Asianet Suvarna News Asianet Suvarna News

ಅಲ್ಪಾವಧಿಯಲ್ಲೇ ಜೆಡಿಎಸ್‌ನಿಂದ ಅಭಿವೃದ್ಧಿ ಕಾರ್ಯ: ನಿಖಿಲ್‌ ಕುಮಾರಸ್ವಾಮಿ

ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ರೋಡ್‌ ಶೋ ನಡೆಸಿ ಮತಯಾಚಿದ ನಿಖಿಲ್‌ ಕುಮಾರಸ್ವಾಮಿ| ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರ ಬದುಕು ಕಷ್ಟದಲ್ಲಿದೆ. ಆದರೆ, ಸರ್ಕಾರಕ್ಕೆ ಮಾತ್ರ ಚುನಾವಣೆಯೇ ಮುಖ್ಯವಾಗಿದೆ| ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕವು ರಾಷ್ಟ್ರದಲ್ಲಿಯೇ ಎರಡನೇ ಸ್ಥಾನಕ್ಕೆ ಬಂದು ನಿಂತಿದೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ ನಿಖಿಲ್‌| 
 

Nikhil Kumaraswamy Says Development Work by JDS in a Short Period of Time grg
Author
Bengaluru, First Published Oct 30, 2020, 10:22 AM IST

ಬೆಂಗಳೂರು(ಅ.30): ಹಣದಿಂದ ಮತಗಳನ್ನು ಖರೀದಿಸುತ್ತೇವೆ ಎಂಬ ದುರಹಂಕಾರದ ಪರಮಾವಧಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಿದ್ದು, ನಿಮ್ಮ ಮತಗಳನ್ನು ದುರುಪಯೋಗಪಡಿಸಿಕೊಂಡವರಿಗೆ ತಕ್ಕಪಾಠ ಕಲಿಸಿ ಎಂದು ಜೆಡಿಎಸ್‌ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

"

ಗುರುವಾರ ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ರೋಡ್‌ ಶೋ ನಡೆಸಿ ಮತಯಾಚಿದ ಅವರು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರ ಬದುಕು ಕಷ್ಟದಲ್ಲಿದೆ. ಆದರೆ, ಸರ್ಕಾರಕ್ಕೆ ಮಾತ್ರ ಚುನಾವಣೆಯೇ ಮುಖ್ಯವಾಗಿದೆ. ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕವು ರಾಷ್ಟ್ರದಲ್ಲಿಯೇ ಎರಡನೇ ಸ್ಥಾನಕ್ಕೆ ಬಂದು ನಿಂತಿದೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. 

ಶಿರಾ ಬೈಎಲೆಕ್ಷನ್:ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದು ಪ್ರಚಾರದ ಅಖಾಡಕ್ಕೆ ಧುಮುಕಿದ ನಿಖಿಲ್‌

ಜೆಡಿಎಸ್‌ ಪಕ್ಷಕ್ಕೆ ಸಿಕ್ಕ ಅಲ್ಪಾವಧಿಯಲ್ಲಿಯೇ ಸಮಾಜಮುಖಿ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. 2018ರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಅಧಿಕಾರವನ್ನು ಕೊಟ್ಟಕಾಂಗ್ರೆಸ್‌, ಅಭಿವೃದ್ಧಿ ವಿಚಾರದಲ್ಲಿ ಅವರ ಕೈಯನ್ನು ಕಟ್ಟಿಹಾಕಿತ್ತು. ದೇಶದ ಇತಿಹಾಸದಲ್ಲಿ ಯಾವುದೇ ಮುಖ್ಯಮಂತ್ರಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿಲ್ಲ, ಅದನ್ನು ಕುಮಾರಸ್ವಾಮಿ ಅವರು ಮಾಡಿ ತೋರಿಸಿದ್ದಾರೆ. ಯುವಕರು ರಾಜಕೀಯಕ್ಕೆ ಬರುವ ಮುಂಚೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಬೆಳಗ್ಗೆ ಒಂದು ಪಕ್ಷ, ಮಧ್ಯಾಹ್ನ ಒಂದು ಪಕ್ಷ, ರಾತ್ರಿ ಒಂದು ಪಕ್ಷ ಬದಲಾಯಿಸುತ್ತಾರೆ. ನಾಳೆ ಬೆಳಗ್ಗೆ ಅವರಿಗೆ ನೀವು ಯಾವ ಪಕ್ಷ ಎಂದು ಕೇಳಿದರೆ, ಅವರು ಯೋಚನೆ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದ ಅವರು, ನನ್ನ ಮತ್ತು ಮುನಿರತ್ನ ಸಂಬಂಧ ಕೇವಲ ಸಿನಿಮಾಗೆ ಮಾತ್ರವಾಗಿದ್ದು, ಸುಖಾಸುಮ್ಮನೆ ಗೊಂದಲ ಸೃಷ್ಟಿಸಬೇಡಿ ಎಂದು ಪುನರುಚ್ಚರಿಸಿದರು.

ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಮುನಿರತ್ನ ಮೊದಲೇ ಸಿನಿಮಾ ನಿರ್ಮಾಪಕರು, ಅವರಿಗೆ ಕಣ್ಣೀರು ಹಾಕುವುದು ಗೊತ್ತು, ಕಣ್ಣೀರು ಹಾಕಿಸುವುದು ಗೊತ್ತು. ಕಾಂಗ್ರೆಸ್‌ನವರಿಗೆ ಚುನಾವಣೆ ಬಂದಾಗ ಜಾತಿ ಮೇಲೆ ಪ್ರೀತಿ ಬಂದಿದೆ. ನಾನು ಕೂಡ ಒಕ್ಕಲಿಗನೇ, ಆದರೆ ಎಲ್ಲಿಯೂ ಒಕ್ಕಲಿಗ ಎಂಬ ಟ್ರಂಪ್‌ ಕಾರ್ಡ್‌ ಬಳಸಿಲ್ಲ. ರಾಷ್ಟ್ರೀಯ ಪಕ್ಷಗಳ ಕಿತ್ತಾಟ ನೋಡುತ್ತಿರುವ ಜನ ನನ್ನನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

Follow Us:
Download App:
  • android
  • ios