ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಸಾಲು ಸಾಲು ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ 21 ಅಭ್ಯರ್ಥಿಗಳ ಪಟ್ಟಿಯನ್ನು ನಾಗಾಲ್ಯಾಂಡ್ ಕಾಂಗ್ರೆಸ್ ಬಿಡುಗಡೆ ಮಾಡಿದೆ.
ನಾಗಾಲ್ಯಾಂಡ್(ಫೆ.04): ಹೊಸ ವರ್ಷದಲ್ಲಿ ಸಾಲು ಸಾಲು ಚುನಾವಣೆಗಳು ಎದುರಾಗಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ ನಾಗಾಲ್ಯಾಂಡ್ ಚುನಾವಣೆ ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಫೆಬ್ರವರಿ 27ಕ್ಕೆ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 2ಕ್ಕೆ ಫಲಿತಾಂಶ ಹೊರಬೀಳಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಮಹತ್ವದ ಸಭೆ ಬಳಿಕ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. 21 ಅಭ್ಯರ್ಥಿಗಳ ಪೈಕಿ ಓರ್ವ ಮಹಿಳಾ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
21 ಕ್ಷೇತ್ರಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2018ರ ಚುನಾವಣೆಯಲ್ಲಿ ನಾಗಾಲ್ಯಾಂಡ್ ಕಾಂಗ್ರೆಸ್ ಅಧ್ಯಕ್ಷ ಕೆ ಥೇರಿ ಸೋಲು ಕಂಡಿದ್ದರು. ಹೀಗಾಗಿ ಈ ಬಾರಿ ಥೇರಿ ದಿಮಾಪುರ್ I ಕ್ಷೇತ್ರದಿಂದ ಕಣಕ್ಕಿಳಿದಿದ್ದರೆ. ನಾಗಾಲಾಂಡ್‌ನಲ್ಲಿ ನಾಗಾ ಪೀಪಲ್ ಫ್ರಂಟ್ ಹಾಗೂ ಬಿಜೆಪಿ ಮೈತ್ರಿಯ ಡೆಮಾಕ್ರಟಿಕ್ ಅಲಯನ್ಸ್ ಆಫ್ ನಾಗಾಲಾಂಡ್ ಸರ್ಕಾರ ರಚಿಸಿದೆ. ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಅಧಿಕಾರ ಪಡೆಯಲು ಶತ ಪ್ರಯತ್ನ ಮಾಡುತ್ತಿದೆ. ಇತ್ತೀಚಿನ ಸರ್ವೆಗಳಲ್ಲಿ ಬಿಜೆಪಿ ಮೈತ್ರಿ ಪಕ್ಷಕ್ಕೆ ಗೆಲುವಾಗಲಿದದೆ ಎಂದಿದೆ.
Chikkamagaluru: ನಾನು ಸುಳ್ಳು ಹೇಳುವ ರಾಜಕಾರಣಿ ಅಲ್ಲ, ಸಿದ್ದು ವಿರುದ್ದ ಸಿ ಟಿ ರವಿ ವ್ಯಂಗ್ಯ
ಫೆಬ್ರವರಿ 27ಕ್ಕೆ ನಾಗಾಲ್ಯಾಂಡ್ ಚುನಾವಣಾ ಮತದಾನ ನಡೆಯಲಿದೆ. ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 7ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹೀಗಾಗಿ ಅಳೆದು ತೂಗಿ ಪಕ್ಷಗಳು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುತ್ತಿದೆ.
ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಎಂ-ಪವರ್ (ಮೋದಿ ಪವರ್) ಉದ್ಘೋಷದೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದೆ. ಮೇಘಾಲಯದಲ್ಲಿ 60 ಕ್ಷೇತ್ರಗಳಲ್ಲಿ, ನಾಗಾಲ್ಯಾಂಡ್‌ನಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ಪಕ್ಷದ ಕಾರ್ಯದರ್ಶಿ ರಿತುರಾಜ್ ಸಿನ್ಹಾ ಹೇಳಿದ್ದಾರೆ.
ಮೇಘಾಲಯದಲ್ಲಿ ಎಲ್ಲಾ 60 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಕಳೆದ ಚುನಾವಣೆಯಲ್ಲಿ 47 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 2 ಸ್ಥಾನಗಳಲ್ಲಿ ಜಯಗಳಿಸಿತ್ತು. ಇನ್ನು ನಾಗಾಲ್ಯಾಂಡ್‌ನಲ್ಲಿ ತನ್ನ ಮಿತ್ರಪಕ್ಷವಾದ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡು 60 ಕ್ಷೇತ್ರಗಳಲ್ಲಿ 20ರಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ಸಿನ್ಹಾ ಹೇಳಿದ್ದಾರೆ.
Ticket Fight: ಮೂಲ ಕಾಂಗ್ರೆಸ್ಸಿಗ ವಾಸುಗೆ ಟಿಕೆಟ್ ಘೋಷಿಸಿದ ಮೊಯ್ಲಿ: ಸಿದ್ದರಾಮಯ್ಯ ಬಣಕ್ಕೆ ಠಕ್ಕರ್
ಈಶಾನ್ಯ ರಾಜ್ಯಗಳು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿದ್ದವು. ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಈ ರಾಜ್ಯಗಳು ಅಭಿವೃದ್ಧಿ ಸಾಧಿಸಿವೆ. ಮೋದಿ ಸುಮಾರು 50ಕ್ಕೂ ಹೆಚ್ಚು ಬಾರಿ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡಿದ್ದಾರೆ. ಇದು ಈ ಹಿಂದಿನ ಎಲ್ಲಾ ಪ್ರಧಾನಿಗಳ ಭೇಟಿಯನ್ನು ಒಟ್ಟು ಸೇರಿಸದರೂ ಅದಕ್ಕಿಂತ ಹೆಚ್ಚಿಗೆ ಇದೆ. ಹಾಗಾಗಿ ಇಲ್ಲಿನ ಜನರು ಮೋದಿ ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪಕ್ಷ ಈ ರಾಜ್ಯಗಳಲ್ಲಿ ಉತ್ತಮ ಸಾಧನೆ ಮಾಡುವ ನಿರೀಕ್ಷೆ ಇದೆ ಎಂದು ಪಕ್ಷದ ಈಶಾನ್ಯ ರಾಜ್ಯಗಳ ಸಹಾಯಕ ಪ್ರಭಾರಿಯೂ ಆಗಿರುವ ಸಿನ್ಹಾ ಹೇಳಿದ್ದಾರೆ.
