ಶಕ್ತಿ ಯೋಜನೆಯ ಮಹಿ​ಳೆ​ಯ​ರ ಉಚಿತ ಬಸ್‌ ಸಂಚಾ​ರದ ಸ್ಮಾರ್ಟ್‌ಕಾರ್ಡ್‌ ಅರ್ಜಿಗಳನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಸ್ಮಾರ್ಟ್‌ಕಾರ್ಡ್‌ನಲ್ಲಿ ಏನೇನು ಇರಬೇಕೋ ಅದನ್ನೆಲ್ಲಾ ಸಿದ್ದಪಡಿಸಿಕೊಂಡು ಬಿಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. 

ಬೆಂಗಳೂರು (ಜೂ.17): ಶಕ್ತಿ ಯೋಜನೆಯ ಮಹಿ​ಳೆ​ಯ​ರ ಉಚಿತ ಬಸ್‌ ಸಂಚಾ​ರದ ಸ್ಮಾರ್ಟ್‌ಕಾರ್ಡ್‌ ಅರ್ಜಿಗಳನ್ನು ಏಕಾಏಕಿ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಸ್ಮಾರ್ಟ್‌ಕಾರ್ಡ್‌ನಲ್ಲಿ ಏನೇನು ಇರಬೇಕೋ ಅದನ್ನೆಲ್ಲಾ ಸಿದ್ದಪಡಿಸಿಕೊಂಡು ಬಿಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೂ.15ರಿಂದ ಶಕ್ತಿ ಯೋಜನೆಯ ಸ್ಮಾರ್ಟ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು ಎಂದು ಈ ಹಿಂದೆ ತಿಳಿಸಿದ್ದೆವು. ಆದರೆ, ಸ್ಮಾರ್ಟ್‌ಕಾರ್ಡ್‌ನಲ್ಲಿ ಏನೆಲ್ಲಾ ಅಂಶಗಳು ಇರಬೇಕು ಎಂಬುದರ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಮಾರ್ಟ್‌ ಕಾರ್ಡ್‌ಗಳನ್ನು ನೇರವಾಗಿ ಕೊಡಲು ಸಾಧ್ಯವಿಲ್ಲ. ಅದಕ್ಕಾಗಿ ಸ್ಮಾರ್ಟ್‌ ಕಾರ್ಡ್‌ ಮಾಡುವ ಕೇಂದ್ರಗಳನ್ನು ಹೆಚ್ಚು ಮಾಡಿಕೊಳ್ಳಬೇಕು. ಜೊತೆಗೆ ಅಲ್ಪಾವಧಿ ಟೆಂಡರ್‌ ಕರೆಯಬೇಕು. ಈ ಕುರಿತು ಸಭೆ ನಡೆಸಿ ಕ್ರಮಕೈಗೊಳ್ಳುತ್ತೇವೆ’ ಎಂದರು.

‘ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಯೋಜನೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಕೆಲಸಕ್ಕೆ ಹೋಗುವ, ಶಾಲಾ, ಕಾಲೇಜುಗಳಿಗೆ ಹೋಗುವ ಕಡೆಗಳಲ್ಲಿ ಹೆಚ್ಚಿನ ಸಮಸ್ಯೆಯಿಲ್ಲ. ಆದರೆ, ಧಾರ್ಮಿಕ ಕ್ಷೇತ್ರಗಳತ್ತ ಹೋಗುವವರ ಸಂಖ್ಯೆ ಜಾಸ್ತಿಯಾಗಿದೆ. ಬಸ್ಸಿನ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಬರುತ್ತಿದ್ದು ಒತ್ತಡ ಹೆಚ್ಚಾಗಿದೆ. ಈ ಕುರಿತು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿ, ಏನು ಕ್ರಮಕೈಗೊಳ್ಳಬೇಕೆಂದು ನಿರ್ಧರಿಸಲಾಗುವುದು’ ಎಂದರು.

ಸಹಸ್ರಾರು ಜನರಿಂದ ಅಭಿ-ಅವಿವಾಗೆ ಆಶೀರ್ವಾದ: ಆರತಕ್ಷತೆ ವೇದಿಕೆ ವಿಶೇಷ ಹೂವುಗಳಿಂದ ಅಲಂಕಾರ

ನಿವೃತ್ತಿಗೆ ತಕ್ಕಂತೆ ನೇಮಕಾತಿ: ಸಾರಿಗೆ ನಿಗಮಗಳಿಗೆ ಸಿಬ್ಬಂದಿ ನೇಮಕ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳನ್ನು ಒದಗಿಸುವಂತೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್‌ ಅವರು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಸಾರಿಗೆ ನಿಗಮಗಳಲ್ಲಿ 1.04 ಲಕ್ಷಕ್ಕೂ ಹೆಚ್ಚು ನೌಕರರು ಇದ್ದಾರೆ. ನಿವೃತ್ತಿ ಎಷ್ಟು ಜನರು ಆಗುತ್ತಾರೋ ಅಷ್ಟುಜನ ಹೊಸಬರನ್ನು ನೇಮಕ ಮಾಡಲಾಗುವುದು. ಕೊರೋನಾ ವೇಳೆ ನೇಮಕಾತಿ ಮಾಡಿಕೊಂಡಿಲ್ಲ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಶೀಘ್ರವೇ ಸಮಸ್ಯೆ ಬಗೆಹರಿಸುತ್ತೇವೆ’ ಎಂದರು.

10 ವರ್ಷ ಮಹಿಳೆಯರಿಗೆ ಉಚಿತ ಪ್ರಯಾಣ: ಶಕ್ತಿ ಯೋಜನೆಯು ಮುಂದಿನ ಹತ್ತು ವರ್ಷಗಳ ಕಾಲ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶಕ್ತಿ ಯೋಜನೆ ಜಾರಿ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಈ ಕಾರ್ಯಕ್ರಮ ಐದು ವರ್ಷ ಪೂರ್ತಿ ಇರುತ್ತದೆ. ಐದು ವರ್ಷದ ನಂತರ ಚುನಾವಣೆ ಆಗುತ್ತದೆ. ಮತ್ತೆ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಅಂದರೆ ಹತ್ತು ವರ್ಷ ಶಕ್ತಿ ಯೋಜನೆ ಜಾರಿಯಲ್ಲಿರುತ್ತದೆ ಎಂದು ಟೀಕಾಕಾರರಿಗೆ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ ಎಂದರು.

ನುಡಿದಂತೆ ನಡೆಯುವುದು ನಮಗೆ ಹೊಸದೇನು ಅಲ್ಲ. 2013ರಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಸಿದ್ದರಾಮಯ್ಯನೇತೃತ್ವದ ಸರ್ಕಾರ ಐದು ವರ್ಷಗಳಲ್ಲಿ ಈಡೇರಿಸಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅವರು ಕೊಟ್ಟ600 ಆಶ್ವಾಸನೆಗಳಲ್ಲಿ ಶೇ.10ರಷ್ಟು ಭರವಸೆಗಳನ್ನು ಅವರು ಈಡೇರಿಸಿದರು. ಇದೇ ಬಿಜೆಪಿಗೂ ನಮಗೂ ಇರುವ ವ್ಯತ್ಯಾಸ. ನಾವು ಏನು ಹೇಳುತ್ತೇವೋ ಅದನ್ನು ಮಾಡೇ ಮಾಡುತ್ತೇವೆ ಎಂದು ಹೇಳಿದರು.

ಸಾಮ, ದಾನ, ಭೇದ, ದಂಡ ನಾಲ್ಕನ್ನು ಬಳಸಿ ಮರು ಮತಾಂತರಕ್ಕೆ ಮುಂದಾಗಬೇಕು: ಸಿ.ಟಿ.ರವಿ

ಶಕ್ತಿ ಯೋಜನೆಗೆ ಯಾವುದೇ ಎಪಿಎಲ್‌, ಬಿಪಿಎಲ್‌ ಎನ್ನುವ ಆಕ್ಷೇಪಣೆಯೂ ಇಲ್ಲ. ಎಲ್ಲ ಮಹಿಳೆಯರಿಗೂ ಇದು ಅನ್ವಯವಾಗಲಿದೆ. ಅಂತರರಾಜ್ಯ, ಎಸಿ, ವೋಲ್ವೋ ಬಸ್‌ಗಳನ್ನು ಹೊರತುಪಡಿಸಿ ಶೇ.90ಕ್ಕಿಂತ ಹೆಚ್ಚು ಬಸ್‌ಗಳಲ್ಲಿ ಮಹಿಳೆಯರು ರಾಜ್ಯದ ಯಾವುದೇ ಮೂಲೆಗೆ ಬೇಕಾದರು ಸಂಚರಿಸಬಹುದು. ವಿದ್ಯಾರ್ಥಿನಿಯರಿಗೂ ಇದು ಅನ್ವಯವಾಗುತ್ತದೆ. ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಸಾಧಿಸಲು ಶ್ರಮಿಸಬೇಕು ಎಂದರು.