ಶಿವಮೊಗ್ಗ, ವಿಜಯಪುರದಲ್ಲಿ ಹೊಸದಾಗಿ ಆಹಾರ ಪಾರ್ಕ್‌: ಸಚಿವ ಚಲುವರಾಯಸ್ವಾಮಿ

ಶಿವಮೊಗ್ಗದ ಸೋಗಾನೆ ಮತ್ತು ವಿಜಯಪುರದ ಇಟ್ಟಂಗಿಹಾಳದಲ್ಲಿ ಹೊಸದಾಗಿ ಆಹಾರ ಪಾರ್ಕ್‌ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.

New food park in Shivamogga and Vijayapura Says Minister N Chaluvarayaswamy gvd

ವಿಧಾನಸಭೆ (ಜು.25): ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು ಉತ್ತೇಜಿಸಲು ಅಗತ್ಯವಿರುವ ಆಹಾರ ಪಾರ್ಕ್‌ಗಳ ನಷ್ಟದ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುವುದು. ಅದರ ಜತೆಗೆ ಶಿವಮೊಗ್ಗದ ಸೋಗಾನೆ ಮತ್ತು ವಿಜಯಪುರದ ಇಟ್ಟಂಗಿಹಾಳದಲ್ಲಿ ಹೊಸದಾಗಿ ಆಹಾರ ಪಾರ್ಕ್‌ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದರು.

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಸದ್ಯ ನಾಲ್ಕು ಆಹಾರ ಪಾರ್ಕ್‌ಗಳಿದ್ದು, ಅದರಲ್ಲಿ ಮಾಲೂರು ಆಹಾರ ಪಾರ್ಕ್‌ ಹೊರತುಪಡಿಸಿ ಉಳಿದ ಮೂರು ಆಹಾರ ಪಾರ್ಕ್‌ಗಳು ನಷ್ಟದಲ್ಲಿವೆ ಎಂಬ ಮಾಹಿತಿಯಿದೆ. ಅವುಗಳ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗುವುದು. ಅದರ ಜತೆಗೆ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು ಉತ್ತೇಜಿಸಲು ಶಿವಮೊಗ್ಗ ಮತ್ತು ವಿಜಯಪುರದಲ್ಲಿ ಹೊಸ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಶೀಘ್ರದಲ್ಲಿ ಅವುಗಳ ಸ್ಥಾಪನೆಗೆ ಸಂಬಂಧಿಸಿದ ಕೆಲಸಗಳು ಆರಂಭವಾಗಲಿವೆ ಎಂದು ವಿವರಿಸಿದರು.

ಪ್ರಕೃತಿ, ಚಾಮುಂಡಿದೇವಿ ಕಾಂಗ್ರೆಸ್‌ ಸರ್ಕಾರದ ಪರವಿದೆ: ಸಿಎಂ ಸಿದ್ದರಾಮಯ್ಯ

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರ ಜತೆಗೆ ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸುವ ಸಲುವಾಗಿ ಕಾವೇರಿ ನದಿ ತೀರದಲ್ಲಿ ವಾರಾಣಸಿಯ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಿ 1 ತಿಂಗಳ ಒಳಗಾಗಿ ವರದಿ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚಿಸಿದ್ದಾರೆ. ಭರ್ತಿಯ ಹಂತ ತಲುಪಿರುವ ಕೆಆರ್‌ಎಸ್‌ ಆಣೆಕಟ್ಟಿಗೆ ಸೋಮವಾರ ಡಿ.ಕೆ. ಶಿವಕುಮಾರ್‌ ಅವರು ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯದ ಶಾಸಕರೊಂದಿಗೆ ಭೇಟಿ ನೀಡಿ ವೀಕ್ಷಿಸಿದರು.

ಈ ವೇಳೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಕಾವೇರಿ ನದಿ ತಟದಲ್ಲಿ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಅದನ್ನು ಪುರಸ್ಕರಿಸಿರುವ ಡಿ.ಕೆ. ಶಿವಕುಮಾರ್‌, ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿ ಕಾವೇರಿ ಆರತಿ ಅನುಷ್ಠಾನ ಕುರಿತು ವರದಿ ನೀಡುವಂತೆ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ರಾಜ್ಯದ ಜೀವನದಿ ಎಂದೇ ಗುರುತಿಸಿರುವ ಕಾವೇರಿ ನದಿಗೆ ನಮನ ಹಾಗೂ ಪೂಜೆ ಸಲ್ಲಿಸಲು ವಾರಾಣಾಸಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಆ ಸಮಿತಿಯು ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಕಾವೇರಿ ಆರತಿ ಮಾಡುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ತಿಳಿಸಲಾಗಿದೆ ಎಂದರು.

ನೀತಿ ಆಯೋಗ ಸಭೆ ಬಹಿಷ್ಕರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ: ಕಾರಣವೇನು?

ಕಾವೇರಿ ಆರತಿ ಅನುಷ್ಠಾನಕ್ಕೂ ಮುನ್ನ ಯಾವ ಜಾಗದಲ್ಲಿ ಆರತಿ ನಡೆಸಬಹುದು ಎಂಬುದನ್ನು ಗುರುತಿಸಲು ಧಾರ್ಮಿಕ ಸ್ಥಳಗಳಿಂದ ತಂಡವನ್ನು ಕರೆಸಲಾಗುವುದು. ಈ ಕಾರ್ಯಕ್ರಮವನ್ನು ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿದಂತೆ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ರೂಪಿಸಿ, ಅನುಷ್ಠಾನಗೊಳಿಸಲಾಗುವುದು ಎಂದು ವಿವರಿಸಿದರು.

Latest Videos
Follow Us:
Download App:
  • android
  • ios