Asianet Suvarna News Asianet Suvarna News

ಯಾರೀಕೆ ದ್ರೌಪದಿ ಮುರ್ಮು.. ಬಿಜೆಪಿಯ ರಾಷ್ಟಪತಿ ಅಭ್ಯರ್ಥಿ?

ನಿರೀಕ್ಷೆಯಂತೆಯೇ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು ಅವರನ್ನು ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಬಿಜೆಪಿಯ ಹಿರಿಯ ನಾಯಕಿಯೂ ಆಗಿದ್ದ ಮುರ್ಮು ಅವರ ಹಿನ್ನಲೆಯೇನು ಎನ್ನುವುದರ ವಿವರ.

NDA and BJP Pick For President Who Is Draupadi Murmu a tribal woman leader san
Author
Bengaluru, First Published Jun 21, 2022, 9:53 PM IST

ನವದೆಹಲಿ (ಜೂನ್ 21):  ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಜುಲೈನಲ್ಲಿ ರೈಸಿನಾ ಹಿಲ್ ಅನ್ನು ತೊರೆಯಲಿದ್ದು, ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಆರಂಭವಾಗಲಿದೆ. ಮುಂದಿನ ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ನೇತೃತ್ವದ ಎನ್‌ಡಿಎ, ಜಾರ್ಖಂಡ್‌ ನ ಮಾಜಿ ರಾಜ್ಯಪಾಲೆ, ಒಡಿಶಾ ಮೂಲದ ಆದಿವಾಸಿ ಮಹಿಳೆ ದೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದೆ.

ಬಿಜೆಪಿಯ ಸಿದ್ಧಾಂತಗಳಿಗೆ ಸರಿಯಾಗಿ ಒಗ್ಗುವ ಮಹಿಳೆ ಎನಿಸಿಕೊಂಡಿರುವ ದ್ರೌಪದಿ, ಪ್ರಸಿದ್ಧ ಬುಡಕಟ್ಟು ನಾಯಕಿ ಮಾತ್ರವಲ್ಲದೆ ಸಮರ್ಥ ಆಡಳಿತಗಾರರೂ ಆಗಿದ್ದಾರೆ, ಇದನ್ನು ಅವರು ಜಾರ್ಖಂಡ್‌ನ ರಾಜ್ಯಪಾಲರಾಗಿ ಅಧಿಕಾರಾವಧಿಯಲ್ಲಿ ಸಾಬೀತುಪಡಿಸಿದ್ದಾರೆ. ಜಾರ್ಖಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲೆ ಎನಿಸಿಕೊಂಡಿದ್ದರು.

ರಾಜಕೀಯ ವಿಶ್ಲೇಷಕರ ಪಕ್ರಾರ, ದ್ರೌಪದಿ ಮುರ್ಮುಗೆ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿಯ ಬೆಂಬಲವೂ ಇದೆ. ಒಡಿಶಾದಲ್ಲಿ ಬಿಜೆಡಿ ಹಾಗೂ ಬಿಜೆಪಿ ಸಹಯೋಗದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದ ಸಮಯದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ದ್ರೌಪದಿ ಮುರ್ಮು, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ. ಇದರಿಂದಾಗಿ ಮುಂದಿನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಸೋಮವಾರವಷ್ಟೇ ತಮ್ಮ  ಜನ್ಮದಿನವನ್ನು ಆಚರಿಸಿಕೊಂಡ ದ್ರೌಪದಿ ಮುರ್ಮು ಜನಿಸಿದ್ದು 1958ರ ಜೂನ್ 20 ರಂದು. 64 ವರ್ಷದ ಮುರ್ಮು ಅವರು ಜಾರ್ಖಂಡ್ ರಾಜ್ಯದ 9ನೇ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು. ದ್ರೌಪದಿ ಮುರ್ಮು (ಜನನ 20 ಜೂನ್ 1958) ಜಾರ್ಖಂಡ್‌ನ ಒಂಬತ್ತನೇ ಗವರ್ನರ್ ಆಗಿದ್ದ ಭಾರತೀಯ ರಾಜಕಾರಣಿ. ಅವರು ಭಾರತೀಯ ಜನತಾ ಪಕ್ಷದ ಸದಸ್ಯೆ.

