ಬೆಂಗಳೂರು, (ಫೆ.04): ಸಂಪುಟ ಪುನಾರಚನೆ ಮಾಡಲ್ಲ, ವಿಸ್ತರಣೆ ಮಾತ್ರ ಎಂದು ಹೇಳುವ ಮೂಲಕ ಸಿಎಂ ಬಿಎಸ್‌ ಯಡಿಯೂರಪ್ಪ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇಂದು (ಮಂಗಳವಾರ) ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಡಿಯೂರಪ್ಪ ಸ್ಪಷ್ಟಪಡಿಸಿದರು.  ಈ ಮೂಲಕ ಸಚಿವರು ನಿಟ್ಟುಸಿರು ಬಿಟ್ಟರು.

ಕೆಲ ಅಂದ್ರೆ ಮೂವರು ಹಾಲಿ ಸಚಿವರನ್ನು ಸಂಪುಟದಿಂದ ಕೊಕೆ ನೀಡಿ, ಗೆದ್ದ 11 ಶಾಸಕರುಗಳ ಜತೆಗೆ ಮೂಲ ಬಿಜೆಪಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗುತ್ತದೆ ಎನ್ನವ ಸುದ್ದಿ ಹಬ್ಬಿತ್ತು.

10+3 ಅಡಿಯಲ್ಲಿ ಸಂಪುಟ ವಿಸ್ತರಣೆ: ಗೆದ್ದ ಓರ್ವ ಶಾಸಕನಿಗಿಲ್ಲ ಮಂತ್ರಿಗಿರಿ.!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ  ಶಶಿಕಲಾ ಜೊಲ್ಲೆ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಕೊಕ್ ನೀಡಲಾಗುತ್ತೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಹರಿದಾಡುತ್ತಿದ್ದವು. ಇದರಿಂದ ಸಚಿವರಗಳು ಸಹ ಆತಂಕದಲ್ಲಿದ್ದರು.

ಆದ್ರೆ, ಇದೀಗ ಎಲ್ಲಾ ಗೊಂದಲಗಳಿಗೆ ಸ್ವತಃ ಸಿಎಂ ಯಡಿಯೂರಪ್ಪ ತೆರೆ ಎಳೆದಿದ್ದು, ಹಾಲಿ ಸಚಿವರು ಫುಲ್ ಖುಷ್ ಆಗಿದ್ದಾರೆ.

ಇನ್ನು 2ನೇ ಹಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇದೇ ಫೆ.6  ಗುರುವಾರ ನಡೆಯಲಿದ್ದು, 10+3 ಅಂದ್ರೆ ಬೈ ಎಲೆಕ್ಷನ್‌ನಲ್ಲಿ ಗೆದ್ದ 10 ಶಾಸಕರು ಹಾಗೂ ಮೂವರು ಮೂಲ ಬಿಜೆಪಿಗರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಲು ಬಿಎಸ್‌ವೈ ತೀರ್ಮಾನಿಸಿದ್ದಾರೆ. 

ಮಹೇಶ್ ಕುಮಟಳ್ಳಿ, ಅರುಣ್ ಪೂಜಾರಿ ಹೊರತುಪಡಿಸಿ ಇನ್ನುಳಿದವರು ಅಂದ್ರೆ ಬೈ ಎಲೆಕ್ಷನ್‌ನಲ್ಲಿ ಗೆದ್ದ 10 ಶಾಸಕರು ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಆಗಿದೆ. 

ಇನ್ನು ಮೂಲ ಬಿಜೆಪಿಗರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಮಂತ್ರಿಗಿರಿ ಫಿಕ್ಸ್ ಆಗಿದೆ. ಆದ್ರೆ, ಈ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ.