ಎದುರಾಳಿ ಯಾರೇ ಆದರೂ ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ: ಬಾಲಚಂದ್ರ ಜಾರಕಿಹೊಳಿ

ಮೇ.10ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್‌ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. 

No matter who the opponent is dont let it bother you Says Balachandra Jarkiholi gvd

ಗೋಕಾಕ (ಏ.16): ಮೇ.10ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್‌ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯ​ರ್‍ಸ್ ಸಭಾಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮತಗಟ್ಟೆಗಳ ಮೂಲಕ ಕೆಲಸ ನಿರ್ವಹಿಸಿದರೆ ನಮ್ಮ ಚುನಾವಣೆಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದರು.

2019ರಲ್ಲಿ ನಡೆದ ಗೋಕಾಕ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಕ್ಷೇತ್ರದ ಸುಮಾರು ಸಾವಿರ ಜನರನ್ನು ಮತಗಟ್ಟೆಗಳ ಪ್ರಮುಖರನ್ನಾಗಿ ನಿಯೋಜಿಸಿ ರಮೇಶ ಜಾರಕಿಹೊಳಿ ಅವರ ಗೆಲುವಿಗೆ ಕಾರಣಿಕರ್ತರಾಗಿದ್ದಾರೆ. ಅದೇ ಮಾದರಿಯಲ್ಲಿ ನಾವು ಚುನಾವಣೆಯನ್ನು ಎದುರಿಸಬೇಕಾಗಿದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಬೀಳಲು ಅನುಕೂಲವಾಗುತ್ತದೆ. ಪ್ರತಿ ಮತಗಟ್ಟೆಯಿಂದ 15 ರಿಂದ 20 ಜನ ಪ್ರಮುಖರನ್ನು ನಿಯೋಜಿಸಿದರೇ ಪ್ರಚಾರಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ. ಪೇಜ್‌ ಪ್ರಮುಖರ ಯಾದಿಯನ್ನು ಸಹ ಅತೀ ಬೇಗನೆ ಸಿದ್ಧಪಡಿಸುವಂತೆ ತಿಳಿಸಿದರು.

ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತದಿಂದ ಜನರು ಬೇಸತ್ತಿದ್ದಾರೆ: ಸಿದ್ದರಾಮಯ್ಯ

ಈ ಸಾರ್ವತ್ರಿಕ ಚುನಾವಣೆಯನ್ನು ನಾವು ಅಧಿಕ ಅಂತರದಲ್ಲಿ ಗೆಲ್ಲಬೇಕಾಗಿದೆ. ಕಾರ್ಯಕರ್ತರು ತಮ್ಮ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು 20 ದಿನಗಳವರೆಗೆ ನಮಗಾಗಿ ನಿಮ್ಮ ಸಮಯವನ್ನು ಮೀಸಲಿಡಬೇಕು. ಎದುರಾಳಿ ಅಭ್ಯರ್ಥಿ ಯಾರೇ ಆದರೂ ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ಕೇವಲ ಐತಿಹಾಸಿಕ ಜಯ ಒಂದೇ ನಿಮ್ಮ ಮುಂದಿರಲಿ. ಆ ಗುರಿಯನ್ನು ತಲುಪಲು ಮತದಾರರ ಮನೆ ಮನೆಗೆ ತೆರಳಿ ಬಿಜೆಪಿ ಕಾರ್ಯಕ್ರಮಗಳ ಯೋಜನೆಯನ್ನು ಪ್ರಚಾರಪಡಿಸಬೇಕು ಎಂದರು.

ಈಗಾಗಲೇ ಕೆಲವು ಎಲೆಕ್ಟ್ರಾನಿಕ್ಸ್‌ ಮಾಧ್ಯಮಗಳು ಚುನಾವಣೆಯ ಸಮೀಕ್ಷೆಗಳನ್ನು ಮಾಡಿವೆ. ಅದರಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳನ್ನು ತೋರಿಸಿದ್ದಾರೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ತಿಳಿಸಬೇಕಾಗಿದೆ. ನಾನು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಸಹ ಜನರಿಗೆ ಮನವರಿಕೆ ಮಾಡಿಕೊಡಲು ಕಾರ್ಯಕರ್ತರಿಗೆ ತಿಳಿಸಿದರು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ವಿಸ್ತಾರಕ ವೆಂಕಟ ಲಾಳಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮತಗಟ್ಟೆಗಳ ಪ್ರಮುಖರು ಹಾಗೂ ಕ್ಷೇತ್ರದ ಸಾವಿರಾರು ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.

ಮರಗಳ್ಳರ ಗುಂಡೇಟಿಗೆ ಬಲಿಯಾದ್ರಾ ಉದ್ಯಮಿ: ಮರಗಳ್ಳತನವನ್ನು ಪ್ರಶ್ನಿಸಿದ್ದೇ ಕಾರಣವಾಯಿತಾ?

ತುಕ್ಕಾನಟ್ಟಿ, ಹಳ್ಳೂರ, ವಡೇರಹಟ್ಟಿ, ಮೆಳವಂಕಿ, ಕೌಜಲಗಿ, ಯಾದವಾಡ ಜಿಲ್ಲಾ ಪಂಚಾಯತಗಳು, ಮೂಡಲಗಿ ಪುರಸಭೆ, ನಾಗನೂರ, ಕಲ್ಲೋಳಿ, ಅರಭಾವಿ ಪಟ್ಟಣ ಪಂಚಾಯತಿಗಳ ವ್ಯಾಪ್ತಿಯ ಎಲ್ಲ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಭೆಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ನಡೆಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios