ಗ್ಯಾರಂಟಿ ಯೋಜನೆ ಪರಿಷ್ಕರಣೆ ಸಂಬಂಧ ಚರ್ಚೆ ನಡೆದಿಲ್ಲ: ಸಚಿವ ಮಹದೇವಪ್ಪ

ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಜನರಿಗೆ ನೀಡಿದ್ದೇವು. ನಮ್ಮ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದೇವೆ ಹೊರತು ಯಾವುದೇ ರಾಜಕೀಯ ಉದ್ದೇಶದಿಂದಲ್ಲ. ಜನರು ಸ್ವಾವಲಂಬನೆಯಿಂದ ಬದುಕಲು ಈ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ: ಸಚಿವ ಡಾ.ಎಚ್.ಸಿ. ಮಹದೇವಪ್ಪ 
 

no discussion regarding the revision of the guarantee schemes in karnataka says hc mahadevappa grg

ಮೈಸೂರು(ಆ.16): ಗ್ಯಾರಂಟಿ ಯೋಜನೆ ಪರಿಷ್ಕರಣೆ ಸಂಬಂಧ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಜನರಿಗೆ ನೀಡಿದ್ದೇವು. ನಮ್ಮ ಕಾಂಗ್ರೆಸ್ ಪಕ್ಷ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಿದ್ದೇವೆ ಹೊರತು ಯಾವುದೇ ರಾಜಕೀಯ ಉದ್ದೇಶದಿಂದಲ್ಲ. ಜನರು ಸ್ವಾವಲಂಬನೆಯಿಂದ ಬದುಕಲು ಈ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂದು ಹೇಳಿದರು.

ಚಾಮುಂಡಿಬೆಟ್ಟ ದೇವಸ್ಥಾನದ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು: ಸಂಸದ ಯದುವೀರ್ ಒಡೆಯರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತವಾಗಿ ಅಭಿಪ್ರಾಯ ಮಂಡಿಸಲು ಎಲ್ಲರಿಗೂ ಅವಕಾಶ ಇದೆ. ಅದರಂತೆ ಕೆಲವರು ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರಷ್ಟೇ. ಆದರೆ, ಗ್ಯಾರಂಟಿ ಯೋಜನೆಗಳ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅವರು ತಿಳಿಸಿದರು.

ನಾವು ರಾಜಮನೆತನದ ವಿರೋಧಿಗಳಲ್ಲ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲ ರಾಜಮನೆತನಕ್ಕೆ ತೊಂದರೆ ಕೊಡುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಾ.ಎಚ್.ಸಿ. ಮಹದೇವಪ್ಪ ಅವರು, ನಾನು ಮತ್ತು ಸಿದ್ದರಾಮಯ್ಯ ಅವರು ರಾಜಕೀಯಕ್ಕೆ ಬರುವ ಮೊದಲೇ ದೇಶದಲ್ಲಿ ರಾಜಾಡಳಿತ ರದ್ದಾಗಿತ್ತು. ಕಾನೂನು ಮತ್ತು ಸಂವಿಧಾನದಡಿಯಲ್ಲಿ ಏನು ಕೆಲಸ ಮಾಡಬೇಕು ಅದನ್ನು ನಾವು ಮಾಡುತ್ತಾ ಬಂದಿದ್ದೇವೆ. ನಾವು ಎಂದಿಗೂ ರಾಜಮನೆತನದ ವಿರೋಧಿ ಅಲ್ಲ ಎಂದು ಸ್ಪಷ್ಟಪಡಿಸಿದರು.

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆದರ್ಶಗಳನ್ನು ಪಾಲನೆ ಮಾಡುತ್ತಾ ಬಂದಿದ್ದೇವೆ. ಸರ್ಕಾರದ ಆಸ್ತಿ ಅಂದರೆ ಅದು ಸಾರ್ವಜನಿಕರ ಆಸ್ತಿ. ಈ ನಾಡಿನ ಸಮಸ್ತ ಜನರ ಆಸ್ತಿ. ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟ ಜನರ ಸ್ವತ್ತಾಗಿ, ಅವರ ಅನುಕೂಲಕ್ಕೆ ತಕ್ಕಂತೆ ಅಭಿವೃದ್ಧಿ ಮಾಡಬೇಕು ಎನ್ನುವುದು ಸರ್ಕಾರದ ನಿಲುವಾಗಿತ್ತು. ಪ್ರಾಧಿಕಾರ ರಚನೆಗೆ ಜನರ ಒತ್ತಾಯವೂ ಇತ್ತು. ಅದಕ್ಕಾಗಿ ನಮ್ಮ ಸರ್ಕಾರ ಪ್ರಾಧಿಕಾರ ರಚನೆಗೆ ತೀರ್ಮಾನ ಮಾಡಿತ್ತು. ಆದರೆ, ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು. ಅಂತಿಮವಾಗಿ ಕಾನೂನು ಏನನ್ನು ಹೇಳುತ್ತದೆ ಅದನ್ನು ಕೇಳಬೇಕು ಎಂದರು.

Latest Videos
Follow Us:
Download App:
  • android
  • ios