ಮಂಡ್ಯದಲ್ಲಿ ಗೆದ್ದ ನಿಖಿಲ್ ಕುಮಾರಸ್ವಾಮಿ, ಸಿಎಂಗೆ ಥ್ಯಾಂಕ್ಸ್ ಎಂದ ಯುವ ನಾಯಕ
ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರ ಇಡುವಲ್ಲಿ ಜೆಡಿಎಸ್ ಯಶಸ್ವಿಯಾಗಿದ್ದು, ಇದಕ್ಕೆ ಸಹಕರಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿಖಿಲ್ ಕುಮಾರಸ್ವಾಮಿ ಥ್ಯಾಂಕ್ಸ್ ಹೇಳಿದ್ದಾರೆ.
ಮಂಡ್ಯ, (ನ.17): ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಮುಂದಾಳತ್ವ ವಹಿಸಿದ್ದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಸಹಾಯದೊಂದಿಗೆ ಸ್ಪಷ್ಟ ಬಹಮತ ಇದ್ದ ಕಾಂಗ್ರೆಸ್‌ಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು.. ಭಾರೀ ಕುತೂಹಲ ಮೂಡಿಸಿದ್ದ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಸಿ.ಪಿ.ಉಮೇಶ್ ಅಧ್ಯಕ್ಷರಾಗಿ ಹಾಗೂ ಜೆಡಿಎಸ್ ಅಭ್ಯರ್ಥಿ ಅಶೋಕ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್-ಬಿಜೆಪಿ ಮೈತ್ರಿ ಸಕ್ಸಸ್: ಫಲ ನೀಡಿದ ಕುಮಾರಸ್ವಾಮಿ, ಬಿಎಸ್‌ವೈ ಭೇಟಿ..!
ಬಹುಮತ ಹೊಂದಿದ್ದ ಕಾಂಗ್ರೆಸ್‌ಗೆ ಅಧಿಕಾರ ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ತಂತ್ರ ಉಪಯೋಗಿಸಿದ್ದು, ಎರಡೂ ಪಕ್ಷಗಳ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಸಿಎಂಗೆ ನಿಖಿಲ್ ಥ್ಯಾಂಕ್ಸ್
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ನಿಖಿಲ್, ಮೈತ್ರಿಕೂಟದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ. ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಹಕರಿಸಿದ ಸಿಎಂ ಬಿಎಸ್‍ವೈಗೆ ಧನ್ಯವಾದ. ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ ಎಂದು ಹೇಳಿದರು.
ಕೆಲ ದಿನಗಳ ಹಿಂದೆ ಇದೇ ಮಂಡ್ಯ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಯಡಿಯೂರಪ್ಪನವರನ್ನ ಭೇಟಿಯಾಗಿದ್ದರು. ಸ್ಪಷ್ಟಬಹುಮತ ಇದ್ದರೂ ಕಾಂಗ್ರೆಸ್‌ನ್ನು ಅಧಿಕಾರದಿಂದ ದೂರ ಇಡಲು ಬಿಎಸ್‌ವೈ-ಎಚ್‌ಡಿಕೆ ಚರ್ಚಿಸಿದ್ದರು. ಅದರಂತೆ ಜೆಡಿಎಸ್-ಬಿಜೆಪಿ ಪ್ಲಾನ್ ವರ್ಕೌಟ್ ಆಗಿದೆ.