Asianet Suvarna News Asianet Suvarna News

ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಅನುಭವ ದೊಡ್ಡದು: ನಾಮದೇವ ಕಾಂಬಳೆ

ಕಾರ್ಮಿಕ ವೃತ್ತಿ ಮಾಡುತ್ತಾ ನಗರಸಭೆ ಸದಸ್ಯರಾಗಿ ಸುಮಾರು 9 ಬಾರಿ ಶಾಸಕರಾಗಿ ಜನಪರ ಸೇವೆ ಸಲ್ಲಿಸಿದ್ದಾರೆ. ಪಕ್ಷ ನಿಷ್ಠೆಯಿಂದ ಕೆಲಸ ಮಾಡಿದ್ದರಿಂದ ಈಗ ಎಐಸಿಸಿ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಲ್ಲಿ ಪಕ್ಷವನ್ನು ಬಲಿಷ್ಠ ಗೊಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವುದು ನಿಶ್ಚಿತ ಎಂದ ನಾಮದೇವ ಕಾಂಬಳೆ 

Namadev Kamble Talks Over AICC President Mallikarjun Kharge grg
Author
First Published Nov 3, 2023, 8:11 PM IST

ಅಥಣಿ(ನ.03):  ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿ, ಪಕ್ಷ ಸಂಘಟಿಸಿ ಎರಡು ರಾಜ್ಯಗಳಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತಂದ ಶ್ರೇಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲುತ್ತದೆ ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ನಾಮದೇವ ಕಾಂಬಳೆ ಹೇಳಿದರು.

ಮಲ್ಲಿಕಾರ್ಜುನ‌ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆ ಗುರುವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಮಿಕ ವೃತ್ತಿ ಮಾಡುತ್ತಾ ನಗರಸಭೆ ಸದಸ್ಯರಾಗಿ ಸುಮಾರು 9 ಬಾರಿ ಶಾಸಕರಾಗಿ ಜನಪರ ಸೇವೆ ಸಲ್ಲಿಸಿದ್ದಾರೆ. ಪಕ್ಷ ನಿಷ್ಠೆಯಿಂದ ಕೆಲಸ ಮಾಡಿದ್ದರಿಂದ ಈಗ ಎಐಸಿಸಿ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಲ್ಲಿ ಪಕ್ಷವನ್ನು ಬಲಿಷ್ಠ ಗೊಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವುದು ನಿಶ್ಚಿತ ಎಂದರು.

ಪ್ರತ್ಯೇಕ ರಾಜ್ಯದ ಕೂಗು ನಿಲ್ಲಲು ಅನುದಾನ ನೀಡಿ: ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ರಾವಸಾಬ ಐಹೊಳೆ, ಅಥಣಿ ಬ್ಲಾಕ್‌ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಿದ್ಧಾರ್ಥ ಶಿಂಗೆ ಮಾತನಾಡಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಅನುಭವ ದೊಡ್ಡದು. ಕಾಂಗ್ರೆಸ್ ಪಕ್ಷವನ್ನು ಫಿನಿಕ್ಸ್‌ ಪಕ್ಷಿಯಂತೆ ಮೇಲೆ ತಂದ ಕೀರ್ತಿ ಮಲ್ಲಿಕಾರ್ಜುನ ಖರ್ಗೆಗೆ ಸಲ್ಲುತ್ತದೆ, ಅವರ ಮಾರ್ಗದರ್ಶನದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಎದುರಿಸಲಾಗುವುದು ಎಂದರು.

ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ.ಜಾ. ಉಪಾಧ್ಯಕ್ಷರಾದ ದಿಲೀಪ್ ಪಾಯಣ್ಣವರ, ವಿಲನರಾಜ್ ಯಲಮಲ್ಲೆ, ಸ್ಥಳೀಯ ಮುಖಂಡರಾದ ಪ್ರಕಾಶ ಭಜಂತ್ರಿ, ವಿಜಯಕುಮಾರ ಬಡಚಿ, ರಮೇಶ ಪವಾರ ಇತರರು ಉಪಸ್ಥಿತರಿದ್ದರು.

Follow Us:
Download App:
  • android
  • ios