ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಜಿ.ಟಿ.ದೇವೇಗೌಡ
ನನ್ನ ಜಾಯಮಾನದಲ್ಲಿ ನಾನು ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ಅದು ನನಗೆ ಬೇಕಾಗೂ ಇಲ್ಲ. ಯಾರೋ ನನ್ನನ್ನು ಸೋಲಿಸುವುದಾಗಿ ಹೇಳಿ ಪಕ್ಷದಿಂದ ಪಂಚ ಪಾಂಡವರು ಎಂದು ಆಚೆ ಹೋದರೆ ಅವರೊಂದಿಗೆ ಮಾತೇ ಆಡುವುದಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಭ್ಯರ್ಥಿಯಾದ ಹಾಲಿ ಶಾಸಕ ಜಿ.ಟಿ. ದೇವೇಗೌಡ ತಿರುಗೇಟು ನೀಡಿದ್ದಾರೆ.
ಮೈಸೂರು (ಮೇ.12): ನನ್ನ ಜಾಯಮಾನದಲ್ಲಿ ನಾನು ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ಅದು ನನಗೆ ಬೇಕಾಗೂ ಇಲ್ಲ. ಯಾರೋ ನನ್ನನ್ನು ಸೋಲಿಸುವುದಾಗಿ ಹೇಳಿ ಪಕ್ಷದಿಂದ ಪಂಚ ಪಾಂಡವರು ಎಂದು ಆಚೆ ಹೋದರೆ ಅವರೊಂದಿಗೆ ಮಾತೇ ಆಡುವುದಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಭ್ಯರ್ಥಿಯಾದ ಹಾಲಿ ಶಾಸಕ ಜಿ.ಟಿ. ದೇವೇಗೌಡ ತಿರುಗೇಟು ನೀಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್. ಸಿದ್ದೇಗೌಡ ಮೋಸಗಾರ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಅವ್ನು (ಸಿದ್ದೇಗೌಡ) ಅಂತ ಈಗ ಸಿದ್ದರಾಮಯ್ಯನೋರಿಗೆ ಗೊತ್ತಾಗಿದೆ. ನಾನು ಮುಂಚೆನೇ ಅವರಿಗೆ ಹೇಳಿದ್ದೆ. ಆದರೂ ಕಾಂಗ್ರೆಸ್‌ನಲ್ಲಿರುವವರಿಗೆ ಬಿಟ್ಟು, 15 ದಿನಗಳ ಹಿಂದೆ ಬಂದ ಇವನಿಗೆ ಟಿಕೆಟ್ ಕೊಟ್ಟರು ಎಂದರು. ಹೊಂದಾಣಿಕೆ ಮಾಡಿಕೊಂಡು ಗೆಲ್ಲುತ್ತೇನೆ ಎಂದು ಕೆಲವರು ಪರೋಕ್ಷವಾಗಿ ಹೇಳಿರುವುದಕ್ಕೆ ಕಿಡಿಕಾರಿದ ಅವರು, ಆ ಪಂಚ ಪಾಂಡವರ ಜೊತೆ ನಾನು ಮಾತೇ ಆಡಲ್ಲ ಎಂದರು. ವರುಣದಲ್ಲಿ ಸಿದ್ದರಾಮಯ್ಯ ಗೆಲ್ತಾರೆ ಎಂದು ಅವರು ಹೇಳಿದರು.
ಹೈಕಮಾಂಡ್ ನನಗೆ ಸಿಎಂ ಸ್ಥಾನ ನೀಡಿದರೆ ತಿರಸ್ಕರಿಸಲಾರೆ: ಡಾ.ಜಿ.ಪರಮೇಶ್ವರ್
ನಾನು ಜಿಟಿಡಿ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ: ನಾನು ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡರ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಎಸ್. ಸಿದ್ದೇಗೌಡ ಸ್ಪಷ್ಟಪಡಿಸಿದ್ದಾರೆ. ಉಪ್ಪು ಮುಟ್ಟಿಪ್ರಮಾಣ ಮಾಡಿರುವ ಅವರು, ನಾನು ಸಿದ್ದರಾಮಯ್ಯ ಅವರಿಗೆ ಮೋಸ ಮಾಡಿಲ್ಲ. ಚಾಮುಂಡಿ ತಾಯಿ ಆಣೆಗೂ ನಾನು ತಪ್ಪು ಮಾಡಿಲ್ಲ. ನಾನು ಫೋನ್ ಸ್ವಿಚ್ ಆಫ್ ಮಾಡಿಲ್ಲ, ನಾನು ಪ್ರಾಮಾಣಿಕ ಹೋರಾಟ ಮಾಡಿದ್ದೇನೆ. 500 ಜನರ ಗುಂಪು ಕಟ್ಟಿಕೊಂಡು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಜಿಪಂ ಮಾಜಿ ಅಧ್ಯಕ್ಷ ಕೆ. ಮರೀಗೌಡ ಕ್ಷೇತ್ರವನ್ನು ಹದಗೆಡಿಸಿದ್ದಾರೆ. ಸಿದ್ದರಾಮಯ್ಯ ಅವರ ಬಳಿ ಕೋಟೆಹುಂಡಿ ಮಹದೇವ ಹೋಗಿ ಫಿಟ್ಟಿಂಗ್ ಇಟ್ಟಿದ್ದಾರೆ. ಸಿದ್ದರಾಮಯ್ಯ ಅವರನ್ನು ನಾನೇ ಭೇಟಿ ಮಾಡಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಒಂದು ಮತವಾದರೂ ಹೆಚ್ಚು ಪಡೆದು ಗೆಲ್ಲುತ್ತೇನೆ: ಲಕ್ಷ್ಮೀ ಹೆಬ್ಬಾಳಕರ
ನನ್ನ ಸೋಲಿಸುವ ಸಿದ್ದು ಆಸೆ ತಪ್ಪಲ್ಲ: ಈ ಚುನಾವಣೆಯಲ್ಲಿ ನನ್ನನ್ನು ಸೋಲಿಸಬೇಕೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಸೆ ತಪ್ಪಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ಚಾಮುಂಡೇಶ್ವರಿಯಲ್ಲಿ ಗೆಲುವು ಪಡೆದಿದ್ದೇನೆ. ಈಗ ಕೇಳಬೇಕಾ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಸಿದ್ದರಾಮಯ್ಯ ಅವರು 224 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಸೋಲಿಸಬೇಕಿದೆ, ಅದನ್ನೇ ಇಲ್ಲೂ ಹೇಳಿದ್ದಾರೆ. ಅದರಲ್ಲಿ ವಿಶೇಷವೇನೂ ಇಲ್ಲ. ಕಳೆದ ಚುನಾ ವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನರು ಸೋಲಿಸಿದ್ದಾರೆಂಬ ನೋವು ಅವರಲ್ಲಿ ಉಳಿದುಕೊಂಡಿದೆ. ಈ ಚುನಾವಣೆಯಲ್ಲಿ ಸಂತೋಷ ಕೊಡುವಂತೆ ಮತದಾರರಲ್ಲಿ ಕೇಳುತ್ತಿದ್ದಾರಷ್ಟೆ ಎಂದರು.