ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ: ಸಿ.ಟಿ.ರವಿ
ದೇಶದ ಇಷ್ಟು ವರ್ಷಗಳ ಇತಿಹಾಸದಲ್ಲಿ ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ. ಈ ಕುರಿತು ಚರ್ಚೆ ಮಾಡಲು ನಾವು ಸಿದ್ಧರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧರಿದ್ದಾರೆಯೇ ಎಂದು ಮಾಜಿ ಶಾಸಕ ಸಿ.ಟಿ.ರವಿ ಸವಾಲು ಹಾಕಿದರು.
ಮೈಸೂರು (ಏ.10): ದೇಶದ ಇಷ್ಟು ವರ್ಷಗಳ ಇತಿಹಾಸದಲ್ಲಿ ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ. ಈ ಕುರಿತು ಚರ್ಚೆ ಮಾಡಲು ನಾವು ಸಿದ್ಧರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧರಿದ್ದಾರೆಯೇ ಎಂದು ಮಾಜಿ ಶಾಸಕ ಸಿ.ಟಿ.ರವಿ ಸವಾಲು ಹಾಕಿದರು. ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಕೊಟ್ಟ ಕೊಡುಗೆ ಎಷ್ಟು? ಕಳೆದ 10 ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ ನೀಡಿದ ತೆರಿಗೆ ಪಾಲು, ಗ್ರ್ಯಾಂಟ್ ಮೂಲಕ ಎಷ್ಟು ಅನುದಾನ ನೀಡಿದೆ ಎಂಬುದರ ಕುರಿತು ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ ಎಂದರು.
ಮೋದಿ ಇತರ ಪ್ರಧಾನಿಗಳಿಗಿಂತ ಹೆಚ್ಚಿನ ಅನುದಾನವನ್ನೇ ನೀಡಿದ್ದಾರೆ. ಈ ಕುರಿತು ದಾಖಲೆಗಳನ್ನೂ ಮುಂದಿಟ್ಟಿದ್ದೇವೆ. ನಿಮ್ಮ ದೃಷ್ಟಿಯಲ್ಲಿ ಹೆಚ್ಚು ಗ್ರ್ಯಾಂಟ್ ಕೊಟ್ಟವರು, ತೆರಿಗೆ ಪಾಲು ನೀಡಿದವರು ಅನ್ಯಾಯ ಮಾಡಿದ್ದಾರೆ ಎಂಬುದಾದರೆ ಮೊದಲು ನಿಮ್ಮ ದೃಷ್ಟಿ ದೋಷ ಸರಿಪಡಿಸಬೇಕಿದೆ ಎಂದು ಅವರು ವ್ಯಂಗ್ಯವಾಡಿದರು.
ಕಾಂಗ್ರೆಸ್‌ನಿಂದ ದಲಿತರಿಗೆ ಸಾಕಷ್ಟು ಅನ್ಯಾಯ, ಅಂಬೇಡ್ಕರ್‌ಗೆ ಮೋಸ: ಕೆ.ಅನ್ನದಾನಿ
ಕೇರಳ ಹಾದಿಯಲ್ಲಿ ಕರ್ನಾಟಕ ದಿವಾಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೃಷ್ಣ ಭೈರೇಗೌಡ ಅವರ ಪ್ರಶ್ನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಉತ್ತರ ಕೊಟ್ಟಿದ್ದಾರೆ. ಆದರೆ, ಅವರು ಚರ್ಚೆ ಮಾಡದೆ ಏಕಪಾತ್ರಾಭಿನಯ ಮಾಡಿದರು. ನಾವು ಅನುದಾನ ಕೊಟ್ಟಿದ್ದು ಸುಳ್ಳಾದರೆ ಚಾಮುಂಡೇಶ್ವರಿ ಮುಂದೆ ಪ್ರಮಾಣಮಾಡಲಿ ಎಂದು ಸವಾಲು ಹಾಕಿದ್ದೆ, ಯಾರೂ ಸ್ವೀಕರಿಸಲಿಲ್ಲ. ಸಂಸತ್ತಿನಲ್ಲೇ ಸ್ಪಷ್ಟನೆ ನೀಡಿದರೂ ಕೋರ್ಟ್ ಮೊರೆ ಹೋಗಿದ್ದಾರೆ. ರಾಜ್ಯ ಸರ್ಕಾರ ಕೇರಳ ಹಾದಿಯಲ್ಲಿ ಸಾಗುತ್ತಿದ್ದು, ಅವರಂತೆ ದಿವಾಳಿಯಾಗುತ್ತಾರೆ ಎಂದರು.
ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಅಡಿಯಲ್ಲಿ ರಾಜ್ಯಕ್ಕೆ 800 ಕೋಟಿ ಮುಂಗಡ ಅನುದಾನ ನೀಡಲಾಗಿದೆ. ನೀತಿ ಸಂಹಿತೆ ಇರುವುದರಿಂದ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಿಗೂ ಪರಿಹಾರ ನೀಡಿಲ್ಲ. ಇಷ್ಟು ದಿನ ರಾಜ್ಯ ಸರ್ಕಾರ ಬಿಡುಗಡೆ ಮಾಡಿ ನಂತರ ಹೊಂದಾಣಿಕೆ ಮಾಡಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಆ ರೀತಿ ಮಾಡಿಲ್ಲ. ಬೆಲೆ ಏರಿಕೆಯಿಂದ ಬಡ್ಡಿ ರಹಿತವಾಗಿ 8 ಸಾವಿರ ಕೋಟಿ ಸಾಲ ನೀಡಿದರೂ ಮೂಲ ಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮುಖಂಡರಾದ ಮೋಹನ್, ಮಹೇಶ್ ರಾಜೇ ಅರಸ್, ಕೇಬಲ್ ಮಹೇಶ್, ದಯಾನಂದ, ಪರಮೇಶ್, ಗಿರಿಧರ್ ಮೊದಲಾದವರು ಇದ್ದರು.
ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಯನ್ನು ನಿರ್ಲಕ್ಷ್ಯಿಸಬೇಡಿ: ಸಚಿವ ಚಲುವರಾಯಸ್ವಾಮಿ
ಇವತ್ತಿನ ಕಾಂಗ್ರೆಸ್ ಕಮ್ಯುನಲ್ ಆಗಿ ಬದಲಾಗಿದ್ದು, ದೇಶದಲ್ಲಿ ಕ್ರೆಡಿಬಲಿಟಿ ಕಳೆದುಕೊಂಡು ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ. ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಎಂಬ ಕೂಗು ಎಲ್ಲೆಡೆ ಅನುರಣಿಸುತ್ತಿದೆ. ತಮಿಳುನಾಡಿನಲ್ಲೂ ಎರಡಂಕಿ ದಾಟಲಿದ್ದು, ಪರ್ಯಾಯ ರಾಜಕೀಯ ಶಕ್ತಿಯಾಗಿ ಬಿಜೆಪಿ ಬೆಳೆಯಲಿದೆ.
- ಸಿ.ಟಿ. ರವಿ, ಮಾಜಿ ಶಾಸಕ