Asianet Suvarna News Asianet Suvarna News

Karnataka BJP: ಇದೀಗ ಬಂದ ಸುದ್ದಿ, ಬೊಮ್ಮಾಯಿ ನಾಯಕತ್ವ ಬದಲಾವಣೆ ಬಗ್ಗೆ ಉಸ್ತುವಾರಿ ಸ್ಪಷ್ಟನೆ

* ಬೊಮ್ಮಾಯಿ ನಾಯಕತ್ವ ಬದಲಾವಣೆ ಸುದ್ದಿ
* ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಬಿಜೆಪಿ ಉಸ್ತುವಾರಿ
* ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

No leadership change Bommai will complete term as chief minister Says Arun Singh rbj
Author
Bengaluru, First Published Dec 27, 2021, 10:24 PM IST

ಹುಬ್ಬಳ್ಳಿ, (ಡಿ.27): ಸಂಕ್ರಾಂತಿ(Sankranti) ಬಳಿಕ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ (Basavaraj Bommai) ನಾಯಕತ್ವ ಬದಲಾವಣೆ ಆಗುತ್ತೆ ಎನ್ನುವ ಸುದ್ದಿ ಹಬ್ಬಿದೆ. ಇದೀಗ ಇದಕ್ಕೆ ಕರ್ನಾಟಕ ಬಿಜೆಪಿ ಉಸ್ತುವಾರಿ(Karnataka BJP Incharge) ಸ್ಪಷ್ಟನೆ ಕೊಟ್ಟಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸ್ತೇವೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಸ್ಪಷ್ಟಪಡಿಸಿದ್ದಾರೆ.

Karnataka Politics:ಮಹತ್ವದ ಬೆಳವಣಿಗೆ, ಕರ್ನಾಟಕದತ್ತ ಬಿಜೆಪಿ ಹೈಕಮಾಂಡ್

ಡಿಸೆಂಬರ್ 28 ಮತ್ತು 29ರಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ (BJP Karyakarini Meaning) ನಿಮಿತ್ತ ಹುಬ್ಬಳ್ಳಿಗೆ(Hubballi) ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ, ಅದೆಲ್ಲ ಸುಳ್ಳು ಸುದ್ದಿ.  ಬೊಮ್ಮಾಯಿ ಅತ್ಯಂತ ಪ್ರಾಮಾಣಿಕತೆಯಿಂದ ಕೆಲಸ ಮಾಡ್ತಿದ್ದಾರೆ. ಅವರ ಮೇಲೆ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆರೋಪವಿಲ್ಲ. 150ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ. ವಿಶ್ವಾಸ ವ್ಯಕ್ತಪಡಿಸಿದರು. 

ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸ್ತಿಲ್ಲ. ಹುಬ್ಬಳ್ಳಿಯಲ್ಲಿ ನಾಳೆ(ಮಂಗಳವಾರ), ನಾಡಿದ್ದು(ಬುಧವಾರ) ಬಿಜೆಪಿ ಕಾರ್ಯಕಾರಿಣಿ ಸಭೆಯಿದೆ. ಸರ್ಕಾರದಿಂದ ಹೊಸ ಕೊವಿಡ್ ಮಾರ್ಗಸೂಚಿ ಬಿಡುಗಡೆ ಹಿನ್ನೆಲೆ ರಾಜ್ಯ ಸರ್ಕಾರದ ನಿಯಮದಂತೆ 300ಕ್ಕಿಂತ ಹೆಚ್ಚು ಸೇರುವಂತಿಲ್ಲ. ಹಾಗಾಗಿ ನಡ್ಡಾ ಸ್ವಾಗತಕ್ಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ಅರುಣ್ ಸಿಂಗ್ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಕಾರಣಿ
ಹೈಕಮಾಂಡ್ ರಾಜ್ಯಕ್ಕೆ ಬರುವ ಮುನ್ನ ಪೂರ್ವ ತಯಾರಿಗಾಗಿ ಡಿಸೆಂಬರ್ 28 ಮತ್ತು 29ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ, ಮುಂದೆ ಬರಲಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆಯೂ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಪ್ರಮುಖವಾಗಿ ಈ ಕಾರ್ಯಕಾರಿಣಿಯಲ್ಲಿ ಮೂಲಕ ರಾಜ್ಯದಲ್ಲಿ ಸದ್ಯ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ವಿಷಯಕ್ಕೆ ಸಬಂಧಿಸಿದಂತೆ ಸ್ಪಷ್ಟ ಸಂದೇಶ ನೀಡುವ ಸಾಧ್ಯತೆಗಳಿವೆ.

ಜನವರಿಯಲ್ಲಿ ರಾಜ್ಯಕ್ಕೆ ನಡ್ಡಾ, ಶಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಕರ್ನಾಟಕ ಪ್ರವಾಸ ಕೈಗೊಂಡಿರುವುದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಅಮಿತ್ ಶಾ ಅವರು ಜನವರಿ 8 ಮತ್ತು 9ರಂದು ಎರಡು ದಿನಗಳ ಬೆಂಗಳೂರಿನಲ್ಲೇ ಠಿಕಾಣಿ ಹೂಡಲಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಜನವರಿ 9ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಡ್ಡಾಗಿಂತ ಒಂದು ದಿನ ಮೊದಲೇ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ಪಕ್ಷದ ಪದಾಧಿಕಾರಿಗಳು, ಶಾಸಕರು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಬೊಮ್ಮಾಯಿ ನೇತೃತ್ವದಲ್ಲೇ ಎಲೆಕ್ಷನ್‌ ಎಂದಿದ್ದ ಶಾ
ಹೌದು..ಅಮಿತ್ ಶಾ ಅವರು ದಾಣಗೆರೆಗೆ ಆಗಮಿಸಿದ್ದ ವೇಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ದರು. ಅಮಿತ್‌ ಶಾ ನೀಡಿದ ಹೇಳಿಕೆಗೆ  ಭಾರೀ ಚರ್ಚೆಗೆ ಗ್ರಾಸವಾಗಿತ್ತು, ಯಾಕೆಂದರೆ ಚುನಾವಣೆ ಹಾಗೂ ಪ್ರಮುಖ ನಿರ್ಧಾರಗಳ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ತೆಗೆದುಕೊಳ್ಳಬಹುದು ಅಂದುಕೊಂಡಿದ್ದ ರಾಜ್ಯ ಬಿಜೆಪಿಯಲ್ಲಿ ಇದು ತಲ್ಲಣ ಸೃಷ್ಟಿಸಿತ್ತು. ಆದ್ರೆ, ಇದೀಗ ಏಕಾಏಕಿ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿವೆ.

Follow Us:
Download App:
  • android
  • ios