ಅಜಿತ್ ಪವಾರ್ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಎನ್‌ಸಿಪಿ: ಚುನಾವಣಾ ಆಯೋಗಕ್ಕೂ ಮಾಹಿತಿ
ಬಿಜೆಪಿ ಜತೆ ಸೇರಿ ಬಂಡೆದ್ದವರ ವಿರುದ್ಧ ಕ್ರಮಕ್ಕೆ ಎನ್‌ಸಿಪಿ ಮುಂದಾಗಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಮುಂಬೈ (ಜುಲೈ 3, 2023): ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ಉಂಟಾಗಿದ್ದು, ಭಾನುವಾರ ಎನ್‌ಸಿಪಿ ಪಾಳಯದ ಅಜಿತ್ ಪವಾರ್ ಹಾಗೂ 8 ಇತರೆ ಶಾಸಕರು ಮಹಾರಾಷ್ಟ್ರ ಸರ್ಕಾರದ ಜತೆ ಸೇರಿದ್ದಾರೆ. ಅಜಿತ್ ಪವಾರ್ ಡಿಸಿಎಂ ಆಗಿದ್ದು, ಇತರೆ 8 ಮಂದಿ ಎನ್‌ಸಿಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ಇವರ ವಿರುದ್ಧ ಎನ್‌ಸಿಪಿ ಅನರ್ಹತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್‌ಗೆ ಅನರ್ಹತೆ ಅರ್ಜಿ ಕಳಿಸಿದ್ದಾರೆ.
ಡಿಸಿಎಂ ಅಜಿತ್ ಪವಾರ್ ಹಾಗೂ ಹಾಗೂ ಎಂಟು ಶಾಸಕರ ವಿರುದ್ದ ಅನರ್ಹತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಿಜೆಪಿ ಜತೆ ಸೇರಿ ಬಂಡೆದ್ದವರ ವಿರುದ್ಧ ಕ್ರಮಕ್ಕೆ ಎನ್‌ಸಿಪಿ ಮುಂದಾಗಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಇದನ್ನು ಓದಿ: ಶಿವಸೇನೆ ಬಳಿಕ ಎನ್‌ಸಿಪಿಯೂ ಹೋಳು: ಮಹಾರಾಷ್ಟ್ರದಲ್ಲಿ ಮತ್ತೆ ರಾಜಕೀಯ ಕ್ಷಿಪ್ರಕ್ರಾಂತಿ; ವಿಪಕ್ಷಗಳ ಮೈತ್ರಿಕೂಟಕ್ಕೆ ಹಿನ್ನಡೆ
ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್ ಮತ್ತು ಇತರ ಎಂಟು ಜನರ ವಿರುದ್ಧ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಅನರ್ಹತೆ ಅರ್ಜಿ ಸಲ್ಲಿಸಿದೆ. ಅಷ್ಟೇ ಅಲ್ಲದೆ, ಎನ್‌ಸಿಪಿಯ ಶ್ರೇಣಿ ಮತ್ತು ಫೈಲ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಬಳಿ ಇದೆ ಎಂದು ತಿಳಿಸುವ ಇ-ಮೇಲ್ ಅನ್ನು ಭಾರತದ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. 1999 ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿ ಈಗ ವಿಭಜನೆಯಾಗಿದ್ದು, ಶಿವಸೇನೆ ಹಾದಿ ಹಿಡಿದಿದೆ. ಛಗನ್ ಭುಜಬಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರಂತಹ ಕಟ್ಟಾ ಶರದ್ ಪವಾರ್ ನಿಷ್ಠಾವಂತರು ಸೇರಿದಂತೆ ಇತರ ಎಂಟು ಎನ್‌ಸಿಪಿ ಶಾಸಕರನ್ನು ಮಂತ್ರಿ ಮಾಡಲಾಯಿತು.
1999 ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್ ಪವಾರ್ ಅವರು ಪಕ್ಷದ ಮುಖ್ಯಸ್ಥರಾಗಿ ಮುಂದುವರೆದಿದ್ದಾರೆ ಮತ್ತು ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪಕ್ಷವು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿ) ಪತ್ರ ಬರೆದಿದೆ. ಅಜಿತ್ ಪವಾರ್ ಕ್ಯಾಂಪ್‌ನಿಂದ ಯಾವುದೇ ವಿನಂತಿಯ ಮೇರೆಗೆ ಕಾರ್ಯನಿರ್ವಹಿಸುವ ಮೊದಲು ಅವರು ಚುನಾವಣಾ ಸಂಸ್ಥೆಯನ್ನು ಕೇಳಬೇಕೆಂದು ಅವರು ಒತ್ತಾಯಿಸಿದರು.
ಇದನ್ನೂ ಓದಿ: 'ಮಹಾ' ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ; ಶರದ್ ಪವಾರ್‌ಗೆ ಮತ್ತೆ ಸೆಡ್ಡು; 9 ಎನ್‌ಸಿಪಿ ನಾಯಕರ ಸಾಥ್
ಶರದ್ ಪವಾರ್ ಸಂಬಂಧಿ ಅಜಿತ್ ಪವಾರ್ ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯಲ್ಲಿ 2ನೇ ಬಾರಿ ದಂಗೆ ನಡೆಸಿದ್ದು, 8 ಇತರ ಪಕ್ಷದ ನಾಯಕರೊಂದಿಗೆ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರಿದ್ದಾರೆ. ಈ ಹಿನ್ನೆಲೆ ಈ ಬಗ್ಗೆ ಮಾತನಾಡಿದ ಎನ್‌ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್ ಪವಾರ್ "ಕುಟುಂಬದಲ್ಲಿ ಯಾವುದೇ ಸಮಸ್ಯೆ ಇಲ್ಲ" ಎಂದು ಹೇಳಿದ್ದಾರೆ.
"ಕುಟುಂಬದಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾವು ಕುಟುಂಬದಲ್ಲಿ ರಾಜಕೀಯವನ್ನು ಚರ್ಚಿಸುವುದಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ನಿರ್ಧಾರ ತೆಗೆದುಕೊಳ್ಳುತ್ತಾರೆ" ಎಂದು ಅವರು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಶರದ್ ಪವಾರ್‌ಗೆ ಬಿಜೆಪಿ ಕಾರ್ಯಕರ್ತನಿಂದ್ಲೇ ಜೀವ ಬೆದರಿಕೆ: ಅಜಿತ್ ಪವಾರ್ ಸ್ಫೋಟಕ ಹೇಳಿಕೆ