ಮಲ್ಲಿಕಾರ್ಜುನ ಖರ್ಗೆಯವರೇ ಅಪಾಯದ ಕತ್ತಿ ನಿಮ್ಮ‌ ತಲೆ ಮೇಲಿದೆ: ಬಿಜೆಪಿ ಏಟು

* ನ್ಯಾಷನಲ್ ಹೆರಾಲ್ಡ್ ಪ್ರಕರಣ
* ಮಲ್ಲಿಕಾರ್ಜುನ ಖರ್ಗೆಯವರೇ ಅಪಾಯದ ಕತ್ತಿ ನಿಮ್ಮ‌ ತಲೆ ಮೇಲಿದೆ
* ಮಲ್ಲಿಕಾರ್ಜುನ ಖರ್ಗೆಗೆ ಬಿಜೆಪಿ ಟ್ವೀಟ್ ಏಟು 

national herald case Karnataka BJP Hits Back at Congress Leader mallikarjun kharge rbj

ಬೆಂಗಳೂರು, (ಜೂನ್.17):  ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆಗೊಳಪಡಿಸಿದೆ. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತಿದೆ.  ದೇಶಾದ್ಯಂತ ಬೀದಿಗಳಿದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇದಕ್ಕೆ ಬಿಜೆಪಿ ಸಹ ತಿರುಗೇಟು ನೀಡುತ್ತಿದೆ.

ಇನ್ನು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು. ಖರ್ಗೆ ಅವರೇ ಅಪಾಯದ ಕತ್ತಿ ನಿಮ್ಮ‌ ತಲೆ ಮೇಲಿದೆ. ತನ್ನ ಕುಟುಂಬಕ್ಕೆ ನಿಷ್ಠರಾಗಿದ್ದವರನ್ನೂ ರಾಹುಲ್ ಗಾಂಧಿ ತೇಜೋವಧೆ ಮಾಡುತ್ತಿದ್ದಾರೆ. ಸತ್ತವರ ತಲೆಗೆ ಹಗರಣ ಕಟ್ಟುವ ಹುನ್ನಾರ ನಡೆಯುತ್ತಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಹಗರಣವನ್ನು ಮರಣ ಹೊಂದಿರುವ ಮೋತಿಲಾಲ್ ವೋರಾ ತಲೆಗೆ ಕಟ್ಟಲು ಷಡ್ಯಂತ್ರ ನಡೆಸಲಾಗುತ್ತಿದೆ. ನಾನು ಕೂಡಾ ರಾಹುಲ್ ಗಾಂಧಿ ಎಂದು ಬೊಬ್ಬಿರಿಯುವ ನಕಲಿ ವೀರರೇ ನಿಮಗಿದೋ ಎಚ್ಚರಿಕೆ. ಖರ್ಗೆ ಅವರೇ, ಅಪಾಯದ ತೂಗುಗತ್ತಿ ನಿಮ್ಮ ತಲೆ ಮೇಲಿದೆ ಎಂದು ಟೀಕಿಸಿದೆ.

ED ಡ್ರಿಲ್, ರಾಹುಲ್ ಗಾಂಧಿ ಪರ ರಮ್ಯಾ ಬ್ಯಾಟಿಂಗ್, ಟ್ವಿಟ್ಟಿಗರು ಫುಲ್ ಕ್ಲಾಸ್

ಇಡಿ ವಿಚಾರಣೆ ಸಂದರ್ಭದಲ್ಲಿ ನ್ಯಾಶನಲ್ ಹೆರಾಲ್ಡ್ ಅವ್ಯವಹಾರವನ್ನೆಲ್ಲಾ ಮೋತಿಲಾಲ್ ವೋರಾ ತಲೆಗೆ ಕಟ್ಟಲಾಗಿದೆ ಎಂದು ಮಾಧ್ಯಮಗಳು ಸುದ್ದಿ ಮಾಡುತ್ತಿವೆ. ಹಗರಣಕ್ಕೆ ವೋರಾ ಕಾರಣ ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ಪಲಾಯನವಾದ. ಗತಿಸಿ ಹೋದವರನ್ನು ಬಲಿಪಶು ಮಾಡುವ ಹುನ್ನಾರವೇ? ಕೋತಿ ತಿಂದು ಮೇಕೆ ಮೂತಿಗೆ ಒರೆಸಿದ ಕತೆಯಂತೆ ನ್ಯಾಶನಲ್ ಹಗರಣ ಸಾಗುತ್ತಿದೆ. ರಾಹುಲ್ ಗಾಂಧಿ‌ ನೇತೃತ್ವದ ಯಂಗ್ ಇಂಡಿಯಾ ಸಂಸ್ಥೆ ಮಾಡಿದ ಭ್ರಷ್ಟಾಚಾರವನ್ನು ಮರಣ ಹೊಂದಿದ ವೋರಾ ತಲೆಗೆ ಕಟ್ಟುತ್ತಿರುವುದೇಕೆ ಎಂದು ಪ್ರಶ್ನಿಸಿದೆ.

Latest Videos
Follow Us:
Download App:
  • android
  • ios