Muda case: ಬಿಜೆಪಿ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ - ಹರೀಶ್ ಪೂಂಜಾ ಭಾಷಣ

ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ರಾಜ್ಯಪಾಲರ‌ ಆದೇಶ ಹೈಕೋರ್ಟ್ ಎತ್ತಿ ಹಿಡಿದಿದ್ದು ತಕ್ಷಣ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಂಗಳೂರು ಬಿಜೆಪಿ ಪ್ರತಿಭಟನೆ ನಡೆಸಿ ಆಗ್ರಹಿಸಿದೆ.

muda case belthangady mla harish poonja outraged gainst cm siddaramaiah rav

ಮಂಗಳೂರು (ಸೆ.24): ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ರಾಜ್ಯಪಾಲರ‌ ಆದೇಶ ಹೈಕೋರ್ಟ್ ಎತ್ತಿ ಹಿಡಿದಿದ್ದು ತಕ್ಷಣ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಂಗಳೂರು ಬಿಜೆಪಿ ಪ್ರತಿಭಟನೆ ನಡೆಸಿ ಆಗ್ರಹಿಸಿದೆ.

ಇಂದು ಮುಡಾ ಹಗರಣದ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು, ಬಿಜೆಪಿಯ ಹೋರಾಟಕ್ಕೆ ಇವತ್ತು ಜಯ ಸಿಕ್ಕಿದೆ. ಸಿದ್ದರಾಮಯ್ಯನವರು ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ ಎಂದು ಅನೇಕರು ಭಾಷಣ ಮಾಡುತ್ತಿದ್ದರು. ಆ ಮಾತನ್ನು ಉಳಿಸಿಕೊಳ್ಳುವ ಪ್ರಾಮಾಣಿಕತೆ ಇದ್ರೆ ಸಿ.ಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯರೇ ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ, ಕೇಜ್ರಿವಾಲ್ ಸ್ಥಿತಿ ಬರೋದು ಬೇಡ: ಪ್ರತಾಪ್ ಸಿಂಹ

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ ನೋಡೋಣ.  ರಾಹುಲ್ ಗಾಂಧಿ ಅಮೆರಿಕಕ್ಕೆ ಹೋಗಿ ಭ್ರಷ್ಟಾಚಾರದ ಬಗ್ಗೆ ಉಪನ್ಯಾಸ ಮಾಡ್ತಾರೆ. ರಾಹುಲ್ ಗಾಂಧಿಗೆ ನೈತಿಕತೆ ಇದ್ರೆ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ಅಲ್ಲಿವರೆಗೆ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಮುಡಾ ಹಗರಣ: ನಿಮಗೆ ಕಿಂಚಿತ್ ಮಾನ-ಮರ್ಯಾದೆ ಇದ್ರೆ ರಾಜೀನಾಮೆ ಕೊಡಿ - ಸಿಎಂ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಕಿಡಿ

ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನೆಲೆ ಬಳಿಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದೆ.

Latest Videos
Follow Us:
Download App:
  • android
  • ios