Asianet Suvarna News Asianet Suvarna News

ನರೇಂದ್ರ ಮೋದಿಯೇ ಆಫರ್ ಮಾಡಿದ್ದರು: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

Narendra modi offered Karnataka cm To Me says hd kumaraswamy rbj
Author
Bengaluru, First Published Sep 30, 2020, 6:34 PM IST
  • Facebook
  • Twitter
  • Whatsapp

ತುಮಕೂರು, (ಸೆ.30): ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು  ನರೇಂದ್ರ ಮೋದಿ ಅವರೇ ಆಫರ್ ಮಾಡಿದ್ದರು ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದ್ದಾರೆ.

ಇಂದು (ಬುಧವಾರ) ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಎಚ್​ಡಿಕೆ, ಕೇಂದ್ರದಿಂದ ನರೇಂದ್ರ ಮೋದಿ ಅವರೇ ಆಫರ್ ಮಾಡಿದ್ದರು. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್​ನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ ಎಂದು ಹೇಳಿದರು.

 ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ ಮಾಡಿಸಿದರು ಎಂದು ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದು.

ಶಿರಾ ಬೈ ಎಲೆಕ್ಷನ್: ಕುಮಾರಸ್ವಾಮಿ ಭಾವನಾತ್ಮಕ ಮಾತು...!

ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಅಂದುಕೊಂಡೆ. ಆದ್ರೆ ಕಾಂಗ್ರೆಸ್​ನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದ್ರು. ದೇವೇಗೌಡರು ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ ಅಂದಿದ್ರು. ಎಷ್ಟೇ ಹೇಳಿದ್ರೂ ಕೇಳದೇ ನನಗೆ ಕಾಂಗ್ರೆಸ್​ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದ್ರು. ನನಗೆ ಮುಖ್ಯಮಂತ್ರಿ ಆಗುವ ಆಸೆ ಇರಲಿಲ್ಲ ಎಂದು ಅಂದಿನ ಘಟನೆಯನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟರು.

ಕೆಲ ಕಾರಣಗಳಿಂದ ಕಾರ್ಯಕರ್ತರ ಸಭೆ ಮಾಡಲು ಆಗಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಬಹಳ ವೇಗದಲ್ಲಿ ಹೊರಟಿದೆ. ಸಭೆ ಸಮಾರಂಭ ಮಾಡಿದೆ. ಆದರೂ ಇದರಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಈ ಕ್ಷೇತ್ರದಲ್ಲಿ ಕಾಡು ಗೊಲ್ಲರು ನನಗೆ ಸತ್ಕಾರ ನೀಡಿದ್ದಾರೆ. ನಾನು ಗ್ರಾಮ ವಾಸ್ತವ್ಯ ಮಾಡಿದ್ದು ಕಾಡು ಗೊಲ್ಲರ ಮನೆಯಲ್ಲಿ, ಶಿರಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದ ಮತ ನಿರ್ಣಾಯಕ ಎಂದು ತಿಳಿಸಿದರು.

Follow Us:
Download App:
  • android
  • ios