ಗ್ಯಾರಂಟಿ ಯೋಜನೆಗಳು ಹೊರೆಯಾಗಿಲ್ಲ, ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಕೆಲ ಮಹಿಳೆಯರು ಟಿಕೆಟ್ ಬೇಡ ಎನ್ನುತ್ತಿದ್ದಾರೆ. ಆ ಬಗ್ಗೆ ಚರ್ಚೆ ನಡೆಸುವುದಾಗಷ್ಟೇ ಹೇಳಿದ್ದಾರೆ. ಸಿಎಂ ಕೂಡ ಯೋಜನೆ ನಿಲ್ಲಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ರಾಜಕೀಯವಾಗಿ ಈ ವಿಷಯವನ್ನು ಚರ್ಚಿಸುವುದು ಬೇಡ ಎಂದ ಸಚಿವ ಎನ್. ಚಲುವರಾಯಸ್ವಾಮಿ
ಮಂಡ್ಯ(ನ.02): ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಯೂ ಇಲ್ಲ. ಅವುಗಳನ್ನು ನಿಲ್ಲಿಸುವ ಪ್ರಶ್ನೆಯೂ ಸರ್ಕಾರದ ಮುಂದಿಲ್ಲ ಎಂದು ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ನಗರದ ಸರ್‌ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಕ್ತಿ ಯೋಜನೆಯನ್ನು ನಿಲ್ಲಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಕೆಲ ಮಹಿಳೆಯರು ಟಿಕೆಟ್ ಬೇಡ ಎನ್ನುತ್ತಿದ್ದಾರೆ. ಆ ಬಗ್ಗೆ ಚರ್ಚೆ ನಡೆಸುವುದಾಗಷ್ಟೇ ಹೇಳಿದ್ದಾರೆ. ಸಿಎಂ ಕೂಡ ಯೋಜನೆ ನಿಲ್ಲಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ರಾಜಕೀಯವಾಗಿ ಈ ವಿಷಯವನ್ನು ಚರ್ಚಿಸುವುದು ಬೇಡ ಎಂದರು.
ಕುಮಾರಸ್ವಾಮಿ ಎಲ್ಲಿ ಮಣ್ಣಾಗುವರೋ ನನಗೆ ಸಂಬಂಧವಿಲ್ಲ: ಸಚಿವ ಚಲುವರಾಯಸ್ವಾಮಿ
ಗ್ಯಾರಂಟಿ ಯೋಜನೆಗಳ ಜಾರಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಿಲ್ಲ. ಯಾವುದೇ ವಿಧವಾದ ಮಾಸಾಶನ ನೀಡುವುದನ್ನೂ ನಿಲ್ಲಿಸಿಲ್ಲ. ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳಿಗೆ ಹಣ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಒಳ್ಳೆಯ ಕೆಲಸವನ್ನು ಸಹಿಸದೆ ವಿಪಕ್ಷಗಳು ಟೀಕೆ ಮಾಡುತ್ತಿವೆ ಎಂದು ದೂಷಿಸಿದರು.
