ಇದೇ ಮೊದಲ ಬಾರಿಗೆ ಶಾಸಕರಾದವರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್‌ ಶಾಸಕರ ಪೈಕಿ ಕೆಲವರು ಹೈಕಮಾಂಡ್‌ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು

ಕಾರ್ಕಳ: ಇದೇ ಮೊದಲ ಬಾರಿಗೆ ಶಾಸಕರಾದವರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮೊದಲ ಬಾರಿ ಶಾಸಕರಾದವರು ಮಂತ್ರಿಯಾಗಬೇಕು ಎಂದು ಬೇಡಿಕೆ ಇಟ್ಟಿರುವ ಬಗ್ಗೆ ಹಾಗೂ ಈ ಸಂಬಂಧ ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್‌ ಶಾಸಕರ ಪೈಕಿ ಕೆಲವರು ಹೈಕಮಾಂಡ್‌ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಶಾಸಕರು ತಮ್ಮ ಆಸೆ ವ್ಯಕ್ತಪಡಿಸುವುದು ತಪ್ಪಲ್ಲ. ಸಚಿವ ಸ್ಥಾನ ನೀಡಿ ಎಂದು ಅವರು ಕೇಳುತ್ತಿರುವುದರಲ್ಲಿ ಯಾವುದೇ ತಪ್ಪಿಲ್ಲ.

ಎಲ್ಲಾ ಶಾಸಕರಿಗೂ ತಾವು ಸಚಿವರಾಗಬೇಕು ಎಂಬ ಆಸೆ ಇದ್ದೇ ಇರುತ್ತದೆ

ಎಲ್ಲಾ ಶಾಸಕರಿಗೂ ತಾವು ಸಚಿವರಾಗಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅದು ಸಹಜ. ಇದರಲ್ಲಿ ತಪ್ಪೇನಿಲ್ಲ. ಆದರೆ, ಮೊದಲ ಬಾರಿಯ ಶಾಸಕರಿಗೆ ಮಂತ್ರಿ ಸ್ಥಾನ ನೀಡಬಾರದು ಎಂಬ ನಿರ್ಣಯ ಕೈಗೊಂಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ಸೂಚನೆ ಇದೆ. ಹೈಕಮಾಂಡ್‌ ಸೂಚನೆಗಳನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ ಮಾತನಾಡುವುದಿಲ್ಲ

ಇದೇ ವೇಳೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆಪ್ತ ಬಣದ ಕೆಲ ಶಾಸಕರು ಒಂದು ವಾರ ಡೆಡ್‌ಲೈನ್‌ ಕೊಟ್ಟು, ನಂತರ ಹೈಕಮಾಂಡ್ ಭೇಟಿಗೆ ಸಜ್ಜಾಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ನಾನಿಲ್ಲಿ ರಾಜಕೀಯ ಮಾತನಾಡುವುದಿಲ್ಲ. ಹೈಕಮಾಂಡ್ ನಾಯಕರು ಹೇಗೆ ಹೇಳುತ್ತಾರೋ, ಹಾಗೆ ಕೇಳುತ್ತೇವೆ ಎಂದರು.