Asianet Suvarna News Asianet Suvarna News

ಜ.6ಕ್ಕೆ ಕಾಂಗ್ರೆಸ್‌ನಿಂದ ‘ನಾ ನಾಯಕಿ’ ಸಮಾವೇಶ

ಮಹಿಳಾ ಕಾರ್ಯಕರ್ತರಲ್ಲಿ ಸುಪ್ತವಾಗಿರುವ ನಾಯಕತ್ವ ಗುಣಗಳನ್ನು ಹೊರ ತೆಗೆಯಲು ಹಾಗೂ ಮಹಿಳಾ ಕಾಂಗ್ರೆಸ್‌ ಬಲವರ್ಧನೆ ಉದ್ದೇಶದಿಂದ ಕಾಂಗ್ರೆಸ್‌ ರೂಪಿಸಿರುವ ’ ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಮಟ್ಟದ ಸಮಾವೇಶ ಜ.6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. 

Na Nayaki convention by Congress on January 6th at bengaluru gvd
Author
First Published Jan 2, 2023, 12:59 AM IST

ಬೆಂಗಳೂರು (ಜ.02): ಮಹಿಳಾ ಕಾರ್ಯಕರ್ತರಲ್ಲಿ ಸುಪ್ತವಾಗಿರುವ ನಾಯಕತ್ವ ಗುಣಗಳನ್ನು ಹೊರ ತೆಗೆಯಲು ಹಾಗೂ ಮಹಿಳಾ ಕಾಂಗ್ರೆಸ್‌ ಬಲವರ್ಧನೆ ಉದ್ದೇಶದಿಂದ ಕಾಂಗ್ರೆಸ್‌ ರೂಪಿಸಿರುವ ’ ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಮಟ್ಟದ ಸಮಾವೇಶ ಜ.6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಹಿಳೆಯರನ್ನು ಸೆಳೆಯುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುವುದು. ಮಹಿಳೆಯರಿಗೆ ಅಗತ್ಯವಿರುವ ಕಾರ್ಯಕ್ರಮಗಳ ಕುರಿತು ಅರಿಯುವುದು. ಇದರ ಆಧಾರದ ಮೇಲೆ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ರೂಪಿಸುವ ಚಿಂತನೆಯಲ್ಲಿರುವ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರಿಗೆ ಶಿಫಾರಸುಗಳನ್ನು ಸಲ್ಲಿಸುವುದು ಕಾರ್ಯಕ್ರಮದ ಉದ್ದೇಶ.

ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಭಾನುವಾರ ಸಂಜೆ ವರ್ಚುಯಲ್ ಸಭೆ ಮೂಲಕ ಸಿದ್ಧತೆಗಳ ಬಗ್ಗೆ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರು, ಶಾಸಕರು, ಮಹಿಳಾ ಘಟಕದ ಅಧ್ಯಕ್ಷರೊಂದಿಗೆ ಚರ್ಚಿಸಿದರು. ಈ ವೇಳೆ ಮಹಿಳಾ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವುದು ಸೇರಿದಂತೆ ವಿವಿಧ ಜಬಾಬ್ದಾರಿಗಳನ್ನು ಕಾಂಗ್ರೆಸ್‌ ನಾಯಕರಿಗೆ ಹಂಚಿಕೆ ಮಾಡಿದರು ಎಂದು ತಿಳಿದು ಬಂದಿದೆ. ಜ.6 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೋಲಾರದಲ್ಲಿ ರಾಹುಲ್‌ ಸ್ಪರ್ಧಿಸಿದರೂ ಗೆಲ್ಲುವುದು ವರ್ತೂರು: ಸಂಸದ ಮುನಿಸ್ವಾಮಿ

