Asianet Suvarna News Asianet Suvarna News

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಗೌರವಕ್ಕೆ ಧಕ್ಕೆ ತರಲು ಪಿತೂರಿ: ಸಚಿವ ಮಹದೇವಪ್ಪ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ. ಕೋಮುವಾದಿಗಳು ಅವರ ಗೌರವಕ್ಕೆ ಧಕ್ಕೆ ತರಲು ಪಿತೂರಿ ನಡೆಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. 

Muda Scam Conspiracy to tarnish CM Siddaramaiahs honor Says Minister HC Mahadevappa gvd
Author
First Published Aug 25, 2024, 4:18 PM IST | Last Updated Aug 25, 2024, 4:18 PM IST

ಚಾಮರಾಜನಗರ (ಆ.25): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ. ಕೋಮುವಾದಿಗಳು ಅವರ ಗೌರವಕ್ಕೆ ಧಕ್ಕೆ ತರಲು ಪಿತೂರಿ ನಡೆಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶಾಸಕರು, ಮಂತ್ರಿಗಳು ಹಾಗೂ ಹೈಕಮಾಂಡ್ ಸಿದ್ದರಾಮಯ್ಯ ಪರ ಇದ್ದಾರೆ, ಸಿದ್ದರಾಮಯ್ಯ ಯಾವ ತಪ್ಪು ಕೂಡ ಮಾಡಿಲ್ಲ. ಜೆಡಿಎಸ್, ಬಿಜೆಪಿ ರಾಜಭವನವನ್ನು ರಾಜಕೀಯ ಅಂಗಳ ಮಾಡಿಕೊಂಡಿವೆ. ಸಂವಿಧಾನ ಉಲ್ಲಂಘನೆ ‌ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯ. 

ಪ್ರಾಮಾಣಿಕ ರಾಜಕಾರಣಿ ಸಿದ್ದರಾಮಯ್ಯ ಮೇಲೆ ಕಳಂಕ, ಗೌರವಕ್ಕೆ ಧಕ್ಕೆ ತರಲು ಕೋಮುವಾದಿಗಳು, ಮತೀಯವಾದಿಗಳಿಂದ ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿದರು. ಮುಡಾ ಪ್ರಕರಣದಲ್ಲಿ ಹಣಕಾಸಿನ ಅವ್ಯವಹಾರ ಆಗಿಲ್ಲ, ಸ್ವಜನ ಪಕ್ಷಪಾತ ಆಗಿಲ್ಲ, ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಗ್ಯಾರಂಟಿ ಕಾರ್ಯಕ್ರಮಗಳಿಂದ ಬಡವರಿಗೆ ವರಮಾನ ಬರುತ್ತಿದೆ, ಇದನ್ನು ಕಂಡು ಬಡವರ ಪರ ಕೆಲಸ ಮಾಡಬಾರದೆಂದು ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರ, ಬಿಜೆಪಿ, ಜೆಡಿಎಸ್‌ಗೆ ಸಹಿಸಲು ಆಗುತ್ತಿಲ್ಲ ಎಂದು ಹೇಳಿದರು.

ಆನೆ ಹೋಗುತ್ತಿರುತ್ತೆ, ನರಿಯೊಂದು ಅದೇನೋ ಬೀಳುತ್ತೇ ಅಂಥ ಕಾಯ್ತಿರುತ್ತೆ: ಸಚಿವ ಮಹದೇವಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರು 135 ಜನರನ್ನು ಆರಿಸಿ ಕಳುಹಿಸಿರುವುದು ರಾಜೀನಾಮೆ ಕೊಡುವುದಕ್ಕೇ? ರಾಜೀನಾಮೆ ಕೊಡಲು ಏನಾಗಿದೆ? ವಿಜಯೇಂದ್ರ ಹೇಳಿದ ತಕ್ಷಣ ರಾಜೀನಾಮೆ ಕೊಡಕ್ಕಾಗತ್ತಾ, ಅವರೆಲ್ಲ ಏನೇನು ಮಾಡಿದ್ದಾರೆ. ಬಿಎಸ್‌ವೈ, ವಿಜಯೇಂದ್ರ, ನಿರಾಣಿ, ಜನಾರ್ದನ ರೆಡ್ಡಿ ಏನೇನ್ ಮಾಡಿದ್ದಾರೆ, ಅವರೆಲ್ಲರ ಮೇಲೂ ಕೇಸ್‌ಗಳಿದೆಯಲ್ಲಾ, ಪ್ರಾಸಿಕ್ಯೂಷನ್ ಇದೆಯಲ್ಲಾ ಅದನ್ನು ಅವರು ಶುದ್ಧಿ ಮಾಡಿಕೊಳ್ಳಲಿ, ಅವರ ಮನೆಯನ್ನು ಮೊದಲು ಸ್ವಚ್ಛವಾಗಿಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದರು.

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ₹೧ ಕೋಟಿ ಭರವಸೆ: ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣ, ಹೋರಾಟ ಹಾಗೂ ಸಂಘಟನೆಯನ್ನು ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಸಂತೇಮರಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ಡಾ.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಂಸದರಿಗೆ ಅಭಿನಂದನಾ ಹಾಗೂ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ಉದ್ಘಾಟನೆ ಮಾಡಿ ಮಾತನಾಡಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಜಿಲ್ಲೆಯಲ್ಲಿದ್ದು, ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಮೇಳ, ಯುವಕರಿಗೆ ಉದ್ಯೋಗ ಮೇಳ ಆಯೋಜನೆಗಳನ್ನು ಮಾಡುವ ಮೂಲಕ ಜಿಲ್ಲೆಯಲ್ಲಿ ರೈಲು, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡಿ ಕೆಲಸವನ್ನು ಮಾಡುವ ಯೋಜನೆಗಳನ್ನು ಸಂಸದರು ಮಾಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಗುಂಡು ಕಲ್ಲು ಇದ್ದ ಹಾಗೆ ಇದ್ದಾರೆ: ಸಚಿವ ಮಹದೇವಪ್ಪ

ಸೆ.೧೫ ರಂದು ರಾಜ್ಯಾದ್ಯಂತ್ಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯದ ಬೀದರ್‌ನಿಂದ ಚಾಮರಾಜನಗರ ವರೆಗಿನ ಮಾನವ ಸರಪಳಿ ಮಾಡುವ ಮೂಲಕ ವಿಶೇಷ ಕಾರ್ಯಕ್ರಮವನ್ನು ಮಾಡಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆಗಳನ್ನು ಮಾಡಲಾಗುತ್ತದೆ. ಆದರಿಂದ ಸಂವಿಧಾನ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ಮೂಲಕ ಕೆಲಸಗಳು ಮತ್ತಷ್ಟು ನಡೆಯಬೇಕಾಗಿದೆ ಎಂದು ತಿಳಿಸಿದರು. ಜತೆಗೆ ಸಂತೇಮರಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿ ಖಾಲಿ ನಿವೇಶನದಲ್ಲಿ ವಾಣಿಜ್ಯ ಸಂಕೀರ್ಣ ಅಂಗಡಿ ಮಳಿಗೆಗಳನ್ನು ಸೇರಿರದಂತೆ ಇತರೆ ಅಭಿವೃದ್ದಿ ಕೆಲಸಗಳ ನಿರ್ಮಾಣ ಮಾಡಲು ₹೧ ಕೋಟಿ ವೆಚ್ಚವನ್ನು ನೀಡುವ ಭರವಸೆ ನೀಡಿದರು.

Latest Videos
Follow Us:
Download App:
  • android
  • ios