ಮುರ್ಮು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯ ಪ್ರಮುಖ ನಾಯಕರಾಗಿ ಸಾಕಷ್ಟು ಜನಪ್ರಿಯರಾಗಿದ್ದಾರೆ ಮತ್ತು ಎಲ್ಲರೊಂದಿಗೆ ಸೌಹಾರ್ದಯುತ ಬಾಂಧವ್ಯವನ್ನು ಹಂಚಿಕೊಳ್ಳುತ್ತಾರೆ. ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ಮುರ್ಮು ಅವರನ್ನು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಇಷ್ಟಪಡುತ್ತಿದ್ದವು. ಮುರ್ಮು ಅವರ ಉಮೇದುವಾರಿಕೆಯು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಬೆಂಬಲವನ್ನು ಪಡೆಯುವ ಸಾಧ್ಯತೆಯಿದೆ ಏಕೆಂದರೆ ಜೆಎಂಎಂ ಮುಖ್ಯಸ್ಥ ಸಿಬು ಸೊರೆನ್ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ.

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಘೋಷಣೆ, ದ್ರೌಪದಿ ಮುರ್ಮುಗೆ ಬರ್ತ್‌ಡೇ ಗಿಫ್ಟ್ ನೀಡಿದ ಬಿಜೆಪಿ!

ಹಾಗಾಗಿ, ಬಿಜೆಪಿ ಮುರ್ಮು ಅವರನ್ನು ತಮ್ಮ ಅಭ್ಯರ್ಥಿಯನ್ನಾಗಿ ಆರಿಸಿರುವ ಹಿಂದೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬುಡಕಟ್ಟು ಮತಗಳ ಹಂಚಿಕೆಯ ಮೇಲೆ ಪರಿಣಾಮ ಬೀರುವುದಲ್ಲದೆ ಒಡಿಶಾದಲ್ಲಿ ಬಿಜೆಪಿಯ ಭವಿಷ್ಯವನ್ನು ನಿರ್ಧರಿಸಲಿದೆ. ಹಾಗೇನಾದರೂ ದ್ರೌಮದಿ ಮುರ್ಮು ರಾಷ್ಟ್ರಪತಿಯಾಗಲು ಯಶಸ್ವಿಯಾದಲ್ಲಿ, ದೇಶದ ಉನ್ನತ ಸಾಂವಿಧಾನಿಕ ಹುದ್ದೆಗೇರಿದ 2ನೇ ಮಹಿಳೆ, ಮೊದಲ ಒಡಿಶಾ ಹಾಗೂ ಬುಡಕಟ್ಟು ಪ್ರಜೆ ಎನಿಸಲಿದ್ದಾರೆ.

ದೇಶದ ಮುಂದಿನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು?

ಬಿಜೆಪಿ ಸಂಸದೀಯ ಮಂಡಳಿಯು (BJP parliamentary board) ರಾಷ್ಟ್ರಪತಿ ಅಭ್ಯರ್ಥಿಗೆ 20 ಹೆಸರುಗಳನ್ನು ಚರ್ಚಿಸಿತು. ಪೂರ್ವ ಭಾರತದಿಂದ ಒಬ್ಬ ಬುಡಕಟ್ಟು ಮತ್ತು ಮಹಿಳೆಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda ) ಹೇಳಿದ್ದಾರೆ.ಅವರು ಕೌನ್ಸಿಲರ್ ಆಗಿ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು, ನಂತರ ರಾಯ್ರಂಗಪುರ ರಾಷ್ಟ್ರೀಯ ಸಲಹಾ ಮಂಡಳಿ ಅಥವಾ NAC ನ ಉಪಾಧ್ಯಕ್ಷರಾದರು. 2013ರಲ್ಲಿ ಅವರು ಪಕ್ಷದ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯ ಸ್ಥಾನಕ್ಕೆ ಏರಿದ್ದರು. ಭುವನೇಶ್ವರದ ರಮಾ ದೇವಿ ಮಹಿಳಾ ಕಾಲೇಜಿನಲ್ಲಿ ಕಲಾ ಪದವಿ ಪಡೆದ ಅವರು ರಾಜಕೀಯ ಮತ್ತು ಸಮಾಜ ಸೇವೆಯಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿದ್ದಾರೆ.

Follow Us:
Download App:
  • android
  • ios