ಅನುದಾನ ನೀಡದಿದ್ದರೆ ಕಪ್ಪು ಬಾವುಟ ಪ್ರದರ್ಶನ: ಕೊಟ್ಟೂರು ಕೆರೆ ಸೇರಿದಂತೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ 22ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಜನವರಿ ಕೊನೆಯ ವಾರದಲ್ಲಿ ಅನುದಾನ ಬಿಡುಗಡೆ ಮಾಡದಿದ್ದರೆ ಬೊಮ್ಮಾಯಿ ಸರ್ಕಾರದ ವಿರುದ್ಧ ಜನತೆ ಬೀದಿಗಿಳಿದು ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಹೋರಾಟ ಮಾಡಬೇಕಾಗುತ್ತದೆ ಎಂದು ಶಾಸಕ ಎಸ್‌.ಭೀಮಾ ನಾಯ್ಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಮೈತ್ರಿ ಸರ್ಕಾರದಲ್ಲಿ ಕೊಟ್ಟೂರು ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮತಿ ನೀಡಿ ರಾಜ್ಯ ಬಜೆಟ್‌ನಲ್ಲಿ ಪ್ರಕಟಿಸಿತ್ತು.

ನಂತರ ಬಂದ ಬಿಜೆಪಿ ನೇತೃತ್ವದ ಸರ್ಕಾರ ಬಿಜೆಪಿಯೇತರ ಶಾಸಕರ ಕ್ಷೇತ್ರವೆಂದು ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರಕಿದ್ದನ್ನು ಕೂಡ ಸ್ಥಗಿತಗೊಳಿಸಿ ಬಿಜೆಪಿ ಶಾಸಕರುಗಳ ಕ್ಷೇತ್ರಗಳಿಗೆ ಮಾತ್ರ ಅನುದಾನ ನೀಡಿ ತಾರತಮ್ಯ ಮಾಡುತ್ತ ಬಂದಿದೆ.ಈ ಕುರಿತು ಹೋರಾಟ ಮಾಡಿದ್ದರೂ ಸಚಿವ ಕಾರಜೋಳ ಈ ಬಗ್ಗೆ ಕ್ಯಾರೆ ಎನ್ನದೇ ಮತ್ತೆ ತಾರತಮ್ಯ ನೀತಿ ಪ್ರದರ್ಶಿಸುವ ಮೂಲಕ ಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡಿದೆ ವಂಚನೆ ಮಾಡುತ್ತಿದ್ದಾರೆ. ಇದೇ ವರ್ತನೆ ಮುಂದುವರೆದರೆ ಜನವರಿ ಕೊನೆಯಲ್ಲಿ ನಡೆಯುವ ಕೊಟ್ಟೂರಿನ ತರಳಬಾಳು ಹುಣ್ಣಿಮೆ ಮಹೋತ್ಸವದ ಕಾರ್ಯಕ್ರಮಕ್ಕೆ ಆಗಮಿಸಲಿರುವ ಸಿಎಂ ಬಸವರಾಜ್‌ ಬೊಮ್ಮಾಯಿ,ಸಚಿವ ಗೋವಿಂದ ಕಾರಜೋಳ ಮತ್ತಿತರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ ಎಂದು ಹೇಳಿದರು.

Mysuru: ಅಮಿತ್‌ ಶಾ ಹೇಳಿಕೆ ಹಾಸ್ಯಾಸ್ಪದ: ಎಚ್‌.ಸಿ.ಮಹದೇವಪ್ಪ

ಮಾಲ್ವಿ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅನುದಾನ ನೀಡಿದ ಫಲವಾಗಿ ಹಗರಿಬೊಮ್ಮನಹಳ್ಳಿ ತಾಲೂಕಿನ ಜನತೆಗೆ ಅನುಕೂಲವಾಗಿ ಕೃಷಿಗೆ ನೀರು ಬರುವಂತಾಗಿದೆ. ಇತಂಹ ಯೋಜನೆಗೆ ಸ್ಪಂದಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸಾರ್ಥಕ ನಮನ ಸಲ್ಲಿಸುವ ಸಮಾರಂಭ ಹಾಗೂ ವಿಜಯೋತ್ಸವ ಕಾರ್ಯಕ್ರಮವನ್ನು ಜ.3ರಂದು ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದು,ಕಾರ್ಯಕ್ರಮಕ್ಕೆ ಆಗಮಿಸುವ ಸಿದ್ದರಾಮಯ್ಯ ಅವರು ಮಾಲ್ವಿ ಜಲಾಶಯಕ್ಕೆ ಬಾಗೀನ ಅರ್ಪಿಸಲಿದ್ದಾರೆ.

Follow Us:
Download App:
  • android
  • ios