ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಮನಸ್ಸಿಲ್ಲ: ಮುಖ್ಯಮಂತ್ರಿ ಚಂದ್ರು
ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಿ ಅಭಿವೃದ್ಧಿ ಮಾಡಬೇಕು ಎಂಬ ಮನಸ್ಸು ಸರ್ಕಾರಕ್ಕೆ ಇಲ್ಲದಿರುವುದು ದುರಂತವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದರು.
ಗುಬ್ಬಿ (ಆ.31): ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಿ ಅಭಿವೃದ್ಧಿ ಮಾಡಬೇಕು ಎಂಬ ಮನಸ್ಸು ಸರ್ಕಾರಕ್ಕೆ ಇಲ್ಲದಿರುವುದು ದುರಂತವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ ನಡೆಸಿದರು. ಪಟ್ಟಣದ ಎಸ್‌ಎಂ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಗುಬ್ಬಿ ತಾಲೂಕು ಗ್ರಾಮ ಸಂಪರ್ಕ ಅಭಿಯಾನ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು ಅವರಿಗೆ ರಾಜ್ಯದ ಅಭಿವೃದ್ಧಿ ಮುಖ್ಯವಾಗಿಲ್ಲ ಎಂದು ಹೇಳಿದರು.
ಎಎಪಿ ಗ್ರಾಮೀಣ ಭಾಗಗಳ ಅಭಿವೃದ್ಧಿ, ಬಡವರ ಕಲ್ಯಾಣ, ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಪ್ರಣಾಳಿಕೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದ್ದು, ಈಗಾಗಲೇ ದೆಹಲಿ ಮತ್ತು ಪಂಜಾಬ್‌ನಲ್ಲಿ ನಮ್ಮ ಪಕ್ಷ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. ತಾಲೂಕಿನಲ್ಲಿಯೂ ಸಹ ಬದಲಾವಣೆ ತರಬೇಕು ಎಂದರೆ ನಿಮ್ಮೆಲ್ಲರ ಸಹಕಾರ ಅವಶ್ಯಕತೆ ಇದೆ ಎಂದರು. ಎಎಪಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿ ಭ್ರಷ್ಟಾಚಾರದ ಕಳೆಯನ್ನು ತೆಗೆಯಬೇಕು ಎಂದರೆ ಅದು ಪೊರಕೆಯಿಂದ ಮಾತ್ರ ಸಾಧ್ಯ. ಹದಗೆಟ್ಟಿರುವ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸಲು ಎಚ್ಚೆತ್ತುಕೊಳ್ಳದಿದ್ದರೆ ಮೂರು ಪಕ್ಷಗಳ ಹೈಟೆಕ್ ಶೋಷಣೆ ಮುಂದುವರೆಯುವುದು ಎಂದರು.
ಆಪ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ
ಎಎಪಿಯ ಗುಬ್ಬಿ ವಿಧಾನ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಪ್ರಭುಸ್ವಾಮಿ ಮಾತನಾಡಿ, ತಾಲೂಕಿನಲ್ಲಿ 20 ವರ್ಷದಿಂದ ಶಾಸಕರಾಗಿರುವ ಶ್ರೀನಿವಾಸ್ ಯಾವುದೇ ಅಭಿವೃದ್ಧಿ ಮಾಡಿಲ್ಲ. ಮೂಲಭೂತ ಸೌಲಭ್ಯಗಳಿಂದ ಇಡೀ ತಾಲೂಕು ವಂಚಿತವಾಗಿದ್ದರೂ ಮೌನವಾಗಿದ್ದಾರೆ. ಇದಕ್ಕೆ ಸಂಸದರು ಸಹ ಹೊರತಾಗಿಲ್ಲ. ಜನರೇ ಮುಂದಿನ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ ಎಂದು ತಿಳಿಸಿದರು. ಕಾರ್ಯಕ್ರಮಕ್ಕೂ ಮುನ್ನ ಚನ್ನಬಸವೇಶ್ವರ ಸ್ವಾಮಿ ದೇವಾಲಯ ಆವರಣದಿಂದ ಕಲ್ಯಾಣ ಮಂಟಪದವರೆಗೆ ಜಾಥಾ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಸಂಚಾಲಕ ಡಾ. ವಿಶ್ವನಾಥ್, ಡಾ. ಉಮಾಶಂಕರ್, ರಾಜ್ಯ ಉಪಾಧ್ಯಕ್ಷ ಡಾ. ವೆಂಕಟೇಶ್, ತಾಲೂಕು ಘಟಕ ಅಧ್ಯಕ್ಷ ಮಂಜುನಾಥ್, ಕಾರ್ಯಕರ್ತರು ವಿವಿಧ ತಾಲೂಕು ಎಎಪಿ ಮುಖಂಡರು ಹಾಜರಿದ್ದರು.
