Asianet Suvarna News Asianet Suvarna News

ಹಲವರ ಸೇರ್ಪಡೆ : ಆಯುಧಪೂಜೆಯೊಳಗೆ ಕಾಂಗ್ರೆಸ್‌ ಹೊಸ ಟೀಂ

  •  ಪದಾಧಿಕಾರಿಗಳ ನೇಮಕ ವಿಚಾರವಾಗಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರೊಂದಿಗೆ ಸುದೀರ್ಘವಾಗಿ ಚರ್ಚೆ
  • ಪದಾಧಿಕಾರಿಗಳ ಆಯ್ಕೆ ಗೊಂದಲ ಮುಗಿದಿದ್ದು, ಆಯುಧ ಪೂಜೆಯೊಳಗಾಗಿ ಪದಾಧಿಕಾರಿಗಳ ಪಟ್ಟಿಅಂತಿಮ
new Team will ready in Congress before Ayudha pooja snr
Author
Bengaluru, First Published Sep 29, 2021, 7:12 AM IST
  • Facebook
  • Twitter
  • Whatsapp

 ನವದೆಹಲಿ (ಸೆ.29):  ರಾಜ್ಯ ಕಾಂಗ್ರೆಸ್‌ (Congress) ಪದಾಧಿಕಾರಿಗಳ ನೇಮಕ ವಿಚಾರವಾಗಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದೇನೆ. ಪದಾಧಿಕಾರಿಗಳ ಆಯ್ಕೆ ಗೊಂದಲ ಮುಗಿದಿದ್ದು, ಆಯುಧ ಪೂಜೆಯೊಳಗಾಗಿ ಪದಾಧಿಕಾರಿಗಳ ಪಟ್ಟಿಅಂತಿಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪದಾಧಿಕಾರಿಗಳ ನೇಮಕ ವಿಚಾರವಾಗಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಪದಾಧಿಕಾರಿಗಳ ಆಯ್ಕೆಯನ್ನು ಅದರದೇ ಆದ ಪ್ರತಿಕ್ರಿಯೆ ಮೂಲಕ ಮಾಡಬೇಕು. ಯಾರ ಸಾಮರ್ಥ್ಯ ಏನು? ಯಾರು ಯಾವ ರೀತಿಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ನೋಡಬೇಕು. ಇವೆಲ್ಲವನ್ನೂ ಗಮನಿಸಿ ಆಯುಧ ಪೂಜೆ ಒಳಗೆ ಪದಾಧಿಕಾರಿಗಳ ಪಟ್ಟಿಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಸಂಕ್ರಾಂತಿ ದಿನವೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ, ಪಂಚರತ್ನ ಯೋಜನೆ ಘೋಷಿಸಿದ HDK

ತಳಮಟ್ಟದಲ್ಲಿ ಇಳಿದು ಕೆಲಸ ಮಾಡುವ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು ಎಂಬ ನಿರ್ದೇಶನ ಇದೆ. ಯುವಕರು ಎಂದರೆ ತೀರಾ ಚಿಕ್ಕವಯಸ್ಸಿನವರಲ್ಲ, ಅವರಿಗೆ ತಕ್ಕಮಟ್ಟಿಗೆ ಅನುಭವವೂ ಇರಬೇಕು. ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ. ಯಾರೂ ಹಸ್ತಕ್ಷೇಪ ಮಾಡುವುದಿಲ್ಲ. ಹೀಗಾಗಿ ಸದ್ಯದಲ್ಲೇ ಪದಾಧಿಕಾರಿಗಳ ಪಟ್ಟಿಅಂತಿಮಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೈಕಮಾಂಡ್‌ನಿಂದ ಉಪಚುನಾವಣೆ ಅಭ್ಯರ್ಥಿ ಪ್ರಕಟ:

ಮುಂಬರುವ ಸಿಂದಗಿ ಹಾಗೂ ಹಾನಗಲ್‌ ಉಪ ಚುನಾವಣೆ (Election) ಸಂಬಂಧ ಎಐಸಿಸಿ ಈಗಾಗಲೇ ಒಂದು ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸಲಾಗಿದೆ. ಮತ್ತೊಂದು ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಚರ್ಚಿಸಿ ಹೈಕಮಾಂಡ್‌ಗೆ ಕಳುಹಿಸುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್‌ ಅಂತಿಮ ನಿರ್ಧಾರ ತೆಗೆದುಕೊಂಡು ಪ್ರಕಟಿಸಲಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಅಭ್ಯರ್ಥಿ ಆಯ್ಕೆ ಬಾಕಿ ಇರುವ ಕ್ಷೇತ್ರದಲ್ಲಿ ಕಳೆದ ಬಾರಿ ಪಕ್ಷ ಯಾರಿಗೆ ಟಿಕೇಟ್‌ ನೀಡಿತ್ತೋ ಅವರು ಚುನಾವಣೆ ನಂತರವೂ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ. ಈ ಬಗ್ಗೆ ನಾನು ಬೆಂಗಳೂರಿಗೆ ಮರಳಿದ ಬಳಿಕ ನಾಯಕರೊಂದಿಗೆ ಚರ್ಚಿಸಿ, ಅಂತಿಮ ಹೆಸರುಗಳನ್ನು ಪರಿಶೀಲಿಸಲಾಗುವುದು. ಆದರೆ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಅಂತಿಮ ತೀರ್ಮಾನ ಹೈಕಮಾಂಡ್‌ ಮಾಡುತ್ತದೆ ಎಂದರು.

ಸಿಎಂ ವಿಚಾರ, ವರಿಷ್ಠರು ಹೇಳಿದ್ದೇ ಅಂತಿಮ: ಡಿಕೆಶಿ

ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿದ ಡಿ.ಕೆ. ಶಿವಕುಮಾರ್‌, ‘ಸಿದ್ದರಾಮಯ್ಯ ಅವರ ಹೇಳಿಕೆ ನನಗೆ ಮಾಹಿತಿ ಇಲ್ಲ. ಕಾಂಗ್ರೆಸ್‌ ಪಕ್ಷವೇ ಒಂದು ಕುಟುಂಬ. ನಮ್ಮ ಕುಟುಂಬದಲ್ಲಿ ಯಾವುದೇ ಕಲಹ ಇಲ್ಲ. ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ… ಗಾಂಧಿ ಅವರು ಏನು ಹೇಳುತ್ತಾರೋ ಅದೇ ಅಂತಿಮ’ ಎಂದು ಸ್ಪಷ್ಟಪಡಿಸಿದರು.

Follow Us:
Download App:
  • android
  • ios