Mandya: ನಾಗಮಂಗಲ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಚಲುವರಾಯಸ್ವಾಮಿ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ, ಮದ್ದೂರು, ಕೆ.ಆರ್.ಪೇಟೆ ಮಂಡ್ಯ ಸೇರಿದಂತೆ ಬೆಂಗಳೂರಿನ ಇತರ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ. ಆದರೆ, ನಾನು ನಾಗಮಂಗಲ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಮದ್ದೂರು (ನ.23): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ, ಮದ್ದೂರು, ಕೆ.ಆರ್.ಪೇಟೆ ಮಂಡ್ಯ ಸೇರಿದಂತೆ ಬೆಂಗಳೂರಿನ ಇತರ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ. ಆದರೆ, ನಾನು ನಾಗಮಂಗಲ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಗುಡಿದೊಡ್ಡಿ ಗ್ರಾಮದ ಶ್ರೀಬೀರೇಶ್ವರ ಚನ್ನಕೇಶ್ವರ ಸ್ವಾಮಿ ದೇಗುಲದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಳೆದ ಚುನಾವಣೆಯಲ್ಲಿ 47 ಸಾವಿರ ಮತಗಳ ಅಂತರದಿಂದ ಸೋತಾಗ ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕು ಎಂಬುವಷ್ಟು ಬೇಸರವಾಯಿತು.
ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಾಗಮಂಗಲದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡಿದರು. ಈ ರೀತಿ ಸೋಲುಂಟಾಯಿತು ಎಂದು ಬೇಜಾರಾಯಿತು. ಆದರೂ, ಕ್ಷೇತ್ರದ ಜನರಿಗೋಸ್ಕರ ಹಾಗೂ ಸಮಗ್ರ ಅಭಿವೃದ್ಧಿಗೋಸ್ಕರ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದೇನೆ ಎಂದರು. ನಾನು ಶಾಸಕ ಮತ್ತು ಮಂತ್ರಿಯಾಗಿದ್ದಾಗ ಮಂಡ್ಯ ಮೆಡಿಕಲ್ ಕಾಲೇಜ್, ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ವಿಭಾಗದ ಕಚೇರಿ, ನಾಗಮಂಗಲದಲ್ಲಿ ಆರ್‌ಟಿಓ ಕಚೇರಿ, ಕೊಪ್ಪ ಭಾಗದಲ್ಲಿ ಶಾಲಾ, ಕಾಲೇಜುಗಳು ಅಭಿವೃದ್ಧಿ, ರಸ್ತೆಗಳ ಅಭಿವೃದ್ಧಿ ಹಾಗೂ ನಾಗಮಂಗಲ ಕ್ಷೇತ್ರಕ್ಕೆ ಸಮರೋಪಾಧಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ನನ್ನ ಶಕ್ತಿ ಮೀರಿ ಅಭಿವೃದ್ಧಿ ಮಾಡಿದ್ದ ನನಗೆ ಚುನಾವಣೆ ಸೋತಿದ್ದು ಅತೀವ ಬೇಸರ ತಂದಿತ್ತು ಎಂದರು.
Mandya: ಅಭ್ಯರ್ಥಿ ಆಯ್ಕೆ ಹೈಕಮಾಂಡ್ ನಿರ್ಧಾರವಲ್ಲ: ಚಲುವರಾಯಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲಾ ನಾಯಕತ್ವವನ್ನು ನೀಡಿದ್ದಾರೆ. ಅದರಂತೆ ನಾನು ಅವಿರತವಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು. ಕಳೆದ ನಾಲ್ಕು ವರ್ಷಗಳಲ್ಲಿ ಯಾವ ಅಭಿವೃದ್ಧಿಯಾಗಿದೆ ಎಂಬ ಬಗ್ಗೆ ನೀವು ಆತ್ಮಾವಲೋಕನ ಮಾಡಿಕೊಳ್ಳಿ. ಕೊಪ್ಪ ಭಾಗದಲ್ಲಿ ನಾನು ಕಟ್ಟಿಸಿದ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ ಹಾಗೂ ನನ್ನ ಅವಧಿಯಲ್ಲಿಯಾದ ರಸ್ತೆಗಳನ್ನು ಬಿಟ್ಟರೆ ಯಾವ ಅಭಿವೃದ್ಧಿಯಾಗಿದೆ ಎಂದರು.
ಸೂರ್ಯ-ಚಂದ್ರರು ಇರುವುದು ಎಷ್ಟು ಸತ್ಯವೋ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸ್ವಚ್ಛವಾದ ಆಡಳಿತ ನಡೆಸಿದ್ದರು. ಬಡವರ ಪರವಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಿದ್ದರು ಈಗಿನ ಸರ್ಕಾರ ಬಡವರ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಪರ್ಸೆಂಟೇಜ್ ಸರ್ಕಾರ ನಡೆಯುತ್ತಿದೆ. ನೀವೆಲ್ಲರೂ ಇಂದಿನಿಂದಲೇ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಕಾಂಗ್ರೆಸ್ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು
ರಸ್ತೆ ದುರಸ್ತಿ ಮಾಡದಿದ್ದರೆ ಮನೆ ಮುಂದೆ ಪ್ರತಿಭಟನೆ: ಶಾಸಕ ಪುಟ್ಟರಾಜು ಎಚ್ಚರಿಕೆ
ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ತಾಲೂಕ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಬೆಕ್ಕಳಲೆ ರಘು, ಮನ್ಮಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಸ್ವಾಮಿ, ಮುಖಂಡರಾದ ಯೋಗಾನಂದ, ಕೋಣಸಾಲೆ ರಘು ಇದ್ದರು.