ಡಿಕೆಶಿ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜು ಸ್ಥಳಾಂತರ: ನಿಖಿಲ್ ಕುಮಾರಸ್ವಾಮಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಡದಿಂದಲೇ ರಾಮನಗರದ ಮೆಡಿಕಲ್ ಕಾಲೇಜ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಾಮನಗರ (ಸೆ.09): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಡದಿಂದಲೇ ರಾಮನಗರದ ಮೆಡಿಕಲ್ ಕಾಲೇಜ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರ್ಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಏಕೆಂದು ಪ್ರಶ್ನಿಸಿದ್ದಾರೆ.
ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ ಎಂದು ಹೇಳಿದ್ದಾರೆ.
ನಾಯಿಗಳಂತೆ ಕಿತ್ತಾಡುತ್ತಿದ್ದವರೀಗ ಭಾಯಿ-ಭಾಯಿ: ಎಚ್‌ಡಿಕೆ-ಸಿಪಿಐ ವಿರುದ್ದ ಸಂಸದ ಸುರೇಶ್ ವಾಗ್ದಾಳಿ
2006-07ರಲ್ಲೇ 310 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು. ಮತ್ತೆ 25-3-2-19ರಂದು ಸಿಎಂ ಆಗಿದ್ದ ಕುಮಾರಣ್ಣ ಅವರು ಆ ಯೋಜನೆಯ ವೆಚ್ಚವನ್ನು 540 ಕೋಟಿಗೆ ಹೆಚ್ಚಿಸಿದ್ದರು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮೈತ್ರಿ ಸರ್ಕಾರದ ಅವಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಅಂದು ಡಿ.ಕೆ. ಶಿವಕುಮಾರ್ ಅವರೇ ಒತ್ತಡ ಹೇರಿದ್ದರು.
ಬಿಜೆಪಿಯವರು ನಾಥೂರಾಮ್ ಗೋಡ್ಸೆ ವಂಶಸ್ಥರು: ಸಿಎಂ ಸಿದ್ದರಾಮಯ್ಯ
2018ರ ಡಿಸೆಂಬರ್ 13ರಂದು 450 ಕೋಟಿ ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು. ಬಳಿಕ ಬಿಜೆಪಿ ಸರ್ಕಾರ ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ 610 ಕೋಟಿ ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೇರಿಸಿತ್ತು. ಈಗಷ್ಟೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ ಎಂದು ನಿಖಿಲ್ ಕಿಡಿಕಾರಿದ್ದಾರೆ.