ಸಂಡೂರು ಶಾಸಕ ಸ್ಥಾನಕ್ಕೆ ಕಾಂಗ್ರೆಸ್‌ನ ತುಕಾರಾಂ ರಾಜೀನಾಮೆ
ಸಂಡೂರು ಕ್ಷೇತ್ರದ ಶಾಸಕ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಳ್ಳಾರಿ (ಜೂ.14): ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆ ಸಂಡೂರು ಕ್ಷೇತ್ರದ ಶಾಸಕ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಸತ್ ಅಧಿವೇಶನದಲ್ಲಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಬೇಕಾದ ಹಿನ್ನೆಲೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರ? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದೇನು?
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಸಂಸದ ತುಕಾರಾಂ ವಿಧಾನಸಭೆಯ ಸ್ಪೀಕರ್ ಲಭ್ಯವಿಲ್ಲದ ಕಾರಣ, ಅವರ ಅನುಮತಿ ಪಡೆದು ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಂಡೂರು ಕ್ಷೇತ್ರದಿಂದ 2008, 2013, 2018 ಮತ್ತು 2023 ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದರು.
ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ರಾ ದರ್ಶನ್? ಸಿಪಿವೈ ಸ್ಫೋಟಕ ಹೇಳಿಕೆ
ಎಂ.ಕಾಂ. ಪದವೀಧರರಾದ ತುಕಾರಾಂ ಅವರು ವಿಎಸ್ ಲಾಡ್ ಕಂಪನಿಯಲ್ಲಿ ನೌಕರರಾಗಿದ್ದರು. ಕಂಪನಿಯಲ್ಲಿನ ನಿಷ್ಠೆ ಹಿನ್ನೆಲೆ ಸಂತೋಷ ಲಾಡ್ 2008ರಲ್ಲಿ ಮೊದಲ ಬಾರಿಗೆ ಟಿಕೆಟ್ ಕೊಡಿಸಿ ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದ್ರು.ಅಂದಿನಿಂದ ಈವರೆಗೂ ನಡೆದ ಎಲ್ಲಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತುಕಾರಾಂ ಸೋಲಿಲ್ಲದ ಸರದಾರನಾಗಿದ್ದಾರೆ.