ಭ್ರಷ್ಟಾಚಾರಿ ಕಾಂಗ್ರೆಸ್‌ ನಾಯಕರಿಗೆ ತಿಹಾರ್‌ ಜೈಲು ಸಿದ್ಧ: ನಳಿನ್‌ ಕುಮಾರ್‌ ಕಟೀಲ್‌

ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕಾರ್ಪೊರೇಟರ್‌ ಹಾಗೂ ಗುತ್ತಿಗೆದಾರರ ಬಳಿ ಸಿಕ್ಕಿದ ಕೋಟ್ಯಂತರ ರುಪಾಯಿ ಮೊತ್ತ ಲಂಚಾವತಾರದ ಹಣವಾಗಿದೆ. ಇದಕ್ಕೆ ಪುರಾವೆಯೂ ಇದ್ದು, ಕಾಂಗ್ರೆಸ್‌ ನಾಯಕರಿಗೆ ಮತ್ತೆ ತಿಹಾರ್‌ ಜೈಲು ಕೋಣೆ ಸಿದ್ಧವಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ. 

Nalin Kumar Kateel Slams On Congress Govt At Mangaluru gvd

ಮಂಗಳೂರು (ಅ.18): ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕಾರ್ಪೊರೇಟರ್‌ ಹಾಗೂ ಗುತ್ತಿಗೆದಾರರ ಬಳಿ ಸಿಕ್ಕಿದ ಕೋಟ್ಯಂತರ ರುಪಾಯಿ ಮೊತ್ತ ಲಂಚಾವತಾರದ ಹಣವಾಗಿದೆ. ಇದಕ್ಕೆ ಪುರಾವೆಯೂ ಇದ್ದು, ಕಾಂಗ್ರೆಸ್‌ ನಾಯಕರಿಗೆ ಮತ್ತೆ ತಿಹಾರ್‌ ಜೈಲು ಕೋಣೆ ಸಿದ್ಧವಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ. 

ಮಂಗಳೂರು ಉತ್ತರ ಮಂಡಲ ಬಿಜೆಪಿಯಿಂದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಮಂಗಳೂರು ಹೊರವಲಯದ ಕಾವೂರು ಜಂಕ್ಷನ್‌ನಲ್ಲಿ ಮಂಗಳ‍ವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಹಿಂದೆ ನಮ್ಮ ಸರ್ಕಾರದ ವಿರುದ್ಧ ಪೇ ಸಿಎಂ, 40 ಪರ್ಸೆಂಟ್ ಸರ್ಕಾರ ಎಂದು ಸುಳ್ಳು ಆರೋಪ ಮಾಡಿದರು. ಸಾಕ್ಷ್ಯ ನೀಡಿ ಎಂದರೆ ಅದೂ ಕೊಡಲಿಲ್ಲ. ಆಗ ಸಾಕ್ಷ್ಯ ಇಲ್ಲದೆ ಯಾವುದೇ ಮಂತ್ರಿಯನ್ನು ಜೈಲಿಗೆ ಕಳಿಸಲು ವಿಫಲರಾದರು ಎಂದರು.

ಇಬ್ರಾಹಿಂ ಒರಿಜಿನಲ್‌ ಪಕ್ಷ ಎಂಬ ಬೋರ್ಡ್‌ ಹಾಕಿಕೊಳ್ಳಲಿ: ಎಚ್‌.ಡಿ.ಕುಮಾರಸ್ವಾಮಿ ಗರಂ

80 ಪರ್ಸೆಂಟ್ ಸರ್ಕಾರ: ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ 80 ಪರ್ಸೆಂಟ್ ಸರ್ಕಾರವಾಗಿದೆ. ಹಣ ಪಡೆದ ಬಗ್ಗೆ ಚೀಟಿಯೂ ಐಟಿ ಅಧಿಕಾರಿಗಳಿಗೆ ದೊರೆತಿದೆ. ಪಂಚರಾಜ್ಯ ಚುನಾವಣೆಗೆ ಕಳುಹಿಸಲು ಸಂಗ್ರಹಿಸಿದ ಹಣ ಇದಾಗಿದೆ ಎಂಬುದು ಸ್ಪಷ್ಟ. ಹೈಕಮಾಂಡ್‌ಗೆ ಕರ್ನಾಟಕ ಎಟಿಎಂ ಆಗಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿ ಎಂದು ನಳಿನ್‌ ಕುಮಾರ್‌ ಸವಾಲು ಹಾಕಿದರು.

ಇಸ್ರೇಲ್‌ ಕನ್ನಡಿಗರ ರಕ್ಷಣೆಗೆ ವಿದೇಶಾಂಗಕ್ಕೆ ಪತ್ರ: ಇಸ್ರೇಲ್‌ನಲ್ಲಿ ಯುದ್ಧ ಪರಿಸ್ಥಿತಿಯಿಂದಾಗಿ ಇತ್ತ ಕರಾವಳಿಗರಲ್ಲಿ ಆತಂಕ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ 5000 ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದ್ದಾರೆ ಎಂಬ ಮಾಹಿತಿ ಇದೆ. 

ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ ಎಂದರಲ್ಲದೆ, ಅವರನ್ನು ಸುರಕ್ಷಿತವಾಗಿ ಕರೆ ತರುವ ಜವಾಬ್ದಾರಿ ನಮ್ಮ ಸರ್ಕಾರದ ಮಾಡಲಿದೆ. ಕೇಂದ್ರ ಸಚಿವ ಮುರಳೀಧರನ್ ಅವರ ಜತೆಗೂ ಈ ಕುರಿತು ಚರ್ಚಿಸಲಾಗಿದ್ದು, ಜಿಲ್ಲೆಯ ಇಸ್ರೇಲ್‌ ವಾಸಿಗಳ ಪೂರ್ಣ ಮಾಹಿತಿ ತರಿಸಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದವರು ಹೇಳಿದರು.

ಭಯೋತ್ಪಾದನಾ ಚಟುವಟಿಕೆಗೆ ಕಾಂಗ್ರೆಸ್‌ ಕುಮ್ಮಕ್ಕು: ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ನೀಡುತ್ತಿದೆ. ಪಿಎಫ್‌ಐ ಹಾಗೂ ಎಸ್.ಡಿ.ಪಿ.ಐ.ಗೆ ಕಾಂಗ್ರೆಸ್ ಬೆಂಬಲ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಪಿಸಿದ್ದಾರೆ. ಮ್ಮ ಸರ್ಕಾರ ಪ್ರವೀಣ್ ನೆಟ್ಟಾರು, ಹರ್ಷನ ಹತ್ಯೆಯಾದಾಗ ಕಠಿಣ ಕ್ರಮ ತೆಗೆದುಕೊಂಡಿತ್ತು.‌ ಶಾರೀಕ್ ಕುಕ್ಕರ್‌ ಬಾಂಬ್ ಬ್ಲಾಸ್ಟ್ ನಡೆದಾಗ ಎನ್ಐಗೆ ವಹಿಸಲಾಗಿತ್ತು ಎಂದು ಅವರು ಹೇಳಿದರು. 

ಒರಿಜಿನಲ್‌ ಜೆಡಿಎಸ್‌ಗೆ ನಾನೇ ಅಧ್ಯಕ್ಷ, ಇಂಡಿಯಾಕ್ಕೆ ನಮ್ಮ ಬೆಂಬಲ: ಇಬ್ರಾಹಿಂ

ಡಿಜೆ ಹಳ್ಳಿ ಕೆಜಿ ಹಳ್ಳಿ, ಹುಬ್ಬಳ್ಳಿ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಸರ್ಕಾರ ಪ್ರಕರಣ ಹಿಂಪಡೆಯಲು ಮುಂದಾಗಿದೆ. ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ ಯಾರ ಪಾತ್ರವಿತ್ತು? ಜಮೀರ್ ಸಿದ್ಧರಾಮಯ್ಯ ಶಿಷ್ಯ, ಡಿ.ಕೆ.ಶಿವಕುಮಾರ್ ಯಾರ ಶಿಷ್ಯ ಎಂಬುದು ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios