ಬಿಎಸ್ವೈ ಬದಲಾವಣೆ ವಿಚಾರ : ಕಟೀಲ್ ಹೇಳೋದೇನು..?
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು ಈ ಸಂಬಂಧ ಇದೀಗ ಈ ಬಗ್ಗೆ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ

ಹೊಸಪೇಟೆ (ಅ.21): ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ಅಧಿಕಾರ ಪೂರ್ಣಗೊಳಿಸಲಿದ್ದು, ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗಲಿದ್ದೇವೆ ಎಂದು ತಿಳಿಸಿದರು.
ನಳಿನ್ ಕುಮಾರ್ ಕಟೀಲ್‌ಗೆ ಏನೂ ಮಾತನಾಡಬೇಕೆಂಬ ಅರಿವೇ ಇಲ್ಲ: ಸಿದ್ದರಾಮಯ್ಯ ...
ಜತೆಗೆ, ವಿವಾದಾತ್ಮಕ ಹೇಳಿಕೆ ನೀಡುವವರನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ. ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಯತ್ನಾಳ್ ಹೇಳಿಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಚುನಾವಣೆ ಅಬ್ಬರ ಜೋರಾಗಿದೆ. ರಾಜಕೀಯ ಪಕ್ಷಗಳು ಚುನಾವಣೆಯತ್ತ ಹೆಚ್ಚು ಚಿತ್ರ ಹರಿಸುತ್ತಿರುವ ಬೆನ್ನಲ್ಲೇ ಈ ವಿಚಾರವೂ ಕೂಡ ಸಾಕಷ್ಟು ಸದ್ದು ಮಾಡುತ್ತಿದೆ.