Asianet Suvarna News Asianet Suvarna News

ಈಗಾಗಲೇ ಘೋಷಿಸಿರುವ ಅಭ್ಯರ್ಥಿಗಳ ಹೆಸರು ಬದಲಾವಣೆ ಇಲ್ಲ: ವಿಜಯೇಂದ್ರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಈಗಾಗಲೇ 20 ಕ್ಷೇತ್ರಗಳಿಗೆ ಘೋಷಿಸಿರುವ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು. 

No change in name of candidates already announced Says BY Vijayendra gvd
Author
First Published Mar 21, 2024, 7:16 AM IST

ನವದೆಹಲಿ (ಮಾ.21): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಈಗಾಗಲೇ 20 ಕ್ಷೇತ್ರಗಳಿಗೆ ಘೋಷಿಸಿರುವ ಅಭ್ಯರ್ಥಿಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು. ಈ ಮೂಲಕ ಈಗಾಗಲೇ ಘೋಷಿಸಿರುವ ಅಭ್ಯರ್ಥಿಗಳ ಹೆಸರನ್ನು ಪಕ್ಷವು ಮರುಪರಿಶೀಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. 

ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಕಿ ಉಳಿದಿರುವ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರಿನ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜತೆಗೆ ಮಂಗಳವಾರ ರಾತ್ರಿ ಚರ್ಚೆಯಾಗಿದೆ. ಸುಮಾರು 30 ನಿಮಿಷ ಚರ್ಚೆ ನಡೆದು, ಎಲ್ಲವೂ ಒಂದು ಹಂತಕ್ಕೆ ಬಂದಿದೆ. ಅಂತಿಮವಾಗಿ ಮಾ.22ರಂದು ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಆ ಬಳಿಕ ಹೆಸರು ಘೋಷಣೆಯಾಗಲಿದೆ ಎಂದರು. ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಹೀಗಾಗಿ ಯಾವುದೇ ಕ್ಷೇತ್ರದಲ್ಲೂ ಟಿಕೆಟ್‌ಗೆ ಸಂಬಂಧಿಸಿ ಒಮ್ಮತದ ನಿರ್ಧಾರ ಆಗುವುದಿಲ್ಲ ಎಂದು ಇದೇ ವೇಳೆ ವಿಜಯೇಂದ್ರ ಹೇಳಿದರು.

ನಾನೊಬ್ಬನೇ ಅಭ್ಯರ್ಥಿಗಳ ಆಯ್ಕೆ ಮಾಡಲು ಸಾಧ್ಯವಿಲ್ಲ: ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಅವರು ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ಅವರನ್ನು ಜನರು ಒಪ್ಪಿಕೊಳ್ಳುತ್ತಾರೆ. ಯಾರೇ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರೂ ಅದು ರಾಷ್ಟ್ರೀಯ ನಾಯಕರ ಆಯ್ಕೆ. 

ಯಡಿಯೂರಪ್ಪ ಅವರ ಮೇಲೆ ಅಸಮಾಧಾನವಿದೆ: ಮಾಜಿ ಸಚಿವ ಮಾಧುಸ್ವಾಮಿ

ಈ ಹಿಂದೆ ಕೂಡ ವರುಣಾದಲ್ಲಿ ನನಗೆ ಟಿಕೆಟ್‌ ಕೈ ತಪ್ಪಿತ್ತು. ಆದರೆ, ಅದು ವರಿಷ್ಠರ ತೀರ್ಮಾನ ಎಂದುಕೊಂಡು ಪಕ್ಷದ ಕೆಲಸ ಮಾಡಿದ್ದೇನೆ. ಈಶ್ವರಪ್ಪನವರು ಹಿರಿಯರಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲವು ಕೂಡ ಬಗೆಹರಿಯುತ್ತದೆ ಎಂದರು. ಜೆಡಿಎಸ್ ಮೈತ್ರಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಏನು ಚರ್ಚೆ ಆಗಿದಿಯೋ ಗೊತ್ತಿಲ್ಲ. ಸೀಟ್ ಶೇರಿಂಗ್ ವಿಚಾರವಾಗಿ ಎಲ್ಲವು ಬಗೆಹರಿಯುತ್ತದೆ. ಯಾರು ಅಭ್ಯರ್ಥಿ ಆಗಿ ತೀರ್ಮಾನ ಆಗಿದಿಯೋ ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಅದಕ್ಕೆ ಗೌರವ ಕೊಡಬೇಕಾಗುತ್ತದೆ ಎಂದು ತಿಳಿಸಿದರು.

Follow Us:
Download App:
  • android
  • ios