Asianet Suvarna News Asianet Suvarna News

ಮುಡಾ ಹಗರಣ: ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ಮುಂದುವರಿಯುತ್ತೆ: ಯದುವೀರ್ ಒಡೆಯರ್

ರಾಜ್ಯದಲ್ಲಿ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ. ರಸ್ತೆ ಗುಂಡಿ ಮುಚ್ಚಲು ಸಹ ಸರ್ಕಾರದ ಬಳಿ ಹಣವಿಲ್ಲ ಎಂದು ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

MUDA scam mysuru kodagu mp yaduveer wadiyar outraged against karnataka government at mysuru rav
Author
First Published Jul 12, 2024, 2:02 PM IST | Last Updated Jul 12, 2024, 4:09 PM IST

ಮೈಸೂರು (ಜು.12): ರಾಜ್ಯದಲ್ಲಿ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ. ರಸ್ತೆ ಗುಂಡಿ ಮುಚ್ಚಲು ಸಹ ಸರ್ಕಾರದ ಬಳಿ ಹಣವಿಲ್ಲ ಎಂದು ಮೈಸೂರು ಕೊಡಗು ಸಂಸದ ಯದುವೀರ್ ಒಡೆಯರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮುಡಾ ಹಗರಣ(MUDA scam) ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದರು, ಒಂದು ಕಡೆ ಹಗರಣಗಳು ಒಂದಾದಮೇಲೊಂದರಂತೆ ನಡೆಯುತ್ತಿವೆ. ಇತ್ತ ಅಭಿವೃದ್ಧಿ ನಿಂತು ಹೋಗಿದೆ, ರಸ್ತೆ ಗುಂಡಿಮುಚ್ಚಲು ಸಹ ಹಣವಿಲ್ಲ. ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಕಾನೂನು ಸಚಿವನಾಗಿ ಹೇಳ್ತೇನಿ ಸಿಎಂ ಮನೆಯವರಿಗೆ ಸೈಟ್ ಮಂಜೂರು ಮಾಡಿಕೊಂಡಿಲ್ಲ: ಎಚ್‌ಕೆ ಪಾಟೀಲ್

ಇನ್ನು ರಾಜ್ಯಾದ್ಯಂತ ಡೆಂಗ್ಯೂ ಜ್ವರ ಹರಡಿದ್ದು, ಜನಸಾಮಾನ್ಯರು ಬಲಿಯಾಗುತ್ತಿದ್ದರೂ ಯಾವುದೇ ಅಗತ್ಯಕ್ರಮ ಕೈಗೊಳ್ಳುತ್ತಿಲ್ಲ.  ಡೆಂಗ್ಯೂ ಬಗ್ಗೆ ರಾಜ್ಯಸರ್ಕಾರ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿಲ್ಲ. ಮೈಸೂರು ಸಂಸ್ಥಾನದಿಂದ ಇಂದಿನವರೆಗೂ ನಮ್ಮ ರಾಜ್ಯ ಪ್ರಗತಿಪರವಾಗಿತ್ತು. ಆದರೆ ಈಗ ನಮ್ಮ ರಾಜ್ಯ ಆರ್ಥಿಕವಾಗಿ ಹಿಂದುಳಿಯುತ್ತಿದೆ. ಈ ಭ್ರಷ್ಟ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕಿಡಿಕಾರಿದರು. 

ಬಿ ನಾಗೇಂದ್ರರನ್ನ ಇಡಿ ವಶಕ್ಕೆ ಪಡೆದ ಬಗ್ಗೆ ನನಗೆ ಈಗ ಮಾಹಿತಿ ಬಂದಿದೆ: ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ

ಸಿಎಂ ಸಿದ್ದರಾಮಯ್ಯ ಚುನಾವಣೆ ವೇಳೆ ಮೈಸೂರು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ತಾರೆ. ಆದರೆ ಭ್ರಷ್ಟಾಚಾರ ಕಡಿಮೆ ಮಾಡಲು ಅದೇ ಪ್ರತಿಷ್ಠೆ ತೋರುತ್ತಿಲ್ಲ. ಮುಡಾ ಹಗರಣವನ್ನ ಸಿಬಿಐಗೆ ವಹಿಸಬೇಕು. ಈ ಬಗ್ಗೆ ಸಂಪೂರ್ಣ ತನಿಖೆ ಆಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

Latest Videos
Follow Us:
Download App:
  • android
  • ios