ಬೆಂಗಳೂರು(ಮಾ. 13)  ಕಲಾಪದಲ್ಲಿ ಸಿದ್ದರಾಮಯ್ಯರನ್ನು ಹೊಗಳಿದ ಬಿಜೆಪಿ ಶಾಸಕರೊಬ್ಬರು ಹಾಡಿ ಹೊಗಳಿದ್ದಾರೆ.   ಸಿದ್ದರಾಮಯ್ಯ ಒಳ್ಳೆಯ ಕಾರ್ಯಕ್ರಮ ತಂದಿದ್ದಾರೆ ಎಂದು ಬಿಜೆಪಿ ಶಾಸಕ‌ ಎಂ.ಪಿ. ಕುಮಾರಸ್ವಾಮಿ ಗುಣಗಾನ ಮಾಡಿದ್ದಾರೆ.

ಸಿದ್ದರಾಮಯ್ಯ ಎಸ್ಸಿ/ಎಸ್ಟಿ ಸಮಯದಾಯಕ್ಕೆ ಉತ್ತಮ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಕಾಮಗಾರಿಗಳ ಟೆಂಡರ್ ನಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಯೋಜನೆ ತಂದಿದ್ದಾರೆ. ಸಿದ್ದರಾಮಯ್ಯ ತಂದ ಈ ಕಾರ್ಯಕ್ರಮದಿಂದ ನಮ್ಮ ಸಮಯದಾಯಗಳ ಬಹಳಷ್ಟು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಶ್ಲಾಘಿಸಿದರು.

ಕೆಪಿಸಿಸಿಗೆ ಡಿಕೆಶಿ ಬಾಸ್; ಇಲ್ಲೂ ಗೆದ್ದ ಸಿದ್ದು ತಂತ್ರಗಾರಿಕೆ

ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯ ಅವರನ್ನು ಕೊಂಡಾಡಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತಿಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಯಿತು.