ಬೆಂಗಳೂರು, (ನ.19): ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನುವುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇಂದು (ಗುರುವಾರ) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಿ ಫಾರಂ ಪಡೆದು ಗೆದ್ದ ನಂತರ ಮೂಲ ವಲಸಿಗ ಎನ್ನುವ ಮಾತು ಬಿಜೆಪಿಯಲ್ಲಿ ಇಲ್ಲ. ಎಲ್ಲರೂ ಬಿಜೆಪಿಯ ನಾಯಕರು. ಆದರೆ ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಡುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದರು.

ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ನಡ್ಡಾ ಭೇಟಿ ಬಳಿಕ ಸಿಎಂ ಹೇಳಿದ್ದು ಹೀಗೆ...!

ರಾಷ್ಟ್ರೀಯ ಅಧ್ಯಕ್ಷರು ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಮಯವಕಾಶ ಕೊಟ್ಟಿದ್ದರು. ಅದರಂತೆ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ನಡ್ಡಾ ಅವರು ಮುಖ್ಯಮಂತ್ರಿಗಳ ಜೊತೆ ಏನು ಮಾತನಾಡಬೇಕಿತ್ತೋ ಅದನ್ನು ಮಾತನಾಡಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದರು.

ಅದೇ ರೀತಿ ಮುಖ್ಯಮಂತ್ರಿಗಳು ಕೊಡ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ಏನೆಲ್ಲಾ ತರಬೇಕು ತಂದಿದ್ದಾರೆ. ಇಲ್ಲಿ ಕಡಿಮೆ ಸಮಯ ನೀಡಿದ್ದರು ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಲ್ಲ ಎಂದು ಹೇಳುವ ಮೂಲಕ ರಾಷ್ಟ್ರೀಯ ಅಧ್ಯಕ್ಷರ ಭೇಟಿ ಮತ್ತು ಚೆರ್ಚೆಯ ವಿಚಾರಗಳ ಬಗ್ಗೆ ಸ್ಪಷ್ಟನೆ ಕೊಟ್ಟರು.