ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ: ಮಾಜಿ ಸಂಸದ ಉಗ್ರಪ್ಪ

ಯಾವ ಉದ್ದೇಶದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಯಾವುದೇ ವ್ಯಕ್ತಿಗೆ ಅಧಿಕಾರ ಕೊಡುವ ನಿರ್ಧಾರ ಹೈಕಮಾಂಡ್ ಬಿಟ್ಟಿದ್ದು. ರಾಜ್ಯದ ನಾಯಕತ್ವದ ಬಗ್ಗೆ ಹೈಕಮಾಂಡ್​​ಗೆ ತೃಪ್ತಿ ಇದೆ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವಿಚಾರವಾಗಿ ಕೊಟ್ಟೂರಿನಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯಿಸಿದ್ದಾರೆ. 

No confusion in Congress party Says Former MP VS Ugrappa gvd

ವಿಜಯನಗರ (ಜು.23): ಯಾವ ಉದ್ದೇಶದಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಯಾವುದೇ ವ್ಯಕ್ತಿಗೆ ಅಧಿಕಾರ ಕೊಡುವ ನಿರ್ಧಾರ ಹೈಕಮಾಂಡ್ ಬಿಟ್ಟಿದ್ದು. ರಾಜ್ಯದ ನಾಯಕತ್ವದ ಬಗ್ಗೆ ಹೈಕಮಾಂಡ್​​ಗೆ ತೃಪ್ತಿ ಇದೆ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವಿಚಾರವಾಗಿ ಕೊಟ್ಟೂರಿನಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲವೇ ಇಲ್ಲ. ಬದಲಾಗಿ ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಗೊಂದಲಗಳಿವೆ. ಬಿಜೆಪಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ. 

ಬೆಂಗಳೂರಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಸಭೆ ನಡೆದಿದೆ. ಸಭೆ ಬಗ್ಗೆ ಬಿಜೆಪಿ ವಲಯದಲ್ಲಿ ತಳಮಳ ಉಂಟಾಗಿದೆ. ಪ್ರಧಾನಿ ಮೋದಿ ಮಿತ್ರ ಪಕ್ಷಗಳ ಸಭೆಯನ್ನ ಭ್ರಷ್ಠರ ಕೂಟ ಎಂದಿದ್ದಾರೆ. ಮಿತ್ರ ಪಕ್ಷಗಳು ಮತ್ತು ಕಾಂಗ್ರೆಸ್‌ನವರು ಭ್ರಷ್ಠರಾಗಿದ್ದರೇ..? 9 ವರ್ಷದಿಂದ ಮೋದಿ ಪ್ರಧಾನಿ ಆಗಿದ್ದಾರೆ, ಯಾಕೆ ಕ್ರಮ ಕೈಗೊಂಡಿಲ್ಲ. ವಿರೋಧಿ ಬಣ ಬಲಗೊಳ್ಳುತ್ತಿದೆ. ಮೋದಿಗೆ ಸಹಿಸಿಕೊಳ್ಳಲು ಆಗ್ತಿಲ್ಲ. ಮೋದಿ ಯಾವಾಗಲು ಅಸತ್ಯವನ್ನ ಜನರ ಮುಂದಿಡುತ್ತಾ ಬಂದಿದ್ದಾರೆ ಎಂದು ಉಗ್ರಪ್ಪ ತಿಳಿಸಿದರು.

ಸಿದ್ದು ಸಿಎಂ ಆಗಿದ್ದಕ್ಕೆ ಸೌದಿಯಿಂದ ಬಂದು ಹರಕೆ ತೀರಿಸಿದ ಅಭಿಮಾನಿ

ಸಿಎಂ ಸ್ಥಾನದಿಂದ ಇಳಿಸುವುದು ಯಾವ ವ್ಯಕ್ತಿಯ ಕೈಲಿಲ್ಲ: ಸಿದ್ದರಾಮಯ್ಯ ಅವರನ್ನು ಇಡೀ ರಾಜ್ಯದ ಜನರು ಮುಖ್ಯಮಂತ್ರಿ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಯಾವ ಒಬ್ಬ ವ್ಯಕ್ತಿಯ ಕೈಯಲ್ಲಿಲ್ಲ, ಅದು ಹೈ ಕಮಾಂಡ್‌ ನಿರ್ಧಾರ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಯುವಜನ ಕ್ರೀಡಾ ಇಲಾಖೆ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಕಾಂಗ್ರೆಸ್‌ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್‌ ನೀಡಿರುವ ಹೇಳಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

ದಲಿತರ ಜಮೀನು ಕಾಪಾಡಲು ಕಾಯ್ದೆ ಶೀಘ್ರ ತಿದ್ದುಪಡಿ: ಸಿದ್ದರಾಮಯ್ಯ

ದೇವರಾಜ ಅರಸು ನಂತರದಲ್ಲಿ ದಲಿತ-ಹಿಂದುಳಿದ ಸಮಾಜದ ದೊಡ್ಡ ನಾಯಕರಾಗಿರುವ ಸಿದ್ದರಾಮಯ್ಯ ಅವರ ಬಗ್ಗೆ ಯಾರೂ ಸಹ ಏನೋನೋ ಮಾತನಾಡಬಾರದು. ಗೆದ್ದ ಎಲ್ಲ ಶಾಸಕರಿಗೂ ಮಂತ್ರಿಯಾಗಬೇಕು ಎಂಬ ಆಸೆ ಇರುತ್ತದೆ. ಹಾಗಂತ ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. 34 ಜನರನ್ನಷ್ಟೇ ಮಂತ್ರಿಗಳನ್ನು ಮಾಡುವ ಮಿತಿಯಿದೆ. ಬಿ.ಕೆ. ಹರಿಪ್ರಸಾದ್‌ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಸಿದ್ದರಾಮಯ್ಯ ಬಗ್ಗೆ ಅವರು ಹೀಗೆ ಮಾತನಾಡಿದ್ದಾರೆ ಎಂಬುದನ್ನು ನಂಬಲಾಗದು. ಬಿ.ಕೆ. ಹರಿಪ್ರಸಾದ್‌ ಅವರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸಬಲ್ಲವರು. ಅವರ ಬಗ್ಗೆ ನನಗೂ ಅಪಾರ ಗೌರವವಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios