ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮಮಂದಿರ ಉದ್ಘಾಟನೆಗೆ ಇದುವರೆಗೂ ಅಧಿಕೃತ ಆಹ್ವಾನ ಬಂದಿಲ್ಲ. ಬಂದರೆ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳ (ಡಿ.31): ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮಮಂದಿರ ಉದ್ಘಾಟನೆಗೆ ಇದುವರೆಗೂ ಅಧಿಕೃತ ಆಹ್ವಾನ ಬಂದಿಲ್ಲ. ಬಂದರೆ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳ ಏರ್‌ಸ್ಟ್ರಿಪ್‌ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದ ಮೇಲೆ ನಿರ್ಧಾರ ಮಾಡೋಣ ಎಂದಷ್ಟೇ ಹೇಳಿದರು.
ಪೌರ ಕಾರ್ಮಿಕರ ಬೇಡಿಕೆಗೆ ಸ್ಪಂದಿಸಲು ಸಿಎಂಗೆ ಮನವಿ: ಮರಣ ಹೊಂದಿದ ನೇರ ಪಾವತಿ ಪೌರ ಕಾರ್ಮಿಕರ ಕುಟುಂಬದವರಿಗೆ ಅನುಕಂಪದ ಉದ್ಯೋಗ ನೀಡಿಕೆ, ಪಿಂಚಣಿ ವ್ಯವಸ್ಥೆ ಮೊದಲಾದ ಸೌಲಭ್ಯ ಕಲ್ಪಿಸಬೇಕು ಎಂದು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮೇಲುಸ್ತುವಾರಿ ಸಮಿತಿಯ ಮಾಜಿ ಸದಸ್ಯ ಎಂ.ವಿ. ವೆಂಕಟೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ರಾಜ್ಯಾದ್ಯಂತ ನೇರ ಪಾವತಿಯಲ್ಲಿ ಮರಣ ಹೊಂದಿದ ಪೌರಕಾರ್ಮಿಕರ ಕುಟುಂಬಸ್ಥರಿಗೆ ಉದ್ಯೋಗ ಮತ್ತು ಹತ್ತು ಲಕ್ಷ ಪರಿಹಾರ ನೀಡಬೇಕು. ರಾಜ್ಯಾದ್ಯಂತ ನಿವೃತ್ತಿ ಹೊಂದಿದ ಪೌರ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಅಥವಾ ನಗರ ಸ್ಥಳೀಯ ಸಂಸ್ಥೆ ವತಿಯಿಂದ ಪ್ರತಿ ತಿಂಗಳಿಗೆ 10 ಸಾವಿರ ಪಿಂಚಣಿ ರೂಪದಲ್ಲಿ ನೀಡಬೇಕು. ನಗರ ಪಾಲಿಕೆಯಲ್ಲಿ ಸುಮಾರು ಐದಾರು ವರ್ಷಗಳಿಂದ ಸೇವೆ ಸಲ್ಲಿಸಿರುವವರಲ್ಲಿ ಕೈಬಿಟ್ಟಿರುವ 78 ಪೌರಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಿಂಧನೂರು ತಾಲೂಕನ್ನು ಸಂಪೂರ್ಣ ನೀರಾವರಿಯನ್ನಾಗಿಸಲು ಬದ್ಧ: ಸಿದ್ದರಾಮಯ್ಯ
ಪೌರಕಾರ್ಮಿಕರ ಅವಲಂಬಿತರ ಕಲ್ಯಾಣಕ್ಕಾಗಿ ಪೌರಕಾರ್ಮಿಕ ಮಂಡಲಿ ರಚಿಸಬೇಕು. ಕಸ ಸಾಗಾಣಿಕೆ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಐಪಿಡಿ ಸಾಲಪ್ಪ ವರದಿ ಅನುಷ್ಠಾನಗೊಳಿಸಬೇಕು. ರಾಜ್ಯಾದ್ಯಂತ ನಗರ ಪಾಲಿಕೆಗಳಲ್ಲಿನ 544 ಒಳಚರಂಡಿ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಅವರು ಮನವಿ ಮಾಡಿದರು.