ಕರಾವಳಿ ಬಿಜೆಪಿಗರ ಕಡೆಗಣನೆ ವಿರುದ್ಧ ನನ್ನ ಸ್ಪರ್ಧೆ: ರಘುಪತಿ ಭಟ್‌

ಈ ಬಾರಿಯ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿಯನ್ನು ಬಿಜೆಪಿ ನಾಯಕರು ಸಂಪೂರ್ಣ ಕಡೆಗಣಿಸಿದ್ದಾರೆ. ಹೀಗಾಗಿ ನಾನು ಓರ್ವ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಮಾಜಿ ಶಾಸಕ ರಘುಪತಿ ಭಟ್‌ ಹೇಳಿದ್ದಾರೆ. 

My contest against marginalization of coastal BJP Says Raghupathi Bhat gvd

ಮಂಗಳೂರು (ಮೇ.19): ಈ ಬಾರಿಯ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿಯನ್ನು ಬಿಜೆಪಿ ನಾಯಕರು ಸಂಪೂರ್ಣ ಕಡೆಗಣಿಸಿದ್ದಾರೆ. ಹೀಗಾಗಿ ನಾನು ಓರ್ವ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ, ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿ ಪ್ರಾದೇಶಿಕತೆ ಹಾಗೂ ನೈತಿಕತೆಯ ಪ್ರಶ್ನೆ ಇರುವುದರಿಂದ ಪಕ್ಷದ ವಿರುದ್ಧ ನಾನು ಹೋಗುತ್ತಿದ್ದೇನೆ ಎಂದು ಅನಿಸುವುದಿಲ್ಲ. 

ನನಗೆ ಟಿಕೆಟ್‌ ನೀಡುವುದಾಗಿ ನಂಬಿಸಿ ಬಳಿಕ ನಾಯಕರು ಇತ್ತೀಚೆಗಷ್ಟೆ ಕಾಂಗ್ರೆಸ್‌ನಿಂದ ಬಂದ, ರಾಷ್ಟ್ರೀಯತೆ ವಿರುದ್ಧ ಪ್ರತಿಭಟಿಸಿದ್ದ ಅಭ್ಯರ್ಥಿಗೆ ಟಿಕೆಟ್‌ ನೀಡಿದ್ದಾರೆ. ನನ್ನ ಸ್ಪರ್ಧೆ ಅವರ ವಿರುದ್ಧವೂ ಅಲ್ಲ. ಶಿವಮೊಗ್ಗದಲ್ಲೇ ಪಕ್ಷಕ್ಕಾಗಿ ದುಡಿದ ಅನೇಕ ಮಂದಿ ಇದ್ದಾರೆ, ಅವರಲ್ಲೊಬ್ಬರಿಗೆ ಟಿಕೆಟ್‌ ನೀಡಿದರೂ ನಾನು ಸ್ಪರ್ಧಿಸುತ್ತಿರಲಿಲ್ಲ. ಕರಾವಳಿಯಲ್ಲಿ ಯಾರನ್ನು ನಿಲ್ಲಿಸಿದರೂ ಪಕ್ಷ ಗೆಲ್ಲುತ್ತದೆ ಎಂಬ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರ ನಾಯಕರ ಭ್ರಮೆ ಈ ಚುನಾವಣೆಯಿಂದ ತೊಲಗಬೇಕು. ಇದು ಪಕ್ಷಾತೀತ ಚುನಾವಣೆಯಾದ್ದರಿಂದ ಜನತೆ ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. 

ನಾನು ಗೆದ್ದು ಮತ್ತೆ ಬಿಜೆಪಿ ಬೆಂಬಲಿಸುತ್ತೇನೆ. ನನ್ನನ್ನು ಪಕ್ಷ ಉಚ್ಚಾಟಿಸಿದರೆ ಆ ದಿನ ಬಹಳ ದುಃಖಪಡಬಹುದು. ಆದರೂ ನಾನು ಕಾರ್ಯಕರ್ತನಾಗಿಯೇ ಇರುತ್ತೇನೆ. ಯಾವುದೇ ಕಾರಣಕ್ಕೂ ನಾನು ನಾಮಪತ್ರ ವಾಪಸ್‌ ಪಡೆಯುವುದಿಲ್ಲ ಎಂದು ಹೇಳಿದರು. ದೃಢ ನಿಶ್ಚಯ ಮಾಡಿಯೇ ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಅಸೆಂಬ್ಲಿ ಚುನಾವಣೆಯಲ್ಲಿ ವಿನಾ ಕಾರಣ ನನಗೆ ಟಿಕೆಟ್‌ ನಿರಾಕರಿಸಲಾಯಿತು. ಪರಿಷತ್‌ ಚುನಾವಣೆಗೆ ಭರವಸೆ ನೀಡಿ ಬಳಿಕ ಬೇರೊಬ್ಬರಿಗೆ ಟಿಕೆಟ್‌ ನೀಡಿದರು. ಎಂದು ರಘುಪತಿ ಭಟ್‌ ಹೇಳಿದರು.

ಬಿಜೆಪಿ ಗೆಲ್ಲುತ್ತೆ, ಮತಗಳ ಎಣಿಕೆ ವೇಳೆ ಜಾಗ್ರತೆ: ಸಂಸದ ಸಿದ್ದೇಶ್ವರ ಲೇವಡಿ

ಆಸ್ತಿ ಮೌಲ್ಯ ₹18 ಕೋಟಿ: ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಒಟ್ಟು 18 ಕೋಟಿ ರು. ಒಡೆಯರಾಗಿದ್ದಾರೆ. ಬಿಜೆಪಿ ಟಿಕೆಟ್ ದೊರೆಯದ ಕಾರಣ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಪಕ್ಷೇತರರಾಗಿ ಸ್ಪರ್ಧಿಸಿರುವ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ 6.68 ಲಕ್ಷ ರು. ನಗದು ಹೊಂದಿದ್ದಾರೆ. ಗೃಹ ನಿರ್ಮಾಣ ಸಂಸ್ಥೆಗಳು, ವಿವಿಧ ಕಂಪನಿಗಳ ಷೇರು, ಚಿನ್ನಾಭರಣ ಮೇಲೆ ಹೆಚ್ಚು ಹೂಡಿಕೆ ಮಾಡಿರುವ ಇವರು 8.19 ಕೋಟಿ ರು. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇವರ ಪತ್ನಿ ಶಿಲ್ಪಾ ಬಳಿ 1.11 ಕೋಟಿ ರು. ಮೌಲ್ಯದ ಚರಾಸ್ತಿಯಿದೆ. ಶಿಲ್ಪಾ ಅವರು ಪತಿಗೆ 65.38 ಲಕ್ಷ ರು. ಸಾಲ ನೀಡಿದ್ದಾರೆ. ರಘುಪತಿ ಭಟ್ ಕೃಷಿ ಹಾಗೂ ಕೃಷಿಯೇತರ ಜಮೀನು ಸೇರಿ ಒಟ್ಟು 9.76 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದು, ಇವರಿಗೆ 4.10 ಕೋಟಿ ರು. ಸಾಲವಿದೆ, ಪತ್ನಿ ಶಿಲ್ಪಾ 42 ಲಕ್ಷ ರು. ಸಾಲಕ್ಕೆ ಹೊಣೆಗಾರರಾಗಿದ್ದಾರೆ.

Latest Videos
Follow Us:
Download App:
  • android
  • ios