ಬರೆದು ಇಟ್ಟುಕೊಳ್ಳಿ ಮೋದಿ ಮತ್ತೆ ಪ್ರಧಾನಿ ಆಗೋಲ್ಲ: ರಾಹುಲ್‌ ಗಾಂಧಿ

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಮಾಡುಕೊಂಡು ಚುನಾವಣೆಯಲ್ಲಿ ಸ್ವರ್ಧಿಸುತ್ತಿವೆ. ಇಲ್ಲಿ ಇಂಡಿಯಾ ಕೂಟದ ಬಿರುಗಾಳಿ ಬೀಸುತ್ತಿದೆ. ಈ ಗಾಳಿಗೆ ಸಿಲುಕಿ ಬಿಜೆಪಿ ಅತಿ ದೊಡ್ಡ ಸೋಲನ್ನು ಕಾಣಲಿದೆ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 

Narendra Modi not become PM again Says Rahul Gandhi grg

ಕನೌಜ್‌ (ಉತ್ತರಪ್ರದೇಶ)(ಮೇ.11): ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದಿಲ್ಲ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಸವಾಲು ಹಾಕಿದ್ದಾರೆ.

ಉತ್ತರ ಪ್ರದೇಶದ ಕನೌಜ್‌ನ ಸಮಾಜವಾದಿ ಪಕ್ಷದ ಅಭ್ಯರ್ಥಿ ಹಾಗೂ ಪಕ್ಷದ ನೇತಾರ ಅಖಿಲೇಶ್‌ ಯಾದವ್‌ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ’ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಮಾಡುಕೊಂಡು ಚುನಾವಣೆಯಲ್ಲಿ ಸ್ವರ್ಧಿಸುತ್ತಿವೆ. ಇಲ್ಲಿ ಇಂಡಿಯಾ ಕೂಟದ ಬಿರುಗಾಳಿ ಬೀಸುತ್ತಿದೆ. ಈ ಗಾಳಿಗೆ ಸಿಲುಕಿ ಬಿಜೆಪಿ ಅತಿ ದೊಡ್ಡ ಸೋಲನ್ನು ಕಾಣಲಿದೆ. ಆದ್ದರಿಂದ ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ಮೋದಿ ಆಯ್ಕೆಯಾಗುವುದಿಲ್ಲ. ಇದನ್ನು ಬೇಕಾದರೆ ಮತದಾರರು ಬರೆದಿಟ್ಟುಕೊಳ್ಳಿ’ ಎಂದರು.

ಪ್ರಧಾನಿ ಮೋದಿ ಸ್ವಂತ ಅನುಭವ ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ ಟಾಂಗ್‌

ಕನೌಜ್‌ನಲ್ಲಿ ಮೇ 13ರಂದು ಮತದಾನವಿದೆ.

Latest Videos
Follow Us:
Download App:
  • android
  • ios