ನ್ಯಾಯಬದ್ಧವಾಗಿ ಕೇಂದ್ರ ಸರ್ಕಾರ ನೀಡಬೇಕಿದ್ದ ತೆರಿಗೆ ಹಣವನ್ನು ನೀಡದಿದ್ದಾಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಹಣ ಬಿಡುಗಡೆ ಮಾಡಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಬಿಜೆಪಿಯವರು ಸಂಸದರಾಗಿದ್ದುಕೊಂಡು ತೆರಿಗೆ, ಬರ ಪರಿಹಾರ ಹಣವನ್ನು ಕೇಂದ್ರದಿಂದ ಕೊಡಿಸಲಾಗಲಿಲ್ಲ. ರಾಜ್ಯ ಸರ್ಕಾರ ಒಳ್ಳೆಯ ಕೆಲಸಗಳನ್ನು ಮಾಡುವಾಗ ಅದನ್ನು ಬೆಂಬಲಿಸಬೇಕೇ ಹೊರತು ಟೀಕಿಸಬಾರದು ಎಂದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಷಡ್ಯಂತ್ರ ಮಾಡುವುದೇನಿದೆ. ಗೆಲುವಿಗೆ ಬೇಕಾದ ತಂತ್ರಗಳನ್ನು ರೂಪಿಸುವುದು ಸಹಜ. ನಿಖಿಲ್ ಕುಮಾರಸ್ವಾಮಿ ಎರಡು ಚುನಾವಣೆಯಲ್ಲಿ ಸೋತಿದ್ದಾರೆ. ಸಹಜವಾಗಿ ನೋವಿನಿಂದ ಮಾತನಾಡಿರಬಹುದು. ಸಿ.ಪಿ. ಯೋಗೇಶ್ವರ್ ಕೂಡ ಸೋತಿಲ್ಲವೇ, ಚನ್ನಪಟ್ಟಣದ ಕೆರೆಗಳನ್ನೆಲ್ಲಾ ತುಂಬಿಸಿ ಭಗೀರಥ ಎನಿಸಿಕೊಂಡಿದ್ದವರು ಚುನಾವಣೆಯಲ್ಲಿ ಸೋತರು. ಅದೂ ಕೂಡ ಷಡ್ಯಂತ್ರ ವಲ್ಲವೇ ಅವರಿಗೆ ನೋವಾಗುವುದಿಲ್ಲವೇ ಎಂದು ಸುದ್ದಿಗಾರರ ಪ್ರಶ್ನೆಗೆ ಮರು ಪ್ರಶ್ನೆ ಹಾಕಿದರು.
ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ರೈತರು ಆತಂಕಕಕ್ಕೆ ಒಳಗಾಗುವುದು ಬೇಡ. ಆರ್ ಟಿಸಿಯಲ್ಲಿ ವಕ್ ಆಸ್ತಿ ಎಂದು ಬಂದಾಕ್ಷಣ ಅದು ವಕ್ಸ್ ವಶವಾಗುವುದಿಲ್ಲ. ಅದನ್ನು ಕಾರ್ಯರೂಪಕ್ಕೆ ತರದಂತೆ ಜಿಲ್ಲಾಡಳಿತಕ್ಕೆ ತಿಳಿಸುತ್ತೇನೆ. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಕ್ರಮ ವಹಿಸುವ ಭರವಸೆ ನೀಡಿದರು. ಶಾಸಕ ಪಿ.ರವಿಕುಮಾರ್, ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ, ನಗರಸಭೆ ಅಧ್ಯಕ್ಷ ನಾಗೇಶ್, ಮಾಜಿ ಅಧ್ಯಕ್ಷ ಎಚ್. ಎಸ್.ಮಂಜು, ಜಿಲ್ಲಾ ಕಾಂಗ್ರೆಸ್ ಮಹಿಳಾಧ್ಯಕ್ಷೆ ಅಂಜನಾ ಇದ್ದರು.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ತೀರ್ಮಾನವೇ ಅಂತಿಮವಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ
ಅಖಿಲ ಭಾರತ ಕನ್ನಡ ಸಾಹಿತ್ಯ ಸ ಮ್ಮೇಳನಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ತೀ ರ್ಮಾನವೇ ಅಂತಿಮವಲ್ಲ. ಸಮ್ಮ ಳನಾಧ್ಯಕ್ಷರ ಆಯ್ಕೆಯಲ್ಲಿ ಪರಂಪರೆ ಯನ್ನು ನಾವು ಮರೆಯುವಂತಿಲ್ಲ, ಸಾಹಿತಿಗಳಿಗೆ ಪ್ರಾತಿನಿಧ್ಯತೆ ನೀಡ ಬೇಕಿದೆ. ಆಯ್ಕೆಯಲ್ಲಿ ಯಾವುದೇ ವೈರುಧ್ಯಗಳು ಎದುರಾಗದಂತೆ ಎಚ್ಚರ ವಹಿಸುವುದಾಗಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ ರು. ಸಮ್ಮೇಳನಕ್ಕೆ ಸರ್ಕಾರ 30 ಕೋಟಿ ರು. ನೀಡುತ್ತಿದೆ. ಪರಿಷತ್ ಅಧ್ಯಕ್ಷರು ಏಕಪಕೀಯವಾಗಿ ತೀರ್ಮಾನ ಕೈಗೊ ಳ್ಳಲಾಗುವುದಿಲ್ಲ. ಜಿಲ್ಲಾಡಳಿತ, ಶಾಸ ಕರು ಎಲ್ಲರೂ ಇರುತ್ತಾರೆ. ಸಮ್ಮೇಳನಾ ಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳು-ಸಾಹಿತ್ಯ ತರರ ಕುರಿತು ಏನೇ ಚರ್ಚೆ ನಡೆದರೂ ಅಂತಿಮ ತೀರ್ಮಾನ ಒಳ್ಳೆಯದಾಗಿರುತ್ತದೆ ಎಂದರು.
ಬಿಜೆಪಿಯಿಂದ ಸಿಡಿದೆದ್ದ ಯೋಗಿ ಕಾಂಗ್ರೆಸ್ ಸಂಪರ್ಕದಲ್ಲಿ: ಸಚಿವ ಚಲುವರಾಯಸ್ವಾಮಿ ಹೇಳಿದ್ದಿಷ್ಟು
ಉಪ ಚುನಾವಣೆ ಬಳಿಕ ಮೈಷುಗರ್ ಪುನಶ್ಚತನ
ರಾಜ್ಯದಲ್ಲಿ ಉಪ ಚುನಾವಣೆ ಮುಗಿದ ಬಳಿಕ ಮೈಷುಗರ್‌ಕಾರ್ಖಾನೆಯ ಆಧುನೀಕರಣ ಕುರಿತಂತೆ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಎರಡು ಮಾದರಿಯ ವರದಿಗಳು ಸರ್ಕಾರದ ಮುಂದಿದೆ. ಈಗಿರುವ ಕಾರ್ಖಾನೆಯಲ್ಲೇ ನಿತ್ಯ 6 ರಿಂದ 7 ಸಾವಿರ ಟನ್ ಕಬ್ಬು ಅರೆಯುವಂತೆ ವ್ಯವಸ್ಥೆ ಮಾಡುವುದು. ಡಿಸ್ಟಿಲರಿ, ಎಥೆನಾಲ್ ಘಟಕವನ್ನು ಆರಂಭಿಸುವುದು. ಮೊದಲ ಹಂತದಲ್ಲಿ ಕಬ್ಬು ಅರೆಯುವಿಕೆ ಸಾಮರ್ಥವನ್ನು 5 ಸಾವಿರ ಟನ್‌ಗೆ ಹೆಚ್ಚಿಸುವುದು. ಎರಡನೇ ಹಂತದಲ್ಲಿ ಕಬ್ಬು ಬೆಳೆಯುವ ಪ್ರದೇಶವನ್ನು ಹೆಚ್ಚಿಸಿಕೊಂಡು ಮತ್ತೆ 5 ಸಾವಿರ ಟನ್ ಕಬ್ಬು ಅರೆಯುವಿಕೆ ಸಾಮ ರ್ಥ ಹೆಚ್ಚುಸುವುದು. ಇಲ್ಲದಿದ್ದರೆ ಸಾತನೂರು ಫಾರಂನಲ್ಲಿ ಹೊಸದಾಗಿ ಸಕ್ಕರೆ ಕಾರ್ಖಾನೆ ಆರಂಭಿಸುವುದು ಎರಡನೇ ಆಯ್ಕೆಯಾಗಿದೆ. ಈ ಕುರಿತು ಮೈಷುಗರ್‌ವ್ಯಾಪ್ತಿಗೆ ಒಳಪಡುವ ಮೂವರು ಶಾಸಕರೊಟ್ಟಿಗೆ ಕುಳಿತು ಚರ್ಚಿಸಿ, ನಂತರ ತಜ್ಞರ ವರದಿಗಳನ್ನೂ ಮುಂದಿಟ್ಟುಕೊಂಡು ಸಿಎಂ ಮತ್ತು ಡಿಸಿಎಂ ಜೊತೆ ಸಮಾಲೋಚಿಸಿ ನಿರ್ಧಾರ ಮಾಡಲಾಗುವುದು ಎಂದರು.