ಬಜೆಟ್‌ನಲ್ಲಿ ಹೆಚ್ಚಿನ ಬದಲಾವಣೆ ಮಾಡದೇ ಹೊಸ ರೂಪ: ಡಿ.ಕೆ.ಶಿವಕುಮಾರ್
ರಾಜ್ಯ ಸರ್ಕಾರ ಜುಲೈನಲ್ಲಿ ಮಂಡಿಸುವ ಬಜೆಟ್‌ನಲ್ಲಿ ಹಿಂದಿನ ಸರ್ಕಾರ ಮಂಡಿಸಿದ್ದ ಬಜೆಟ್‌ಗೆ ಹೆಚ್ಚಿನ ಬದಲಾವಣೆ ಮಾಡದೇ ಹೊಸ ರೂಪ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರು (ಜೂ.22): ರಾಜ್ಯ ಸರ್ಕಾರ ಜುಲೈನಲ್ಲಿ ಮಂಡಿಸುವ ಬಜೆಟ್‌ನಲ್ಲಿ ಹಿಂದಿನ ಸರ್ಕಾರ ಮಂಡಿಸಿದ್ದ ಬಜೆಟ್‌ಗೆ ಹೆಚ್ಚಿನ ಬದಲಾವಣೆ ಮಾಡದೇ ಹೊಸ ರೂಪ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಕುರಿತು ಕಳೆದ ನಾಲ್ಕೈದು ದಿನಗಳಿಂದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಬಜೆಟ್‌ನಲ್ಲಿನ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ತೀರ್ಮಾನ ಮಾಡಲಿದ್ದಾರೆ. ಕಳೆದ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಬದಲಾವಣೆ ಆಗುವುದಿಲ್ಲ. ಅದಕ್ಕೆ ಹೊಸ ರೂಪ ನೀಡಲು ಮುಖ್ಯಮಂತ್ರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಡಿಕೆಶಿ ಭೇಟಿಯಾದ ಶಿವರಾಜ್‌ಕುಮಾರ್ ದಂಪತಿ: ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ದಂಪತಿ, ಬುಧವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದಾಶಿವನಗರದ ಶಿವಕುಮಾರ್ ನಿವಾಸಕ್ಕೆ ಸಹೋದರ ಹಾಗೂ ಸಚಿವ ಮಧು ಬಂಗಾರಪ್ಪ ಜತೆ ಗೀತಾ ಶಿವರಾಜ್‌ಕುಮಾರ್ ದಂಪತಿ ಭೇಟಿ ನೀಡಿ ಮಾತನಾಡಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಶಿವಕುಮಾರ್, ‘ಶಿವರಾಜ್‌ಕುಮಾರ್ ಹಾಗೂ ಗೀತಾ ಶಿವರಾಜ್‌ಕುಮಾರ್ ನನ್ನ ನಿವಾಸಕ್ಕೆ ಆಗಮಿಸಿ ಶುಭ ಹಾರೈಸಿದರು’ ಎಂದು ಹೇಳಿದ್ದಾರೆ.
ಪೊಲೀಸ್ ಠಾಣೆಗಳು ರಾಜಿ ಸಂಧಾನ ಕೇಂದ್ರಗಳಾಗಲು ಬಿಡಲ್ಲ: ಸಚಿವ ಪರಮೇಶ್ವರ್
2014ರಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆ ಚನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೀತಾ ಅವರು ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಅವರು ಶಿವಮೊಗ್ಗದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಸ್ಪರ್ಧೆ ವಿಚಾರ ಗೊತ್ತಿಲ್ಲ: ಶಿವಕುಮಾರ್ ಭೇಟಿ ಬಳಿಕ ಮಾತನಾಡಿದ ಶಿವರಾಜ್ ಕುಮಾರ್, ಇದೊಂದು ಸೌಜನ್ಯ ಭೇಟಿ ಅಷ್ಟೇ. ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಆ ವೇಳೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಆಗಿರಲಿಲ್ಲ. ತಮಿಳು ಸಿನಿಮಾ ಶೂಟಿಂಗ್ ಇತ್ತು ಹೋಗಿದ್ದೆ. ಹೀಗಾಗಿ ಇಂದು ಬಂದು ಭೇಟಿ ಮಾಡಿದ್ದೇವೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ‘ಪತ್ನಿ ಗೀತಾ ಸ್ಪರ್ಧೆ ವಿಚಾರ ಇನ್ನೂ ಏನೂ ಗೊತ್ತಿಲ್ಲ. ತುಂಬಾ ಸಲ ಹಿಂದೆಯೂ ಭೇಟಿಯಾಗಿದ್ದೇನೆ. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಅದೇನೋ ಅವರನ್ನೇ ಕೇಳಿ’ ಎಂದು ಗೀತಾ ಅವರನ್ನು ಮಾತನಾಡಲು ತಿಳಿಸಿದರು.
ಸಿದ್ದರಾಮಯ್ಯ ಮರ್ಯಾದೆ ಇಲ್ಲದ ಬೇಜವಾಬ್ದಾರಿ ಸಿಎಂ: ಶೋಭಾ ಕರಂದ್ಲಾಜೆ
ಪಕ್ಷ, ಪತಿ, ಸಹೋದರ ಹೇಳಿದಂತೆ ನಡೆವೆ: ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿರುವ ಗೀತಾ ಶಿವರಾಜ್‌ಕುಮಾರ್, ‘ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಪಕ್ಷ, ಪತಿ, ಸಹೋದರ (ಮಧು ಬಂಗಾರಪ್ಪ) ನಿರ್ಧರಿಸಿದಂತೆ ಮುಂದುವರೆಯುತ್ತೇನೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಭೇಟಿ ಸೌಹಾರ್ದಯುತ ಭೇಟಿಯಾಗಿದ್ದು ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದರು.