Asianet Suvarna News Asianet Suvarna News

ಮಾತೃ ಪಕ್ಷಕ್ಕೆ ವಿಜಯ್ ಶಂಕರ್ ವಾಪಸ್: ಹುಣಸೂರಿನಲ್ಲಿ ಬಿಜೆಪಿಗೆ ಫಸ್ಟ್ ಕ್ಲಾಸ್

ಸಿ.ಎಚ್. ವಿಜಯ್ ಶಂಕರ್ ಮಾತೃ ಪಕ್ಷಕ್ಕೆ ವಾಪಸ್| ಪಕ್ಷದ ಬಾವುಟ ನೀಡಿ ಬರಮಾಡಿಕೊಂಡ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್| ಹುಣಸೂರು ಉಪಚುನಾವಣೆಗೆ ಬಿಜೆಪಿಗೆ ಸಿಕ್ತು ಬಲ| ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ವಿಜಯ್ ಶಂಕರ್ 

Mysuru Former MP CH Vijay Shankar officially joins BJP at Bengaluru Party Office
Author
Bengaluru, First Published Nov 5, 2019, 9:41 PM IST

ಬೆಂಗಳೂರು. [ನ.05]: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಸಿ.ಎಚ್. ವಿಜಯ್ ಶಂಕರ್ ಅವರು ಮರಳಿ ಬಿಜೆಪಿ ಸೇರ್ಪಡೆಯಾದರು.

ಇಂದು [ಮಂಗಳವಾರ] ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಬಿಜೆಪಿಯವರು ಸಂಪರ್ಕ ಮಾಡಿದ್ದಾರೆ: ಕಾಂಗ್ರೆಸ್ ನಾಯಕನ ಮಾತೃ ಪಕ್ಷಕ್ಕೆ ಘರ್ ವಾಪಸಿ ಮಾತು

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿಜಯಶಂಕರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ವಿಜಯ್‌ಶಂಕರ್ ಇದೀಗ ಮತ್ತೆ ಮೂಲ ಪಕ್ಷಕ್ಕೆ ವಾಪಾಸಾಗಿದ್ದಾರೆ.

ವಿಜಯ್ ಶಂಕರ್ ಆಗಮನದಿಂದ ಹುಣಸೂರು ಉಪಚುನಾವಣೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲಬಂದಂತಾಗಿದೆ.ಯಾಕಂದ್ರೆ ಹುಣಸೂರು ವಿಜಯ್ ಶಂಕರ್ ಹುಣಸೂರು ತಾಲೂಕಿನವರಾಗಿದ್ದಾರೆ. 

ಇನ್ನು ಈ ಬಗ್ಗೆ ಮಾತನಾಡಿದ ವಿಜಯ್ ಶಂಕರ್, 2009 ರಲ್ಲಿ ವಿಧಾನ ಪರಿಷತ್ ಸದಸ್ಯನಾಗಿದ್ದ. ಎರಡು ಅವಧಿಗೆ ಜಿಲ್ಲಾಧ್ಯಕ್ಷ, ರಾಜ್ಯ ಉಪಾಧ್ಯಕ್ಷರಾಗಿ, ಮಾನಸಿಕ ಸ್ಥಿಮಿತ ಕಳೆದುಕೊಂಡು ತಪ್ಪು ನಿರ್ಧಾರ ಕೈಗೊಂಡಿದ್ದೇನೆ. ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ. ದೇಶ ಮತ್ತು ಧರ್ಮದ ವಿಚಾರ ಬಂದಾಗ ರಾಜಿ‌ ಆಗಿಲ್ಲ. ಯಾವುದೇ ಷರತ್ತುಗಳನ್ನು ಹಾಕದೇ ಬಂದಿದ್ದೇನೆ ಎಂದರು.

ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡಿದರು ನಿಭಾಯಿಸುತ್ತೇನೆ. ಹುಣಸೂರು ಉಪ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವುದು ನನ್ನ ಗುರಿ. ಹುಣಸೂರು ಉಪ ಚುನಾವಣೆ ನನ್ನ ಪ್ರತಿಷ್ಠೆಯ ವಿಚಾರವಾಗಿದೆ. ಏಕೆಂದರೆ ಅದು ನನ್ನ ತಾಲೂಕು. ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. 

Follow Us:
Download App:
  • android
  • ios