ಪ್ರಧಾನಿ ಮೋದಿ ಸಮ್ಮುಖ ಯಾವ ನಾಯಕರೂ ಪಕ್ಷ ಸೇರೋಲ್ಲ: ಕೇಂದ್ರ ಸಚಿವ ಜೋಶಿ
ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯ ಭೇಟಿ ಕಾರ್ಯಕ್ರಮದಲ್ಲಿ ಯಾವುದೇ ನಾಯಕರ ಪಕ್ಷ ಸೇರ್ಪಡೆ ಇರುವುದಿಲ್ಲ ಎಂದು ಸಂಸದೀಯ ಮತ್ತು ಗಣಿ ಇಲಾಖೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದರು.
ಮದ್ದೂರು (ಮಾ.03): ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯ ಭೇಟಿ ಕಾರ್ಯಕ್ರಮದಲ್ಲಿ ಯಾವುದೇ ನಾಯಕರ ಪಕ್ಷ ಸೇರ್ಪಡೆ ಇರುವುದಿಲ್ಲ ಎಂದು ಸಂಸದೀಯ ಮತ್ತು ಗಣಿ ಇಲಾಖೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದರು. ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ಮಾ.12ರಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಬಿಜೆಪಿ ಸಮಾವೇಶದಲ್ಲಿ ಸಂಸದೆ ಸುಮಲತಾ ಸೇರಿದಂತೆ ಯಾವುದೇ ಪಕ್ಷಗಳ ನಾಯಕರು ಪಕ್ಷ ಸೇರ್ಪಡೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಯಕರ ಪಕ್ಷ ಸೇರ್ಪಡೆ ವಿಚಾರ ಏನಿದ್ದರೂ ಆಯಾ ರಾಜ್ಯಾಧ್ಯಕ್ಷರು ಮತ್ತು ಸಚಿವರ ಸಮ್ಮುಖದಲ್ಲಿ ಮಾತ್ರ ಸೀಮಿತಗೊಳಿಸಲಾಗಿದೆ ಎಂದರು. ಜಿಲ್ಲೆಗೆ ನರೇಂದ್ರ ಮೋದಿ ಅವರು ಭೇಟಿ ನೀಡುವ ವೇಳೆ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಪಕ್ಷ ಸೇರ್ಪಡೆ ಆಗುತ್ತಾರೆ ಎಂಬ ಊಹಾಪೋಹಗಳಿಗೆ ಪಕ್ಷದ ನಾಯಕರು ಹಾಗೂ ಮುಖಂಡರ ಸಮ್ಮುಖದಲ್ಲೇ ತೆರೆ ಎಳೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ಸಮ್ಮುಖದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಯಾಗುವುದಿಲ್ಲ. ಸೂಕ್ತ ಸಮಯದಲ್ಲಿ ನಿಮಗೆ ಎಲ್ಲಾ ವಿಷಯಗಳನ್ನು ತಿಳಿಸಲಾಗುತ್ತದೆ ಎಂದರು.
ಸಿದ್ದು, ಡಿಕೆಶಿ ಪ್ರಚಾರದಿಂದ ಕಾಂಗ್ರೆಸ್ ಠೇವಣಿ ಹೋಗುತ್ತೆ: ಕೆ.ಎಸ್.ಈಶ್ವರಪ್ಪ
ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ 40 ಲಕ್ಷ ರು. ಲಂಚದ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದ ಅವರು, ಕ್ರೀಡಾ ಸಚಿವ ನಾರಾಯಣ ಗೌಡ ಕಾಂಗ್ರೆಸ್ ಸೇರುತ್ತಾರೆಂಬ ಸುದ್ದಿಗಾರರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಿದೆ ವೇದಿಕೆಯಿಂದ ನಿರ್ಗಮಿಸಿದರು.
