Asianet Suvarna News Asianet Suvarna News

ತನ್ನನ್ನು ಸೋಲಿಸಿ ಮೈಸೂರು ಮತದಾರರನ್ನು 'ಸ್ಯಾಡಿಸ್ಟ್' ಎಂದ ಸಿಎಂ ಸಿದ್ದರಾಮಯ್ಯ ಶಿಷ್ಯ ಎಂ.ಲಕ್ಷ್ಮಣ್

ಲೋಕಸಭಾ ಚುನಾವಣೆಯಲ್ಲಿ ಸೋತ ಬೆನ್ನಲ್ಲಿಯೇ ಮೈಸೂರು - ಕೊಡಗು ಮತದಾರರನ್ನು ಸ್ಯಾಡಿಸ್ಟ್‌ಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಶಿಷ್ಯ ಎಂ. ಲಕ್ಷ್ಮಣ್ ಬೈದಿದ್ದಾರೆ.

Mysuru voters are sadists says CM Siddaramaiah disciple M Laxman sat
Author
First Published Jun 8, 2024, 4:10 PM IST

ಮೈಸೂರು (ಜೂ.08): ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನ್ ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ? ಎಂದು ಸಿಎಂ ಸಿದ್ದರಾಮಯ್ಯ ಅವರ ಆಪ್ತ ಶಿಷ್ಯರೂ ಆಗಿರಯವ ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ಮೈಸೂರು ಮತದಾರರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತ ಹಾಕಿದವರಿಗೆ ಸಾಷ್ಟಾಂಗ ನಮಸ್ಕಾರ. ಮತ ಹಾಕದವರಿಗೆ ಬರೀ ನಮಸ್ಕಾರ. ಸಿದ್ದರಾಮಯ್ಯ‌ಗೆ ಎದ್ದು ನಿಂತು ಸಾಷ್ಟಾಂಗ ನಮಸ್ಕಾರ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ವಿವಿಧ ಬಗೆಯ ನಮಸ್ಕಾರ. ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನ್ ತಪ್ಪು ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಮೈಸೂರಿಗೆ 5 ರೂಪಾಯಿ ಕೊಟ್ಟಿರಲಿಲ್ಲ. ಆದರೆ, ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ನೀವು ಅವರಿಗೆ ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ? ಎಂದು ಮತದಾರರಿಗೆ ಸ್ಯಾಡಿಸ್ಟ್ ಎಂದು ಬೈದಿದ್ದಾರೆ.

ಮೊಮ್ಮಗಳ ಬೆತ್ತಲೆ ವಿಡಿಯೋ ತೋರಿಸಿ ಬೆದರಿಕೆ; ಮರ್ಯಾದೆಗೆ ಹೆದರಿ ವಿಷ ಸೇವಿಸಿದ ಕುಟುಂಬ

ಸಿಎಂ ಸಿದ್ದರಾಮಯ್ಯ ಅವರು ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದ್ರೂ ಇದ್ದಾರಾ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದ್ರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟು ಬಾರಿ ನೋವು ಕೊಡ್ತೀರಿ? ಮೈಸೂರು- ಕೊಡಗು ಕ್ಷೇತ್ರದಲ್ಲಿ 6.5 ಲಕ್ಷ ಜನ ಮತ ನೀಡಿದ್ದಾರೆ. ಉಳಿದ 7.9 ಲಕ್ಷ ಜನ ನನಗೆ ಮತ ನೀಡಿಲ್ಲ. ನನಗೆ ಮತ ಹಾಕದವರಿಗೂ ಧನ್ಯವಾದ ಹೇಳುತ್ತೇನೆ. ಚುನಾವಣೆಯಲ್ಲಿ ಜನರಿಗೆ ಭರವಸೆ ನೀಡಿದ್ದೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದ್ದೆ. ಈಗ ನಾನು ಎಲ್ಲೂ ಓಡಿ ಹೋಗಲ್ಲ. ನಮ್ಮ ಪಕ್ಷ ಸರ್ಕಾರ ಅಧಿಕಾರದಲ್ಲಿದೆ. ಪ್ರಾಮಾಣಿಕವಾಗಿ ನಿಮ್ಮ ಜೊತೆ ಇದ್ದು ಕೆಲಸ ಮಾಡುತ್ತೇನೆ ಎಂದು ಹೇಳಿದರು.

ನನಗೆ ಸಿದ್ದರಾಮಯ್ಯನವರೇ ದೇವರು. ಲೋಕಸಭಾ ಚುನಾವಣೆಯಲ್ಲಿ ನನಗೆ ಸಿದ್ದರಾಮಯ್ಯನವರು ಟಿಕೆಟ್ ಕೊಟ್ಟರು. ಅದಕ್ಕೆ ಡಿ.ಕೆ. ಶಿವಕುಮಾರ್ ಕೂಡ ಸಹಕಾರ ನೀಡಿದ್ದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಶಾಸಕರು ನನಗೆ ಸಹಕಾರ ನೀಡಿದ್ದಾರೆ. ನನಗೆ ಅದೃಷ್ಟ ಇರಲಿಲ್ಲ, ನನ್ನ ಹಣೆಬರಹ ಸರಿ ಇರಲಿಲ್ಲ, ಆಗಾಗಿ ನಾನು ಸೋತಿದ್ದೇನೆ. ಮೈಸೂರು ಸಿದ್ದರಾಮಯ್ಯನವರ ತವರು ಜಿಲ್ಲೆ. ಇನ್ನೆಷ್ಟು ಬಾರಿ ಸಿದ್ದರಾಮಯ್ಯರಿಗೆ ಅವಮಾನ ಮಾಡುತ್ತೀರಾ? ಎಂದು ಮತದಾರರ ವಿರುದ್ಧ ಕಿಡಿಕಾರಿದರು.

ಹುಚ್ಚಾಸ್ಪತ್ರೆಗೆ ಕಳಿಸೋಣ: ಸತೀಶ್‌ ಜಾರಕಿಹೊಳಿಗೆ ಡಿ.ಕೆ.ಶಿವಕುಮಾರ್‌ ಟಾಂಗ್‌?

ಲೋಕಸಭಾ ಚುನಾವಣೆಯಲ್ಲಿ ನಾನು ಸೋತಿರುವುದು ನಮ್ಮ ಮೈಸೂರಿನ ಜನತೆಯ ದೌರ್ಭಾಗ್ಯ. ನನ್ನನ್ನ ಎಷ್ಟು ಬಾರಿ ಬೇಕಾದರೂ ಸೋಲಿಸಿ. ಆದರೆ ಸಿದ್ದರಾಮಯ್ಯರಿಗೆ ಎಷ್ಟು ಬಾರಿ ಅನ್ಯಾಯ ಮಾಡುತ್ತೀರಾ? ಸಿದ್ದರಾಮಯ್ಯನವರು ಸಾಕಷ್ಟು ಅನುದಾನವನ್ನ ಮೈಸೂರಿಗೆ ಕೊಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೂ ಇದರ ಬಗ್ಗೆ ನೋವಿದೆ. ಆದರೆ ಅವರು ಎಲ್ಲಿಯೂ ಅದನ್ನ ಹೇಳಿಕೊಳ್ಳುತ್ತಿಲ್ಲ. ಹಳೆ ಮೈಸೂರು ಭಾಗದ ಎಂಟು ಜನ ಒಕ್ಕಲಿಗರನ್ನ ಸೋಲಿಸಿದ್ದೀರಾ? ನಾವು ಏನು ಅನ್ಯಾಯ ಮಾಡಿದ್ದೇವೆ ಹೇಳಿ. ಜೆಡಿಎಸ್ ಬಿಜೆಪಿಯಲ್ಲಿ ಇರುವವರು ಮಾತ್ರ ಒಕ್ಕಲಿಗರು. ನಾವು ಒಕ್ಕಲಿಗರು ಅಂತ ಪ್ರೂವ್ ಮಾಡಲಿಕ್ಕೆ ಏನು ಮಾಡಬೇಕು ಹೇಳಿ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ತಿಳಿಸಿದರು.

Latest Videos
Follow Us:
Download App:
  • android
  • ios