ಸಿಎಂ ಬೊಮ್ಮಾಯಿ ಒಳ್ಳೆಯವರೇ ಆದ್ರೆ ಸ್ವಂತ ಬುದ್ಧಿ ಇಲ್ಲ: ಬಸವರಾಜ ಬೊಮ್ಮಾಯಿ ಅವರು ಒಳ್ಳೆಯರೇ ಆದ್ರೂ ಸ್ವಂತ ಬುದ್ಧಿ ಇಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರ ತಾಳಕ್ಕೆ ಕುಣಿಯುತ್ತ ಅಧಿಕಾರ ನಡೆಸುತ್ತಿದ್ದಾರೆ ಎಂದು ಅಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ಇಲ್ಲಿನ ವಿಪಿ ಬಡಾವಣೆಯಲ್ಲಿ ಪಕ್ಷದ ಕಚೇರಿ ಉದ್ಘಾಟನೆಯಲ್ಲಿ ಮಾತನಾಡಿ, ಸಿಎಂಗೆ ಸ್ವತಂತ್ರವಾಗಿ ಆಡಳಿತ ಮಾಡಲು ಬಿಡುತ್ತಿಲ್ಲ. ಇದರ ನಡುವೆ ಮಂಡಿನೋವು ಅವರನ್ನು ಬಾಧಿಸುತ್ತಿದೆ.
ಭಾಸ್ಕರ್ ರಾವ್ ನಂತರ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆ: ಕೇಜ್ರಿವಾಲ್ ಪಕ್ಷದ ಕಡೆ ವಾಲ್ತಾರ ಕಿಮ್ಮನೆ?
ಹಾಗಾಗಿ ರಾಜ್ಯಪಾಲರ ಆಡಳಿತ ಹೇರುವುದು ಸೂಕ್ತ. ಸ್ವಾತಂತ್ರ್ಯ ಬಂದು 75 ವರ್ಷದಲ್ಲಿ ಮೂರು ಪಕ್ಷಗಳು ಆಡಳಿತ ನಡೆಸಿವೆ. ಜನತೆಯ ಸ್ಥಿತಿ ಮಾತ್ರ ಹಾಗೇ ಇದ್ದು, ಚುನಾಯಿತ ಪ್ರತಿನಿಧಿಗಳ ಸ್ಥಿತಿ ಮಾತ್ರ ಉತ್ತಮವಾಗಿದೆ. ಭ್ರಷ್ಟಾಚಾರ ಮಿತಿ ಮೀರಿದ್ದು, ಜನಪ್ರತಿನಿಧಿಗಳ ಮನೆಯಲ್ಲಿ ಹಣ ಎಣಿಸಲು ಯಂತ್ರಗಳಿವೆ. ಅಧಿಕಾರದಲ್ಲಿರುವ ಸರ್ಕಾರಗಳು ಸಿಬಿಐ ಮತ್ತು ಇಡಿಯನ್ನು ದುರುಪಯೋಗ ಮಾಡಿಕೊಂಡಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುಂದಿನ ಪ್ರಧಾನ ಮಂತ್ರಿ ಹುದ್ದೆಗೆ ಪೈಪೋಟಿ ನೀಡುತ್ತಿದ್ದಾರೆ ಎಂದು ಅವರ ಮನೆಯ ಮೇಲೆ ದಾಳಿ ಮಾಡಿಸಲಾಗಿದೆ ಎಂದು ಆರೋಪಿಸಿದರು.