow Us:
Download App:
  • android
  • ios