Asianet Suvarna News Asianet Suvarna News

ಇವಿಎಂ, ಇಡಿ, ಸಿಬಿಐ ಇಲ್ಲದೇ ಮೋದಿ ಚುನಾವಣೆ ಗೆಲ್ಲಲ್ಲ: ರಾಹುಲ್‌ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಇವಿಎಂ, ಇ.ಡಿ., ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಇಲ್ಲದೇ ಮೋದಿ ಚುನಾವಣೆ ಗೆಲ್ಲಲಾರರು.

Narendra Modi won't win lok sabha election 2024 without EVM, ED, CBI and IT says Rahul Gandhi gow
Author
First Published Mar 18, 2024, 9:30 AM IST

ಮುಂಬೈ (ಮಾ.18): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಇವಿಎಂ, ಇ.ಡಿ., ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಇಲ್ಲದೇ ಮೋದಿ ಚುನಾವಣೆ ಗೆಲ್ಲಲಾರರು. ಮೋದಿ ಅಧಿಕಾರಕ್ಕಾಗಿ ಹವಣಿಸುವ ಮುಖವಾಡ. ಅವರೊಬ್ಬ 56 ಇಂಚಿನ ಎದೆ ಇಲ್ಲದ ಪೊಳ್ಳು ಮನುಷ್ಯ ಎಂದು ಟೀಕಿಸಿದ್ದಾರೆ.

ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಮುಕ್ತಾಯದ ಅಂಗವಾಗಿ ಹಮ್ಮಿಕೊಂಡಿದ್ದ ಇಂಡಿಯಾ ಮೈತ್ರಿಕೂಟದ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್‌, ‘ಭ್ರಷ್ಟಾಚಾರದ ವಿಷಯದಲ್ಲಿ ಮೋದಿ ಏಕಸ್ವಾಮ್ಯ ಹೊಂದಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಎನ್‌ಸಿಪಿ ನಾಯಕರು ವಿಭಜನೆಯಾಗಿ ಆಡಳಿತ ಪಕ್ಷದ ಜೊತೆ ಕೈ ಜೋಡಿಸಿದ್ದು ಸುಮ್ಮನೆ ಎಂದುಕೊಂಡಿರಾ ಎಂದು ಪ್ರಶ್ನಿಸಿದರು.

ಮುಂಬೈನಲ್ಲಿ ಭಾರತ್‌ ಜೋಡೋ ಯಾತ್ರೆಗೆ ಅದ್ಧೂರಿ ತೆರೆ, 10 ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ!

ಇದೇ ವೇಳೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಹಣದುಬ್ಬರ ಮತ್ತು ಸಮಾಜದಲ್ಲಿನ ದ್ವೇಷದ ವಾತಾವರಣದ ಕುರಿತು ಸಮಾಜದ ಗಮನ ಸೆಳೆಯಲು ತಾವು ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ಹಮ್ಮಿಕೊಂಡಿದ್ದಾಗಿ ರಾಹುಲ್‌ ತಿಳಿಸಿದರು.

ಬಿಜೆಪಿಗೆ ಸಂವಿಧಾನ ಬದಲಿಸುವ ಧೈರ್ಯ ಇಲ್ಲ: ರಾಹುಲ್‌ ಟಾಂಗ್
ದೇಶದ ಸಂವಿಧಾನವನ್ನು ಬದಲಿಸುವ ಧೈರ್ಯ ಬಿಜೆಪಿ ನಾಯಕರಿಗೆ ಇಲ್ಲ. ಆದರೂ ಅವರು ಬರೀ ಗದ್ದಲ ಮಾಡುತ್ತಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತರ ಕನ್ನಡ ಸಂಸದ ಅನಂತ ಕುಮಾರ್‌ ಹೆಗಡೆ ಹೇಳಿಕೆ ಬಗ್ಗೆ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಅಲ್ಲದೆ ಸತ್ಯ ಹಾಗೂ ಜನರ ಬೆಂಬಲ ತಮ್ಮ ಪರವಾಗಿ ಇದೆ ಎಂದೂ ಹೇಳಿದ್ದಾರೆ.

ಅಮೇಠಿ, ರಾಯ್‌ಬರೇಲಿಯಿಂದ ಸ್ಪರ್ಧೆ ಇಲ್ಲ? ಗಾಂಧಿ ಕುಟುಂಬದ ಭದ್ರಕೋಟೆಯಲ್ಲಿ ಕಡಿಮೆಯಾಗುತ್ತಿದೆ ಪ್ರಭಾವ!

ಮಣಿಪುರದಿಂದ ಆರಂಭವಾಗಿದ್ದ ‘ಭಾರತ್‌ ಜೋಡೋ ನ್ಯಾಯ ಯಾತ್ರೆ’ ಸಮಾರೋಪದ ಅಂಗವಾಗಿ ಮುಂಬೈನ ಮಣಿ ಭವನ (ಮುಂಬೈನ ಮಹಾತ್ಮ ಗಾಂಧಿ ನಿವಾಸ)ದಿಂದ ಆಗಸ್ಟ್‌ ಕ್ರಾಂತಿ ಮೈದಾನ (1942ರಲ್ಲಿ ಕ್ವಿಟ್‌ ಇಂಡಿಯಾ ಚಳವಳಿ ಆರಂಭವಾದ ಸ್ಥಳ)ದವರೆಗೆ ‘ನ್ಯಾಯ ಸಂಕಲ್ಪ ಪಾದಯಾತ್ರೆ’ಯನ್ನು ರಾಹುಲ್‌ ಗಾಂಧಿ ಭಾನುವಾರ ನಡೆಸಿದರು. ಈ ವೇಳೆ ಸಂವಿಧಾನ ಬದಲಿಸುವ ಬಿಜೆಪಿ ನಾಯಕನ ಹೇಳಿಕೆಗೆ ತಿರುಗೇಟು ಕೊಟ್ಟರು.

ಇದೇ ವೇಳೆ, ಸದ್ಯ ನಡೆಯುತ್ತಿರುವುದು ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವಣ ಸಮರವಲ್ಲ. ಎರಡು ಅಭಿಪ್ರಾಯಗಳ ನಡುವಿನ ಯುದ್ಧ. ದೇಶವನ್ನು ಕೇಂದ್ರೀಕೃತವಾಗಿ ನಡೆಸಬೇಕು, ಒಬ್ಬನೇ ವ್ಯಕ್ತಿ ಎಲ್ಲ ಜ್ಞಾನವನ್ನೂ ಹೊಂದಬೇಕು ಎಂದು ಒಬ್ಬ ವ್ಯಕ್ತಿ ಭಾವಿಸಿದ್ದಾರೆ. ಅದಕ್ಕೆ ತದ್ವಿರುದ್ಧವಾಗಿ, ಅಧಿಕಾರ ವಿಕೇಂದ್ರೀಕರಣವಾಗಬೇಕು. ಜನರ ದನಿಯನ್ನೂ ಆಲಿಸಬೇಕು ಎಂಬುದು ನಮ್ಮ ಆಲೋಚನೆಯಾಗಿದೆ. ಒಬ್ಬ ವ್ಯಕ್ತಿ ಐಐಟಿ ಪದವಿ ಹೊಂದಿದಾಕ್ಷಣ, ಒಬ್ಬ ರೈತನಿಗಿಂತ ಹೆಚ್ಚಿನ ಜ್ಞಾನವಂತ ಎಂದು ಹೇಳಲಾಗದು ಎಂದರು.

Follow Us:
Download App:
  • android
  • ios