ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ನನ್ನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ. ಅದು ಎಂದಿಗೂ ಸರಿಹೋಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಹಗರಿಬೊಮ್ಮನಹಳ್ಳಿ (ಫೆ.10): ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ನನ್ನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ. ಅದು ಎಂದಿಗೂ ಸರಿಹೋಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ತಾಲೂಕಿನ ನಂದಿಪುರ ಗ್ರಾಮದಲ್ಲಿ ದೊಡ್ಡಬಸವೇಶ್ವರ ರಥೋತ್ಸವಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ವೈಯಕ್ತಿಕ ಜೀವನವೇ ಬೇರೆ, ರಾಜಕಾರಣವೇ ಬೇರೆ. ಆದರೆ, ನನ್ನ ಮತ್ತು ಜನಾರ್ದನ ರೆಡ್ಡಿ ಸಂಬಂಧ ಇಲ್ಲಿಗೆ ಅಂತ್ಯಗೊಂಡಂತೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸುವುದಾದರೆ ನನಗೊಂದು ಅವಕಾಶ ಕೊಡಿ ಎಂದು ಕೇಳಿದ್ದೇನೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸರಿ ಎಂದು ಹೇಳಿದರು. ಕೂಡ್ಲಿಗಿ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಈಗಲೇ ಏನನ್ನೂ ಹೇಳಲಾಗದು. ಯಾವ ಕ್ಷೇತ್ರ ಎಸ್ಟಿಗೆ ಮೀಸಲಿರುವುದೋ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು. ನಾನು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಹಾಗಾಗಿ, ಬಿಜೆಪಿ ಗೆಲ್ಲಿಸಲು ರಾಜ್ಯಾದ್ಯಂತ ಕೆಲಸ ಮಾಡುವೆ ಎಂದು ತಿಳಿಸಿದರು.
ಮಾನಸಿಕ ಅಸ್ವಸ್ಥರಂತೆ ಮಾತನಾಡೋ ಭಿನ್ನರು: ಭಿನ್ನಮತೀಯರು ದೆಹಲಿ ದಂಡಯಾತ್ರೆ ಮಾಡಿದರೂ ಬಿ.ವೈ.ವಿಜಯೇಂದ್ರ ಏನೆಂಬುದು ರಾಷ್ಟ್ರೀಯ ನಾಯಕರಿಗೂ ಗೊತ್ತಿದ್ದು, ಹಾದಿಬೀದಿಯಲ್ಲಿ ಮಾತನಾಡುವ ಮೂಲಕ ಭಿನ್ನಮತೀಯರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ ವಿರುದ್ಧ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಏನೆಂಬುದು ದೆಹಲಿ ನಾಯಕರಿಗೂ ಗೊತ್ತಿದೆ.
ಅಡಕೆ ಫಸಲಿಗೆ ಭಾರಿ ಹೊಡೆತ: ಶೇ.50ರಷ್ಟು ಉತ್ಪಾದನೆಯೇ ಇಲ್ಲ!
ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವ ಕೆಲಸವನ್ನು ವಿಜಯೇಂದ್ರ ಮಾಡುತ್ತಿದ್ದರೆ, ಭಿನ್ನಮತೀಯರ ಗುಂಪು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡುವ ಬದಲಿಗೆ ಸ್ವಪಕ್ಷದವರ ವಿರುದ್ಧವೇ ಮಾತನಾಡುತ್ತಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಕಾಂಗ್ರೆಸ್ಪ ಅಧಿಕಾರಕ್ಕೆ ಬಂದು 2 ವರ್ಷವಾದರೂ ಇನ್ನೂ ಸರ್ಕಾರ ಟೇಕಾಫ್ ಆಗಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡದೇ, ಬಿಜೆಪಿಯವರ ವಿರುದ್ಧವೇ ಭಿನ್ನಮತೀಯರು ಮಾತನಾಡುತ್ತಿದ್ದಾರೆ. ಕೇವಲ ನಾಲ್ಕೈದು ಜನ ದೆಹಲಿಗೆ ಓಡಾಡುತ್ತಿದ್ದಾರೆ. ಹಿಂದೆ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಟ್ಟಾಗ ಬಿಜೆಪಿಗೆ ಯಾವ ಸ್ಥಿತಿ ಬಂದಿತೆಂಬ ಸಂಗತಿಯನ್ನು ಮರೆಯಬಾರದು ಎಂದು ಹೇಳಿದರು.
