ಬೆಂಗಳೂರು, (ಏ.09): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 10 ತಿಂಗಳು ಕಳೆದಿವೆ. ಸರ್ಕಾರ ರಚನೆ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರುಗಳಿಗೆ ಮಾತ್ರ ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. 
"

ಆದ್ರೆ, ಇತ್ತೀಚೆಗೆ ಬೈ ಎಲೆಕ್ಷನ್‌ನಲ್ಲಿ ಗೆದ್ದು ಸಚಿವರಾದವರಿಗೆ ಈಗ ಜಿಲ್ಲಾ ಉಸ್ತುವಾರಿ ನೇಮಕಕ್ಕೆ ನೀಡಲು ಸಿಎಂ ಪಟ್ಟಿ ಸಿದ್ಧಪಡಿಸಿದ್ದಾರೆ.

ಸಂಪುಟ ರಚನೆ ಸಮಯದಲ್ಲಿ ಸಚಿವರಾದವರಿಗೆ ಒಬ್ಬೊಬ್ಬರಿಗೆ ಎರಡು ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ. ಇದೀಗ ಕೊರೋನಾ ಭೀತಿ ಹೆಚ್ಚಾಗುತ್ತಿದ್ದಂತೆಯೇ ಒಬ್ಬ ಸಚಿವನಿಂದ ಎರಡ್ಮೂರು ಜಿಲ್ಲೆಗಳನ್ನು ನೋಡಿಕೊಳ್ಳಲು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೂತನವಾಗಿ ಸಚಿವರಾದವರಿಗೆ ಜಿಲ್ಲಾ ಉಸ್ತವಾರಿ ವಹಿಸಲು ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ. 

ಸಚಿವರ ಮುಂದೆ ಅಳಲು ತೋಡಿಕೊಂಡ ಸಿಎಂ: ಇದು ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ

ರಾಜ್ಯದಲ್ಲಿ ಲಾಕ್‌ಡೌನ್ ಪರಿಸ್ಥಿತಿ ಹಾಗೂ ಕೊರೋನಾ ವೈರಸ್ ನಿಯಂತ್ರಣದಲ್ಲಿ ಬೇರೆ ರಾಜ್ಯ ಹೋಲಿಕೆ ಮಾಡಿದ್ರೆ ಬಿಎಸ್‌ವೈ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಪ್ರಶಂಸೆ ಸಹ ಸಿಕ್ಕಿದೆ.

ಇದನ್ನು ಹೀಗೆಯಲೇ ಮುಂದುವರಿಸಬೇಕು ಎಂದು ಬಿಎಸ್‌ವೈ ಪಣತೊಟ್ಟಿದ್ದಾರೆ. ಇದರಿಂದ ಪ್ರತಿಯೊಬ್ಬ ಸಚಿವರಿಗೂ ಆಯಾ ಜಿಲ್ಲೆಗಳ ಹೊಣೆ ನೀಡಲು ತೀರ್ಮಾನಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಹೊಣೆ ನೀಡಿದ ಸಚಿವರ ಪಟ್ಟಿ ಹೀಗಿದೆ..