ಬೆಂಗಳೂರು, (ನ.25): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ.

ಈ ಹಿಂದೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೆಲ ದಿನಗಳ ಹಿಂದಷ್ಟೇ ರಾಜೀನಾಮೆ ನೀಡಿದ್ದರು.

ಅಚ್ಚರಿ ಬೆಳವಣಿಗೆ: ಸಿಎಂ ಬಿಎಸ್‌ವೈ ಮಾಧ್ಯಮ ಸಲಹೆಗಾರ ದಿಢೀರ್ ರಾಜೀನಾಮೆ

ಮಹದೇವ್ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸಿಎಂ ಮುಖ್ಯ ಕಾರ್ಯದರ್ಶಿಗೆ ಯಡಿಯೂರಪ್ಪ ಅವರು ಮಂಗಳವಾರ ಸೂಚಿಸಿದ್ದರು.

ಇದರಂತೆ ಎನ್. ಭೃಂಗೀಶ್ ಅವರನ್ನು ಕೂಡಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಇಂದು (ಬುಧವಾರ) ಅಧಿಕೃತ ಆದೇಶ ಹೊರಡಿಸಲಾಗಿದೆ.

 ಭೃಂಗೀಶ್ ಅವರು ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದ ವೇಳೆ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.