ಹುಬ್ಬಳ್ಳಿ (ಅ.29): ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳ ಮುಖಂಡರೊಂದಿಗೆ ಮಂಗಳವಾರ ರಾತ್ರಿ ಆಂತರಿಕ ಸಭೆ ನಡೆಸಿರುವುದು ವಿಭಿನ್ನ ಚರ್ಚೆಗೆ ಗ್ರಾಸವಾಗಿದೆ. 

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ, ಲೋಕಸಭೆ ಕ್ಷೇತ್ರ, ಮಸ್ಕಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ಆದರೆ, ಡಿಸಿಸಿ ಬ್ಯಾಂಕ್‌, ಮಸ್ಕಿ ಕ್ಷೇತ್ರದ ಬಗ್ಗೆ ಮಾತ್ರ ಚರ್ಚೆ ನಡೆದಿದೆ. 

'ಸಮ್ಮಿಶ್ರ ಸರ್ಕಾರ ಬೀಳಿಸಿದ್ದೆ ಡಿ.ಕೆ. ಶಿವಕುಮಾರ್‌'

ಬೆಳಗಾವಿ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸಚಿವರಾದ ಜೋಶಿ, ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ. ಈ ಸಭೆಗೆ ಸಚಿವ ರಮೇಶ್‌ ಜಾರಕಿಹೊಳಿ ಗೈರಾಗಿದ್ದರು. 

ಸಮ್ಮಿಶ್ರ ಸರ್ಕಾರ ಬೀಳಿಸಲು ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಯೇ ಕಾರಣವಾಗಿತ್ತು. ಇದೀಗ ಮತ್ತೆ ಡಿಸಿಸಿ ಬ್ಯಾಂಕ್‌ ಚುನಾವಣೆ ಎದುರಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾಧ್ಯಕ್ಷರು ಈ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.