ಬೆಂಗಳೂರು, (ಮೇ.24): ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ದಾಂಪತ್ಯಕ್ಕೆ ಇಂದು (ಮೇ.24 ) 66 ವಸಂತಗಳ ಸಂಭ್ರಮ. 

ತಾತ ಹಾಗೂ ಅಜ್ಜಿಯ ವಿವಾಹ ವಾರ್ಷಿಕೋತ್ಸವಕ್ಕೆ ಅವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಶುಭಕೋರಿದ್ದಾರೆ.

ದೊಡ್ಡಗೌಡರಿಗೆ ಬರ್ತ್‌ಡೇ ವಿಶ್ ಮಾಡಿದ D K ಶಿವಕುಮಾರ್‌

ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 66 ವಸಂತಗಳನ್ನು ಪೂರೈಸಿರುವ ನಾಡಿನ ಆದರ್ಶ ದಂಪತಿಗಳಾಗಿರುವ ಪ್ರೀತಿಯ ತಾತ @H_D_Devegowda ಹಾಗೂ ಅಜ್ಜಿ ಚೆನ್ಮಮ್ಮ ಅವರಿಗೆ ವಿವಾಹ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು. pic.twitter.com/GzhfraEvyZ

— Nikhil Kumar (@Nikhil_Kumar_k) May 24, 2020

ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 66 ವಸಂತಗಳನ್ನು ಪೂರೈಸಿರುವ ನಾಡಿನ ಆದರ್ಶ ದಂಪತಿಗಳಾಗಿರುವ ಪ್ರೀತಿಯ ತಾತ ಎಚ್‌ಡಿ ದೇವೇಗೌಡ ಹಾಗೂ ಅಜ್ಜಿ ಚೆನ್ಮಮ್ಮ ಅವರಿಗೆ ವಿವಾಹ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 

ಎಚ್‌ಡಿ ದೇವೇಗೌಡ ಅವರು ಹಾಸನ ತಾಲ್ಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರನ್ನು 1954ರಲ್ಲಿ ವಿವಾಹವಾಗಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಎಚ್‌ಡಿ ದೇವೇಗೌಡರು ತಮ್ಮ 87 ವರ್ಷದ ಜನ್ಮದಿನವನ್ನು ಆಚರಿಸಿದ್ದರು. 

ದೇವೇಗೌಡರ ಜನ್ಮದಿನಕ್ಕೆ ಸಾಕಷ್ಟು ಜನರು ಶುಭಹಾರೈಸಿದ್ದರು. ಇದೀಗ ದೇವೇಗೌಡ ಹಾಗೂ ಚೆನ್ನಮ್ಮ ದಂಪತಿ 66ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.