ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು (ಅ.03): ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಅರಮನೆ ಬಲರಾಮ ದ್ವಾರದಲ್ಲಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಜಂಬೂಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ಹೇಳಿದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲಾ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

ದಸರಾ ಯಶಸ್ವಿ ಆಯೋಜನೆ

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಡುಗಾಯಿ ಒಡೆದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಶಿವರಾಜ್ ತಂಗಡಗಿ, ಡಾ. ಸುಧಾಕರ್, ಶಾಸಕರಾದ ತನ್ವೀರ್ ಸೇಠ್, ನರೇಂದ್ರಸ್ವಾಮಿ, ಡಿ. ರವಿಶಂಕರ್, ಕೆ. ಹರೀಶ್ ಗೌಡ, ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಡಾ.ಡಿ. ತಿಮ್ಮಯ್ಯ, ಕೆ. ಶಿವಕುಮಾರ್, ಸಿ.ಎನ್. ಮಂಜೇಗೌಡ ಮೊದಲಾದವರು ಇದ್ದರು.