ಕೇಸರಿ ಶಾಲು ನೀಡಿ ಸುಮಲತಾಗೆ ಸ್ವಾಗತ: ಬಿಜೆಪಿ ಪಾಳಯದಲ್ಲಿ ಸಂಸದೆ ಸುಮಲತಾ ಪ್ರತ್ಯಕ್ಷ, ಕೇಸರಿ ಶಾಲು ನೀಡಿ ಸ್ವಾಭಿಮಾನಿ ಸಂಸದೆಗೆ ಕೇಸರಿ ನಾಯಕರಿಂದ ಸ್ವಾಗತ, ಕೇಸರಿ ಶಾಲು ಧರಿಸದೆ ಕೈಯಲ್ಲಿ ಹಿಡಿದ ಸಂಸದೆ, ಮೋದಿ ಭೇಟಿ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಭಾಗಿ..!
ಮಾ.12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಮಂಡ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಪರಿಶೀಲನೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಮಂಡ್ಯಕ್ಕೆ ಆಗಮಿಸಿದ್ದರು. ಸಚಿವರಾದ ಕೆ.ಸಿ.ನಾರಾಯಣಗೌಡ, ಕೆ.ಗೋಪಾಲಯ್ಯ, ಸಂಸದೆ ಸುಮಲತಾ, ಮೈಸೂರು ಸಂಸದ ಪ್ರತಾಪ್‌ಸಿಂಹ ಸಾಥ್ ನೀಡಿದ್ದರು. ಪಕ್ಷ ಸೇರ್ಪಡೆ ಬಗ್ಗೆ ಜನಾಭಿಪ್ರಾಯ ಕೇಳುತ್ತೇನೆ. ಯಾವ ಪಕ್ಷ ಸೇರಬೇಕೆಂಬ ಬಗ್ಗೆ ನಂತರ ನಿರ್ಧರಿಸುತ್ತೇನೆ ಎಂದು ಹೇಳುವ ಸಂಸದೆ ಸುಮಲತಾ ಅಂಬರೀಶ್ ಶುಕ್ರವಾರ ಕೇಸರಿ ನಾಯಕರೊಂದಿಗೆ ಕಾಣಿಸಿಕೊಳ್ಳುವುದರೊಂದಿಗೆ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದರು.
ಕಾಂಗ್ರೆಸ್ ಅಂದರೆ ಜಾತಿ ಮಧ್ಯೆ ಒಡೆದಾಳುವ ಪಕ್ಷ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕಾರ್ಯಕ್ರಮ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಡೆಸಿದ ಅಧಿಕಾರಿಗಳ ಸಭೆ, ಕಾರ್ಯಕರ್ತರ ಸಭೆಯಲ್ಲೂ ಸಂಸದೆ ಸುಮಲತಾ ಭಾಗವಹಿಸಿದ್ದು ವಿಶೇಷವಾಗಿತ್ತು. ಬಿಜೆಪಿ ಸಭೆಯಲ್ಲಿ ಭಾಗಿಯಾದ ಸಂಸದೆ ಸುಮಲತಾ ಅವರಿಗೆ ಕಾರ್ಯಕರ್ತರು ಕೇಸರಿ ಟವಲ್ ನೀಡಿ ಸ್ವಾಗತಿಸಿದರು. ಟವಲ್‌ನ್ನು ಮೈಮೇಲೆ ಧರಿಸದೆ ಕೈಯಲ್ಲೇ ಹಿಡಿದು ಕುಳಿತರು. ಪಕ್ಷೇತರ ಸಂಸದೆಯಾಗಿರುವ ಸುಮಲತಾ ಬಿಜೆಪಿ ಸೇರುವ ಬಗ್ಗೆ ಗುಸು ಗುಸು ಚರ್ಚೆಗೆ ಇಂದಿನ ಅವರ ನಡೆ ಸಾಕಷ್ಟುಪುಷ್ಠಿಯನ್ನು ನೀಡುವಂತೆ ಮಾಡಿದೆ.