Asianet Suvarna News Asianet Suvarna News

ಸಿದ್ದರಾಮಯ್ಯ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ: ಯಡಿಯೂರಪ್ಪ

ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರವಾಗಿ ಮಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ತನ್ವೀರ್ ಪೀರಾ ಜೊತೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾದ ವಿಚಾರದ ಬಗ್ಗೆ ಸದನದಲ್ಲಿ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಗಳು ಏನು ಉತ್ತರ ಕೊಡುತ್ತಾರೆ ನೋಡೋಣ ಎಂದ ಬಿ.ಎಸ್‌. ಯಡಿಯೂರಪ್ಪ 

Muslim wooing by CM Siddaramaiah Says Former CM BS Yediyurappa grg
Author
First Published Dec 8, 2023, 8:01 PM IST

ಶಿವಮೊಗ್ಗ(ಡಿ.08):  ಮುಸ್ಲಿಮರ ಜತೆಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸಮುದಾಯದವನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹಿಂದೂಗಳ ಆಕ್ರೋಶ ಭುಗಿಲೇಳುತ್ತದೆ ಎಂಬ ಕಲ್ಪನೆ ಅವರಿಗಿಲ್ಲ. ಇದಕ್ಕಾಗಿ ರಾಜ್ಯದ ಜನ ಅವರನ್ನು ಕ್ಷಮಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಟೀಕಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರವಾಗಿ ಮಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ತನ್ವೀರ್ ಪೀರಾ ಜೊತೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾದ ವಿಚಾರದ ಬಗ್ಗೆ ಸದನದಲ್ಲಿ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಗಳು ಏನು ಉತ್ತರ ಕೊಡುತ್ತಾರೆ ನೋಡೋಣ ಎಂದರು.

ಪ್ರಧಾನಿ ಮೋದಿ ಶ್ರಮದಿಂದ ಮುಂದುವರಿದ ದೇಶವಾದ ಭಾರತ: ಬಿ.ಎಸ್‌.ಯಡಿಯೂರಪ್ಪ

ಅಧಿವೇಶನದ ಸಮಯದಲ್ಲಿ ಅವರು ಹೊರಗೆ ಹೇಳಿಕೆ ಕೊಟ್ಟಿರುವುದನ್ನು ಖಂಡಿಸುತ್ತೇನೆ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow Us:
Download App:
  • android
  • ios